ಬೆಂಗಳೂರು: ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಇಂದಿನಿಂದ ಒಂಭತ್ತು ದಿನಗಳ ಕಾಲ ಸಾಂಸ್ಕೃತಿಕ ಜಾತ್ರೆ ನಡೆಯಲಿದ್ದು, ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ಇಂದು ವಿಧ್ಯುಕ್ತವಾಗಿ ಚಾಲನೆ ನೀಡಲಾಗಿದೆ.
- ಅಲೆಮಾರಿಗಳು ಇನ್ನೂ ಅತ್ಯಂತ ಹೀನಾಯ ಸ್ಥಿತಿಗೆ ತಲುಪುವ ಸಾಧ್ಯತೆ: ವಡ್ಡಗೆರೆ ನಾಗರಾಜಯ್ಯ
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
ಖ್ಯಾತ ಸಾಹಿತಿ, ಸಂಶೋಧಕ ನಾಡೋಜ ಡಾ. ಹಂಪ ನಾಗರಾಜಯ್ಯ ಅವರು ಬೆಳಗ್ಗೆ 9.15 ರಿಂದ 9.45 ರವರೆಗಿನ ಶುಭ ವೃಶ್ಚಿಕ ಲಗ್ನದಲ್ಲಿ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ನಾಡ ಹಬ್ಬ ದಸರಾಗೆ ಚಾಲನೆ ನೀಡಿದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಸಾಕ್ಷಿಯಾದರು.
ದಸರಾ ಉದ್ಘಾಟನೆಗೂ ಮುನ್ನ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಸರ್ವಾಲಂಕೃತಳಾದ ಲೋಕಮಾತೆ ಚಾಮುಂಡಿ ದೇವಿಗೆ ಸರ್ವರೂ ನಮಿಸಿ ದಸರೆಯ ಯಶಸ್ಸಿಗೆ ಪ್ರಾರ್ಥಿಸಿದರು.
ಇದಕ್ಕೂ ಮುನ್ನ ಗಣ್ಯರನ್ನು ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಯಿತು. ಗಣ್ಯರೆಲ್ಲರೂ ಚಾಮುಂಡೇಶ್ವರಿ ಸನ್ನಿಧಿಗೆ ತೆರಳಿ ದೇವಿಯ ದರ್ಶನ ಪಡೆದು ಪುನೀತರಾದರು. ನಂತರ ವೇದಿಕೆಗೆ ಆಗಮಿಸಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಹಂಪ ನಾಗರಾಜಯ್ಯ, ದಸರಾ ಹಬ್ಬ ಮತಧರ್ಮಗಳ ತಾರತಮ್ಯವಿರದೆ ಇಡೀ ನಾಡು ಆಚರಿಸುವ ಸರ್ವಜನಾಂಗದ ಹಬ್ಬ. ಸಾಮಾನ್ಯ ಪ್ರಜೆಯೊಬ್ಬರು ಈ ನಾಡ ಹಬ್ಬದ ಸಡಗರದ ಸರಣಿಯನ್ನು ಉದ್ಘಾಟಿಸುತ್ತಿರುವುದು ಆ ಪರಿಕಲ್ಪನೆಯ ಮುಂದುವರಿಕೆಯಾಗಿದೆ. ಇದು ಪ್ರಜಾಪ್ರಭುತ್ವದಲ್ಲಿ ಪ್ರಜೆಯೇ ಪ್ರಭು ಎಂಬ ಸಿದ್ಧಾಂತವನ್ನು ಮಾನ್ಯ ಮಾಡಿದಂತೆ ಹಾಗೂ ಜನಮುಖಿ ಕಾಳಜಿಯನ್ನು ಎತ್ತಿ ಹಿಡಿದಂತೆ ಎಂದರು.
ಪ್ರಭುತ್ವಗಳಲ್ಲಿ ಪ್ರಜಾಪ್ರಭುತ್ವ ಮುಡಿಯ ಮಾಣಿಕ್ಯ, ಕಳೆದ ತಿಂಗಳು ಸೆ. 15 ರಂದು ತೆಂಕಣದ ಚಾಮರಾಜನಗರದಿಂದ ಬಡಗಣದ ಬೀದರವರೆಗೆ ಪ್ರಜಾಪ್ರಭುತ್ವದ ಬೇರುಗಳನ್ನು ಗಟ್ಟಿಗೊಳಿಸುವ ಮತ್ತು ಬಹುತ್ವದ ಮಹತ್ವವನ್ನು ಮನಗಾಣಿಸುವ ವಿಶ್ವದಾಖಲೆಯ ಮಾನವ ಸರಪಳಿಯನ್ನು ಆಯೋಜಿಸಿದ್ದು ಸಮಯೋಚಿತವೂ ಅಭಿನಂದನಾರ್ಹವೂ ಆಗಿದೆ ಎಂದರು.
ಆಸ್ತಿಕತೆ, ನಾಸ್ತಿಕತೆ ಕುರಿತ ಚರ್ಚೆ ಇಲ್ಲಿ ಅಪ್ರಸ್ತುತ. ದೇವಾಲಯಕ್ಕೆ ಬಂದವರೆಲ್ಲಾ ಆಸ್ತಿಕರೆಂದಾಗಲಿ, ಒಳಗೆ ಬರದೆ ದೂರ ಉಳಿದವರೆಲ್ಲ ನಾಸ್ತಿಕರೆಂದಾಗಲಿ ಅಲ್ಲ. ಎಲ್ಲ ದೇಶ ಕಾಲಗಳಲ್ಲೂ ಸಮಾಜ ಮಾನ್ಯಮಾಡಿದ ಶಿಷ್ಟಪರಂಪರೆಯ ಸ್ತೋತ್ರವೊಂದು ಜೀವಂತವಾಗಿರುತ್ತದೆ ಎಂದರು.
ಸಹನೆ ಸೌಹಾರ್ದದಿಂದ ಬಾಳಿದರೆ, ನೆಮ್ಮದಿ ಇದ್ದರೆ ಪ್ರತಿ ಮನೆಯೂ ಅರಮನೆಯೇ, ಎಲ್ಲರೂ ರಾಜರಾಣಿಯರೇ ನವರಾತ್ರಿಯ ತೆಂಕಣಗಾಳಿಗೆ ಮೈಸೂರು ಮೈಕೊಡವಿ, ಪೊರೆಬಿಟ್ಟು, ಶೃಂಗಾರಗೊಂಡು, ಕಂಗೊಳಿಸುತ್ತದೆ. ಮೈಸೂರೆಂದರೆ ದಸರ, ಜಂಬೂಸವಾರಿ ಎಂಬ ಮಾತು ಲೋಕ ಪ್ರಸಿದ್ಧಿ ಪಡೆಯಿತು ಎಂದರು.
ಪ್ರಜಾಪ್ರಭುತ್ವ ಬಂದಮೇಲೆ ಕೆಲವು ಬದಲಾವಣೆ ಆದುವು. ಈ ಬದಲಾವಣೆ ಸ್ವರೂಪದಲ್ಲೇ ಹೊರತು ಸತ್ವದಲ್ಲಿ ಅಲ್ಲ. ಚುನಾಯಿತ ಸರಕಾರ ಈ ಹಬ್ಬವನ್ನು ಜನಮುಖಿಯಾಗಿಸಿದರು. ಇದು ಅರಮನೆಯ ಹಬ್ಬವಲ್ಲ, ಜನರು ಆರಿಸಿದ ಸರಕಾರ ನಡೆಸುವ ಉತ್ಸವವನ್ನಾಗಿಸಿ ಇನ್ನಷ್ಟು ಅರ್ಥಪೂರ್ಣವಾಗಿ ಹಿಂದಿನಂತೆಯೇ ಸಂಭ್ರಮದಿಂದ ನಡೆಸುತ್ತಿದ್ದಾರೆ ಎಂದರು.



