ಗೊಂದಲ ನಿವಾರಿಸಿ ಮೀಸಲಾತಿ ಪ್ರಮಾಣ ಏರಿಸಲು ಆಗ್ರಹ

3 years ago

#Demand #remove #confusion #increase #reservation #Castecensus #Castesurvey #belagavi #session #SDPI

ಹುಬ್ಬಳ್ಳಿ: ಬೆಳಗಾವಿ ಅಧಿವೇಶನದಲ್ಲಿ ಕಾಂತರಾಜ್ ಆಯೋಗದ ವರದಿ ಬಿಡುಗಡೆ, ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಹಾಗು 2B ಮೀಸಲಾತಿಯ ಗೊಂದಲ ನಿವಾರಣೆ ಮಾಡಿ ಮೀಸಲಾತಿ ಪ್ರಮಾಣವನ್ನು ಶೇ.8%ಕ್ಕೆ ಏರಿಸಲು ಆಗ್ರಹಿಸಿ SDPI ವತಿಯಿಂದ ನಿರ್ಣಯ ಕೈಗೊಳ್ಳಲಾಗಿದೆ.

ಜಿಲ್ಲಾಧ್ಯಕ್ಷರಾದ ಮಕ್ತುಮ್ ಹುಸೇನ್ ಹೊಸಮನಿ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆಯವರ ಸಮ್ಮುಖದಲ್ಲಿ ಹುಬ್ಬಳ್ಳಿ-ಧಾರವಾಡ ಜಿಲ್ಲಾಸಮಿತಿ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳು ಇಂತಿವೆ.

ಕಾಂತರಾಜು ಆಯೋಗದ ವರದಿಯನ್ನು ಸಾರ್ವಜನಿಕಗೊಳಿಸಿ, ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡಲು ಹಾಗೂ 2ಬಿ ಮೀಸಲಾತಿ ಗೊಂದಲ ನಿವಾರಿಸಿ ಮರುಸ್ತಾಪಿಸಲು ಆಗ್ರಹಿಸಿ ಬೆಳಗಾವಿ ಅಧಿವೇಶನದಲ್ಲಿ ಸರ್ಕಾರವನ್ನು ಒತ್ತಾಯಪಡಿಸಲು ಕೋರಿ ಧಾರವಾಡ ಜಿಲ್ಲೆಯ ವಿವಿಧ ಶಾಸಕರುಗಳಿಗೆ ಬೇಟಿ ಮಾಡಿ ಡಿಸೆಂಬರ್ 4 ರ್ ಒಳಗೆ ಮನವಿ ಪತ್ರ ಸಲ್ಲಿಸಲು ನಿರ್ಣಯವನ್ನು ಕೈಗೊಳ್ಳಲಾಯಿತು.

ಸಾಮಾಜಿಕ ನ್ಯಾಯದ ನೆಲೆಗಟ್ಟಿನಲ್ಲಿ, ನಾಡಿನ ಸಮಸ್ತ ಪ್ರಜೆಗಳಿಗೂ ಸಮಾನ ಅವಕಾಶ, ಹಕ್ಕು, ಅಧಿಕಾರ ಮತ್ತು ಆಸ್ತಿ ಹಂಚಿಕೆಯಾಗಬೇಕು ಎನ್ನುವುದು ಸಂವಿಧಾನದ ಆಶಯವಾಗಿರುತ್ತದೆ. ಅದೇ ನಿಟ್ಟಿನಲ್ಲಿ ಎಲ್ಲರಿಗೂ ಸಮಾನ ಹಕ್ಕು, ಅಧಿಕಾರ ಮತ್ತು ಅವಕಾಶಗಳು ಸಿಗಬೇಕೆನ್ನುವ ಉದ್ದೇಶದಿಂದಲೇ, ರಾಜ್ಯದ ಎಲ್ಲ ಜಾತಿ ಸಮುದಾಯಗಳ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ಮಾಹಿತಿಯನ್ನು ಅಂಕಿ ಅಂಶಗಳ ಸಮೇತವಾಗಿ ತಿಳಿದುಕೊಳ್ಳಲು ರಚನೆಯಾಗಿದ್ದ ಕಾಂತರಾಜ್ ಆಯೋಗವನ್ನು ರಚಿಸಲಾಗಿತ್ತು. ಆಯೋಗವು ವರ್ಷಗಟ್ಟಲೇ ರಾಜ್ಯದಾದ್ಯಂತ ಸಮೀಕ್ಷೆ ನಡೆಸಿ, ಜಾತಿ ಮತ್ತಿತರ ಕಾರಣಗಳಿಗಾಗಿ ತಮ್ಮ ಹಕ್ಕು ಅಧಿಕಾರಗಳಿಂದ ವಂಚಿತರಾಗಿ, ಹಲವು ರೀತಿಯಲ್ಲಿ ಶೋಷಣೆಗೊಳಗಾಗಿರುವ ಜಾತಿ ಸಮುದಾಯಗಳ ವಾಸ್ತವ ಸ್ಥಿತಿಗಳ ಬಗ್ಗೆ ಅಂಕಿ ಅಂಶಗಳ ಸಮೇತವಾಗಿ ವರದಿ ನೀಡಿರುತ್ತದೆ ಎಂದು ಆಯೋಗದ ಮುಖ್ಯಸ್ಥರೇ ಹೇಳಿಕೊಂಡಿದ್ದಾರೆ.

167ಕೋಟಿ ರೂಪಾಯಿ ಖರ್ಚು ಮಾಡಿ ಸಿದ್ಧಪಡಿಸಲಾಗಿರುವ ಕಾಂತರಾಜ್ ಆಯೋಗದ ವರದಿಯನ್ನು ಸ್ವೀಕರಿಸಲು ಸರ್ಕಾರ ಸಲ್ಲದ ನೆಪ ಹೇಳಿಕೊಂಡು ಬರಲಾಗುತ್ತಿದೆ. ಇನ್ನೂ ತಡ ಮಾಡದೆ ಬೆಳಗಾವಿ ಅಧಿವೇಶನದಲ್ಲಿ ಸರ್ಕಾರ ಈ ಬಗ್ಗೆ ಸ್ಪಷ್ಟ ತೀರ್ಮಾನ ಕೈಗೊಳ್ಳಬೇಕೆಂದು ಸಭೆಯು ಅಭಿಪ್ರಾಯಪಟ್ಟಿತು.

ಪಕ್ಷದ ವತಿಯಿಂದ ರಾಜ್ಯಾದ್ಯಂತ ಈ ತಿಂಗಳು ನಡೆಯುತ್ತಿರುವ ನಿಧಿ ಸಂಗ್ರಹ ಅಭಿಯಾನದ ಅವಲೋಕನ ನಡೆಸಿ ರಾಜ್ಯಾದ್ಯಂತ ದಾನಿಗಳು ಹಸಿವು ಮತ್ತು ಭಯ ಮುಕ್ತ ಚಳವಳಿಗೆ ಮುಕ್ತ ಮನಸ್ಸಿನಿಂದ ತನು ಮನ ಧನಗಳಿಂದ ಬೆಂಬಲಿಸುತ್ತಿದ್ದು, ಬಾಕಿ ಉಳಿದಿರುವ ದಿನಗಳಲ್ಲಿ ಪ್ರತಿದಿನ ಜಿಲ್ಲಾ ಸಮಿತಿಸದಸ್ಯರ ತಂಡಗಳನ್ನು ರಚಿಸಿಕೊಂಡು ದಾನಿಗಳನ್ನು ಬೇಟಿ ಮಾಡಿ ನಿಧಿ ಸಂಗ್ರಹ ಅಭಿಯಾನ ವನ್ನು ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಸಲು ತೀರ್ಮಾನಿಸಲಾಗಿದೆ.

Leave a Reply