ಕಾಮಗಾರಿಗಳ ಬಿಲ್ ಬಾಕಿ ಪಾವತಿಗೆ ಕಮೀಷನ್ ಕೇಳಲಾಗುತ್ತಿದೆ: ಗುತ್ತಿಗೆದಾರರ ಆರೋಪ

3 years ago

#Demanding #commission #payment #works #bill #arrears #Allegation #contractor

ಬೆಂಗಳೂರು: ಪೂರ್ಣಗೊಂಡ ಸರ್ಕಾರಿ ಕಾಮಗಾರಿಗಳ ಬಿಲ್ ಬಾಕಿ ಪಾವತಿಗೆ ಕಮೀಷನ್ ಕೇಳಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಶಿವಕುಮಾರ್ ವಿರುದ್ಧ ಆರೋಪ ಮಾಡಿರುವ ಗುತ್ತಿಗೆದಾರರು ಇದೀಗ ಮತ್ತೊಂದು ಹೋರಾಟಕ್ಕೆ ಸಜ್ಜಾಗಿದ್ದಾರೆ.

ಗುತ್ತಿಗೆದಾರರ ಸಂಘದ ಪ್ರತಿನಿಧಿಗಳು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ತಮ್ಮ ಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ. ತಮ್ಮ ಬಿಲ್ ಬಾಕಿ ಬಿಡುಗಡೆಯಾಗದೆ ಹೋದರೆ ಆತ್ಮಹತ್ಯೆ ಒಂದೇ ದಾರಿ ಎಂದು ಅಲವತ್ತುಕೊಂಡಿದ್ದಾರೆ. ತಾವು ತಮ್ಮ ಪ್ರಭಾವ ಬಳಸಿ ನಮ್ಮ ಬಾಕಿ ಬಿಡುಗಡೆಗೆ ಸಹಕರಿಸಬೇಕು ಎಂದು ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.

ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಉಪ ಮುಖ್ಯಮಂತ್ರಿ ಶಿವಕುಮಾರ್, ಗುತ್ತಿಗೆದಾರರು ಯಾರನ್ನು ಬೇಕಾದರೂ ಭೇಟಿ ಮಾಡಬಹುದು. ಅವರನ್ನು ನಾವು ತಡೆಯಲಾಗದು. ಅವರಿಗೆ ಯಾರು ಸಲಹೆ, ಮಾರ್ಗದರ್ಶನ ಕೊಡಬೇಕೋ ಕೊಡುತ್ತಿದ್ದಾರೆ ಎಂದು ಹೇಳಿದರು.

ಅವರು ಎಲ್ಲೆಲ್ಲಿ ಹೋಗಬೇಕೋ ಹೊಗಲಿ. ಹೋಗುವವರನ್ನು ಯಾರು ತಡೆಯೋಕೆ ಆಗುವುದಿಲ್ಲ. ಅವರ ಹೋರಾಟಕ್ಕೆ ಜಯ ಸಿಗಲಿ. ನಾವು ಎಲ್ಲವನ್ನು ಗಮನಿಸುತ್ತಿದ್ದೇವೆ. ನಾವು ನ್ಯಾಯ, ನೀತಿಯಿಂದ ಸರ್ಕಾರ ನಡೆಸುತ್ತಿದ್ದೇವೆ, ಮುಂದೆಯೂ ನಡೆಸುತ್ತೇವೆ. ನ್ಯಾಯಯುತವಾಗಿ ಕೆಲಸ ಮಾಡಿದ ಯಾವುದೇ ಗುತ್ತಿಗೆದಾರರ ಬಾಕಿ ಬಿಡುಗಡೆಗೆ ಅಡ್ಡಿ ಇಲ್ಲ ಎಂದು ಸ್ಪಷ್ಟಪಡಿಸಿದರು.

Leave a Reply