ಇತ್ತೀಚಿನ ದಿನಗಳಲ್ಲಿ ಮೂತ್ರಪಿಂಡದ ಕಾಯಿಲೆಯಿಂದ ನರಳುತ್ತಿರುವಂತಹ ಜನರ ಸಂಖ್ಯೆಯು ಹೆಚ್ಚಾಗುತ್ತಿದೆ. ಇವರಿಗೆ ನಿಗದಿತವಾಗಿ ಡಯಾಲಿಸಿಸ್ ಮಾಡಬೇಕಾಗುತ್ತದೆ. ಆದ್ದರಿಂದ ಇವರು ಪದೇಪದೇ ಆಸ್ಪತ್ರೆಗಳಿಗೆ ಹೋಗಬೇಕಾಗುತ್ತದೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಇಂತಹ ಕಾಯಿಲೆಯಿಂದ ನರಳುತ್ತಿರುವವರಲ್ಲಿ ಕೆಲವರು ಅಂಗವಿಕಲರು ಇರುತ್ತಾರೆ. ಇವರುಗಳು ಆಸ್ಪತ್ರೆಗಳಿಗೆ ಹೋಗಿಬರುವುದು ಕಷ್ಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಾನ್ಯ ಆರೋಗ್ಯ ಸಚಿವರು ಆಲೋಚನೆಯನ್ನು ಮಾಡಿ ಸಂಚಾರಿ ಡಯಾಲಿಸಿಸ್ ವಾಹನಗಳನ್ನು ಅಭಿವೃದ್ಧಿಪಡಿಸಿದರೆ ಅನಾರೋಗ್ಯ ಪೀಡಿತ ವಯೋವೃದ್ಧರು ಮತ್ತು ಅಂಗವಿಕಲರಾಗಿರುವ ರೋಗಿಗಳಿಗೆ ಅನುಕೂಲವಾಗುತ್ತದೆ.
ಜೊತೆಗೆ ಇಂತಹ ಜನರಿಗಾಗಿ ಸಂಚಾರಿ ಹೃದಯ ತಪಾಸಣೆ ವಾಹನಗಳನ್ನು ಅಭಿವೃದ್ಧಿಪಡಿಸಿದರೆ ಅನುಕೂಲವಾಗುತ್ತದೆ. ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ರವರು ಈಗಾಗಲೇ ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಕಾರ್ಯಕ್ರಮಗಳನ್ನು ಜಾರಿಗೆ ತಂದಿರುತ್ತಾರೆ. ಇವರು ಈ ನಿಟ್ಟಿನಲ್ಲೂ ಆಲೋಚಿಸಿ ಕ್ರಮ ಕೈಗೊಂಡರೆ ಇದೊಂದು ಜನಪರವಾದ ಯೋಜನೆಯಾಗುತ್ತದೆ.
– ಕೆ ಎಸ್ ನಾಗರಾಜ್, ಬೆಂಗಳೂರು




