ಪ್ರಜಾಪ್ರಭುತ್ವ ದಿನಾಚರಣೆ
ಅಂಬೇಡ್ಕರ್ ಪುತ್ಥಳಿಗೆ ಹೂ ಮಾಲಾರ್ಪಣೆ
ಬಾಗಲಕೋಟೆ: ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿರುವ ಮೌಲ್ಯ ಹಾಗೂ ವಿಚಾರಗಳನ್ನು ಮುಂದಿನ ಪೀಳಿಗೆಗೆ ಗೊತ್ತುಪಡಿಸುವ ಮೂಲಕ ವ್ಯವಸ್ಥೆಯನ್ನು ಮತ್ತಷ್ಟು ಗಟ್ಟಿಗೊಳಿಸುವ ಕಾರ್ಯವಾಗಬೇಕಿದೆ ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ನಾವೆಲ್ಲರೂ ಸಂವಿಧಾನದಲ್ಲಿರುವ ಮೌಲ್ಯಗಳಿಗೆ ಒತ್ತುಕೊಟ್ಟು ಜೀವನ ಸಾಗಿಸುವಂತಾಗುವ ಉದ್ದೇಶದಿಂದ ಪ್ರತಿ ವರ್ಷ ಸೆಪ್ಟೆಂಬರ್ 15 ರಂದು ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸಲಾಗುತ್ತಿದೆ. ವಿವಿಧತೆಯಲ್ಲಿ ಏಕತೆ ಹೊಂದಿದ ದೇಶ ನಮ್ಮದಾಗಿದೆ ಎಂದರು.
ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಮಾತನಾಡಿ, ನಮ್ಮ ದೇಶಕ್ಕೆ ಡಾ.ಬಿ.ಆರ್.ಅಂಬೇಡ್ಕರ ನೀಡಿರುವ ಮಹಾನ್ ಕೊಡುಗೆ ಸಂವಿಧಾನ. ಇದರ ಆಧಾರದ ಮೇಲೆ ಆಡಳಿತ ಯಂತ್ರ ನಡೆಸಲಾಗುತ್ತಿದೆ. ಎಲ್ಲರಿಗೂ ಸಮಾನತೆಯ ಹಕ್ಕುಗಳನ್ನು ಕೊಟ್ಟಿರುವುದು ನಮ್ಮ ಸಂವಿಧಾನ ಎಂದರು.
ನಾವು ಹಕ್ಕುಗಳ ಬಗ್ಗೆ ಮಾತನಾಡುತ್ತಿದ್ದೇವೆ ಹೊರತು ಕರ್ತವ್ಯದ ಬಗ್ಗೆ ಮಾತನಾಡುತ್ತಿಲ್ಲ. ಹಕ್ಕುಗಳು ಯಾವಾಗ ಸೀಗುತ್ತವೆ ಎಂದರೆ ಕರ್ತವ್ಯ ಮಾಡಿದಾಗ ಮಾತ್ರ. ಸಮಾನತೆ ಎಂಬುದು ನಮ್ಮ ರಕ್ತದಲ್ಲಿಯೇ ಇದ್ದು, ಅದನ್ನು ಕಲಿಸಿಕೊಡುವ ಅಗತ್ಯವಿಲ್ಲ. ನಾವು ಮಾಡುವ ಕೆಲವೊಂದು ತಪ್ಪುಗಳಿಂದ ಸಮಾಜದಲ್ಲಿ ಗೊಂದಲ ಉಂಟಾಗುತ್ತಿದೆ. ಅದನ್ನು ಯಾರು ಮಾಡಬಾರದು ಎಂದರು.
ಜಿಲ್ಲಾಧಿಕಾರಿ ಸಂಗಪ್ಪ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆ ಅಂದರೆ ಕೇವಲ ಆಡಳಿತ ವ್ಯವಸ್ಥೆ ಅಲ್ಲ, ಅದು ನಮ್ಮ ಸ್ವಾತಂತ್ರ್ಯದ ಜೀವಾಳ, ಸಮಾನತೆಯ ನಂಬಿಕೆ ಮತ್ತು ನ್ಯಾಯದ ದಾರಿಯಾಗಿದೆ. ಮತದಾನ ಕೇವಲ ಹಕ್ಕು ಮಾತ್ರವಲ್ಲ ಅದು ಕರ್ತವ್ಯ, ಹೊಣೆಗಾರಿಕೆ ಮತ್ತು ಪ್ರಜಾಸತ್ತಾತ್ಮಕ ಶಕ್ತಿಯಾಗಿದೆ. ನಮ್ಮ ಮತದಾನದ ಹಕ್ಕು ನಮ್ಮ ಸಮಾನತೆಯ ಚಿಹ್ನೆ, ಸ್ವಾತಂತ್ರ್ಯದ ಪ್ರತೀಕ, ಜೀವಾಳವಾಗಿದೆ. ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತೆಯ ಭಾರತವನ್ನು ಕಟ್ಟುವ ಕನಸು ಅಂಬೇಡ್ಕರ ಹೊಂದಿದ್ದರು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ ಎಂದರು.
ಶಾಸಕರು ಹಾಗೂ ಬಿಟಿಡಿಎ ಅಧ್ಯಕ್ಷ ಎಚ್.ವಾಯ್.ಮೇಟಿ ಮಾತನಾಡಿ ದೇಶಕ್ಕೆ ಅರ್ಥಪೂರ್ಣವಾದ ಸಂವಿಧಾನವನ್ನು ಡಾ.ಬಿ.ಆರ್.ಅಂಬೇಡ್ಕರ ನೀಡಿದ್ದು, ಅದರಲ್ಲಿ ಅಡಕವಾಗಿರುವ ಆಶಯ, ಅದರ ಹಿಂದೆ ಇರುವ ಸಮಾಜಿಕ ಕಳಕಳಿ, ಸಮಾನತೆ, ಭಾತೃತ್ವ ಸೇರಿದಂತೆ ಹತ್ತು ಹಲವಾರು ಮೌಲ್ಯಗಳನ್ನು ನಾವೆಲ್ಲರೂ ಅನುಸರಿಬೇಕು ಎಂದರು.
ಉಪನ್ಯಾಸಕರಾಗಿ ಆಗಮಿಸಿದ್ದ ನವನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಸಂಪತ್ ಲಮಾಣಿ ಮಾತನಾಡಿ ಪ್ರಜಾಪ್ರಭುತ್ವ ಒಂದು ಜೀವನದ ಶೈಲಿಯಾಗಿದೆ ಎಂದರು.
ಪ್ರಾರಂಭದಲ್ಲಿ ಸಂವಿಧಾನ ಪೀಠಿಕೆಯನ್ನು ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಸವಿತಾ ಲೆಂಕನ್ನವರ, ಬುಡಾದ ಅಧ್ಯಕ್ಷ ರಜಾಕ್ ಬೇನೂರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಮೇಶ ಚವ್ಹಾಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸೈಕಲ್ ಜಾಥಾ, ಮ್ಯಾರಥಾನ್: ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಸೈಕಲ್ ಜಾಥಾ ಹಾಗೂ ಮ್ಯಾರಥಾನ್‍ಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎನ್.ವಿ.ವಿಜಯ್ ಹಾಗೂ ಜಿಲ್ಲಾಧಿಕಾರಿ ಸಂಗಪ್ಪ ಜಂಟಿಯಾಗಿ ಚಾಲನೆ ನೀಡಿದರು.
ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ ಹಾಗೂ ಕ್ರೀಡಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಸೈಕಲ್ ಜಾಥಾ ನವನಗರದ ಕಾಳಿದಾಸ ಶಿಕ್ಷಣ ಸಂಸ್ಥೆಯ ಮೈದಾನದಿಂದ ಪ್ರಾರಂಭವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜಿಲ್ಲಾಡಳಿತ ಭವನಕ್ಕೆ ಮುಕ್ತಾಯಗೊಂಡಿತು. ಮ್ಯಾರಥಾನ್ ಸಹ ಕಾಳಿದಾಸ ಶಿಕ್ಷಣ ಸಂಸ್ಥೆಯಿಂದ ಪ್ರಾರಂಭವಾಗಿ ವಿದ್ಯಾಗಿರಿ ಸರ್ಕಲ್ ಮಾರ್ಗವಾಗಿ ಬಾಗಲಕೋಟೆ ಪಟ್ಟಣ ಅಭಿವೃದ್ದಿ ಪ್ರಾಧಿಕಾರಕ್ಕೆ ಮುಕ್ತಾಯಗೊಂಡಿತು. ಸೈಕಲ್‍ಗಳಲ್ಲಿ ನನ್ನ ಮತ ನನ್ನ ಹಕ್ಕು ಎಂಬ ಘೋಷವಾಕ್ಯದ ಫಲಕಗಳನ್ನು ಪ್ರದರ್ಶಿಸಲಾಯಿತು. ಬಿಳಿ ಬಣ್ಣದ ಟೀಶರ್ಟ ಧರಿಸಿದ್ದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಸಮಾಜ ಕಲ್ಯಾಣ ಇಲಾಖೆಯ ಪ್ರಭಾರಿ ಉಪನಿರ್ದೇಶಕ ರಮೇಶ ಚವ್ಹಾಣ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ, ಬಿಟಿಡಿಎ ಮುಖ್ಯ ಅಭಿಯಂತರ ಚಂದ್ರಹಾಸ ಬಂಡಿ, ಕೆಬಿಜೆಎನ್‍ಎಲ್ ಮುಖ್ಯ ಅಭಿಯಂತರ ಡಿ.ಬಸವರಾಜ, ಕೆಪಿಟಿಸಿಎಲ್ ಮುಖ್ಯ ಅಭಿಯಂತರ ಕಾಶಿನಾಥ ಹಿರೇಮಠ ಸೇರಿದಂತೆ ಇತರರು ಉಪಸ್ಥಿತರಿದ್ದರು.










