ಅನುದಾನಿತ ಶಾಲಾ ಕಾಲೇಜುಗಳ ನೌಕರರ ಬೇಡಿಕೆಗಳನ್ನು ತಕ್ಷಣ ಈಡೇರಿಸಲು ಬಿಎಸ್ಪಿ ಆಗ್ರಹ

3 years ago

ಬೆಂಗಳೂರು: ಪಿಂಚಣಿ, ಆರೋಗ್ಯ ಸೌಲಭ್ಯ ಮತ್ತು ಇತರ ಬೇಡಿಕೆಗಳನ್ನು ಈಡೇರಿಸಲು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕೆಂದು ಬಹುಜನ ಸಮಾಜ ಪಾರ್ಟಿ ರಾಜ್ಯಾಧ್ಯಕ್ಷ ಎಂ. ಕೃಷ್ಣಮೂರ್ತಿ ಆಗ್ರಹಿಸಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶಿಕ್ಷಕ ಮತ್ತು ಪದವೀಧರ ಕ್ಷೇತ್ರಗಳಿಂದ ಆಯ್ಕೆಯಾಗಿರುವ 14 ಜನ ವಿಧಾನ ಪರಿಷತ್ ಸದಸ್ಯರು ಈ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕವಾಗಿ ಹೋರಾಟ ಮಾಡಬೇಕೆಂದು ಬಿಎಸ್ಪಿ ಒತ್ತಾಯಿಸುತ್ತದೆ ಎಂದರು.

ಡಬಲ್ ಇಂಜಿನ್ ಸರ್ಕಾರದ ಬಿಜೆಪಿಯ 10 ಜನ ವಿಧಾನ ಪರಿಷತ್ ಸದಸ್ಯರು ಈ ನಿಟ್ಟಿನಲ್ಲಿ ಗಟ್ಟಿಯಾದ ಧ್ವನಿಯಲ್ಲಿ ಮಾತನಾಡಿ, ಇತರೆ ಪಕ್ಷಗಳ ವಿಧಾನ ಪರಿಷತ್ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯೋನ್ಮುಖರಾಗಲಿ, ಇಲ್ಲವೇ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿ ಹೋರಾಟ ನಿರತ ನೌಕರರೊಂದಿಗೆ ಧರಣಿ ಕುಳಿತುಕೊಳ್ಳಲಿ ಎಂದು ಒ
ಆಗ್ರಗಿಸಿದರು.

ಸರ್ಕಾರ ಆರ್ಥಿಕ ಹೊರೆ ಎಂಬ ಸಬೂಬು ಹೇಳಿ ನೌಕರರಿಗೆ ಅನ್ಯಾಯ ಮಾಡುವುದು ಸರಿಯಲ್ಲ. ರಾಜ್ಯದಲ್ಲಿರುವ ಶೇಕಡ 40% ಕಮಿಷನ್ ದಂಧೆಗೆ ಕಡಿವಾಣ ಹಾಕಿದರೆ ಆರ್ಥಿಕ ಸಂಪನ್ಮೂಲ ಖಂಡಿತವಾಗಿಯೂ ಕ್ರೂಡೀಕರಣವಾಗುವುದು. ಭವ್ಯ ಭಾರತದ ಪ್ರಜೆಗಳನ್ನು ರೂಪಿಸುವ ಜವಾಬ್ದಾರಿ ಹೊತ್ತಿರುವ ಶಿಕ್ಷಕರನ್ನು ಆರ್ಥಿಕ ಸಂಕಷ್ಟಕ್ಕೆ ನೂಕಿ, ಅವರ ಜೀವನವನ್ನು ಅಭದ್ರತೆಗೆ ತಳ್ಳುವುದು ಅನೈತಿಕ ಮತ್ತು ಅಮಾನವೀಯ ಎಂದು ಕಿಡಿಕಾರಿದರು.

ಈ ವಿಷಯಕ್ಕೆ ಸಂಬಂಧಿಸಿದಂತೆ ತಕ್ಷಣ ಸಿಎಂ ಬಸವರಾಜ ಬೊಮ್ಮಾಯಿ ಅವರು ಶಿಕ್ಷಣ ಮತ್ತು ಆರ್ಥಿಕ ಇಲಾಖೆಯ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಬೇಕು. ಬಹುಜನ ಸಮಾಜ ಪಾರ್ಟಿ ನೌಕರರ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುತ್ತದೆ ಎಂದರು.

Leave a Reply