ಕಿದ್ವಾಯಿ ಕ್ಯಾನ್ಸರ್‌ ಮತ್ತು ಜಯದೇವ ಹೃದ್ರೋಗ ಆಸ್ಪತ್ರೆ ಆರಂಭಿಸುವಂತೆ ಒತ್ತಾಯ

3 hours ago

ದ.ಕ ಜಿಲ್ಲೆಯಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ, ಜಯದೇವ ಹೃದ್ರೋಗ ಆಸ್ಪತ್ರೆಗಳ ಘಟಕವನ್ನು ಶೀಘ್ರ ಆರಂಬಿಸಲು ಒತ್ತಾಯಿಸಿ ಹಕ್ಕೊತ್ತಾಯ ಧರಣಿ

ಮಂಗಳೂರು: ಸರಕಾರಿ ಆಸ್ಪತ್ರೆಗಳನ್ನು ಬಲಪಡಿಸಿ, ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸಬೇಕು, ಜಯದೇವ ಹೃದ್ರೋಗ ಆಸ್ಪತ್ರೆ ಹಾಗೂ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಗಳ ಘಟಕಗಳ ಸರಕಾರಿ ಸೇವೆಯನ್ನು ತಕ್ಷಣ  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರಂಬಿಸಬೇಕು ಎಂದು ಒತ್ತಾಯಿಸಿ  ಮಂಗಳೂರಿನ ಮಿನಿವಿದಾನ ಸೌದದ ಎದುರು  CPIM ಮಂಗಳೂರು ನಗರ ದಕ್ಷಿಣ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ CPIM ಪಕ್ಷದ ರಾಜ್ಯ ಸಮಿತಿ ಸದಸ್ಯ ಸುನಿಲ್ ಕುಮಾರ್ ಬಜಾಲ್,  ಸಾರ್ವಜನಿಕರಿಗೆ ಹೆಚ್ಚಿನ ಆರೋಗ್ಯ ಸೇವೆ ಒದಗಿಸುವ  ಖಾಸಗೀ ಆಸ್ಪತ್ರೆಗಳೊಂದಿಗೆ ಕರಾರು ಒಪ್ಪಂದ ಮಾಡಿಕೊಳ್ಳಲಾಗಿರುವ ರಾಜ್ಯ ಸರ್ಕಾರದ ನಡೆಯನ್ನು ಟೀಕಿಸಿದರು.

ಇದು ಸರಕಾರಿ ಆಸ್ಪತ್ರೆಗಳನ್ನು ಸಂಪೂರ್ಣವಾಗಿ ಕತ್ತು ಹಿಸುಕಿ ಸಾಯಿಸಿ ಖಾಸಗೀ ಆಸ್ಪತ್ರೆಗಳಿಗೆ ಲಾಭಿ ಮಾಡಿಕೊಡುವ ಉದ್ದೇಶ ಈ ತೀರ್ಮಾನದ ಹಿಂದೆ ಅಡಗಿದೆ ಎಂದು ಆರೋಪಿಸಿದರು. ಆರೋಗ್ಯ ಇಲಾಖೆ ಈ ಒಪ್ಪಂದವನ್ನು ಕೂಡಲೇ ರದ್ದುಗೊಳಿಸಿ ಸರಕಾರಿ ಆಸ್ಪತ್ರೆಗಳನ್ನು ಬಲಬಡಿಸಲು ಈ ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

CPIM ಪಕ್ಷ ಕಳೆದ ಹಲವಾರು ವರುಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ ಆಸ್ಪತ್ರೆಗಳನ್ನು ಬಲಪಡಿಸಿ ಖಾಸಗೀ ಆಸ್ಪತ್ರೆಗಳನ್ನು ನಿಯಂತ್ರಿಸಲು, ಜನಸಂಖ್ಯೆಗೆ ಅನುಗುಣವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆಸ್ಪತ್ರೆ, ತಾಲೂಕು ಆಸ್ಪತ್ರೆಗಳನ್ನು ಸ್ಥಾಪಿಸಿ, ಜಿಲ್ಲೆಗೊಂದು ಮೆಡಿಕಲ್ ಕಾಲೇಜು ನಿರ್ಮಿಸಬೇಕೆಂದು ಒತ್ತಾಯಿಸುವ ಚಳುವಳಿ ರೂಪಿಸಿ ಎಚ್ಚರಿಸುತ್ತಾ ಬಂದರೂ ಈ ಬಗ್ಗೆ ಯಾವುದೇ ರೀತಿಯ ಕ್ರಮಕೈಗೊಳ್ಳುವಲ್ಲಿ ನಮ್ಮನ್ನಾಳುವ ಸರಕಾರಗಳು ವಿಫಲವಾಗಿದೆ. ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಪಕ್ಷದ ನಗರ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು, ಸದ್ಯ ಜಿಲ್ಲೆಯ ಜನ ಸರಕಾರದ ಮುಂದೆ ಪ್ರಬಲವಾದ ಬೇಡಿಕೆ ಇಟ್ಟಿರೋದು ದ.ಕ ಜಿಲ್ಲೆಯಲ್ಲಿ ಶ್ರೀ ಜಯದೇವ ಹೃದ್ರೋಗ ಸಂಶೋಧನ ಸಂಸ್ಥೆ ಮತ್ತು ಕಿದ್ವಾಯಿ ಸ್ಮಾರಕ ಗಂಥಿ( ಕ್ಯಾನ್ಸರ್ ಆಸ್ಪತ್ರೆ ) ಕೇಂದ್ರ ಕೂಡಲೇ ಪ್ರಾರಂಬಿಸಬೇಕು.  ಅಂತಹ ಬೇಡಿಗಳನ್ನು ಪರಿಗಣಿಸುವುದನ್ನು ಬಿಟ್ಟು ಇರುವ ಸರಕಾರಿ, ಆರೋಗ್ಯ ಕೇಂದ್ರ, ಸಮುದಾಯ ಆಸ್ಪತ್ರೆಗಳನ್ನು ಖಾಸಗೀ ಆಸ್ಪತ್ರೆಗಳ ಹಿಡಿತಕ್ಕೆ ವಹಿಸಿಕೊಡುವ ಒಪ್ಪಂದವನ್ನಲ್ಲ ಎಂದರು.

ಜಿಲ್ಲಾ ಸಮಿತಿ ಸದಸ್ಯರಾದ ಸಂತೋಷ್ ಬಜಾಲ್ ಮಾತನಾಡಿ, ಸರಕಾರ, ಆರೋಗ್ಯ ಇಲಾಖೆ ಈ ಕೂಡಲೇ ಸರಕಾರಿ ಆರೋಗ್ಯ ಕೇಂದ್ರ, ಸಮುದಾಯ, ತಾಲೂಕು ಆಸ್ಪತ್ರೆಗಳನ್ನು ಖಾಸಗೀ ಆಸ್ಪತ್ರೆಗಳ ಹಿಡಿತಕ್ಕೆ ವಹಿಸಿಕೊಡುವ ಕರಾರು ಒಪ್ಪಂದವನ್ನು ರದ್ದುಗೊಳಿಸಬೇಕು ಹಾಗೂ ಸರಕಾರಿ ಆಸ್ಪತ್ರೆಗಳನ್ನು ಬಲಪಡಿಸುವ  ಮತ್ತು ಜಯದೇವ, ಕಿದ್ವಾಯಿ, ನಿಮಾನ್ಸ್ ಆಸ್ಪತ್ರೆಗಳನ್ನು ಸ್ಥಾಪಿಸಲು ಮುಂದಾಗಬೇಕೆಂದು ಸರಕಾರ ಈ ಕೂಡಲೇ ಕ್ರಮ ವಹಿಸಬೇಕೆಂದು ಒತ್ತಾಯಿಸಿದರು.

ಧರಣಿ ಉದ್ದೇಶಿಸಿ ಪಕ್ಷದ ಮಾಜಿ ಕಾರ್ಯದರ್ಶಿ ಮಂಡಲಿ ಸದಸ್ಯರಾದ  ಜೆ ಬಾಲಕೃಷ್ಣ ಶೆಟ್ಟಿ, ಜಯಂತಿ ಬಿ ಶೆಟ್ಟಿ, ಬಿ.ಕೆ ಇಮ್ತಿಯಾಜ್ , ಪ್ರಮೀಳಾ ಶಕ್ತಿನಗರ, ಶ್ರೀನಾಥ್ ಕಾಟಿಪಳ್ಳ, ದಯಾನಂದ ಶೆಟ್ಟಿ, ಅಬ್ದುಲ್ ತಯ್ಯೂಬ್ ಮಾತನಾಡಿದರು.

ಧರಣಿಯ ನೇತೃತ್ವವನ್ನು ಜಯಲಕ್ಷ್ಮಿ ಜಪ್ಪಿನಮೊಗರು, ಶಶಿಧರ್ ಶಕ್ತಿನಗರ್, ದಿನೇಶ್ ಶೆಟ್ಟಿ, ದೀಪಕ್ ಬಜಾಲ್, ನಾಗೇಶ್ ಕೋಟ್ಯಾನ್, ಭಾರತಿ ಬೋಳಾರ್, ರವಿಚಂದ್ರ ಕೊಂಚಾಡಿ, ಆಶಾ ಬೋಳೂರ್, ಕೃಷ್ಣ ತಣ್ಣೀರುಬಾವಿ, ಮನೋಜ್ ಉರ್ವಸ್ಟೋರ್ ವಹಿಸಿದ್ದರು.

Leave a Reply