ಕೊಪ್ಪಳ: 2024-25ನೇ ಸಾಲಿನ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕಾಗಿ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ವಿಸ್ತರಿಸಲಾಗಿದೆ.
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಹೆಚ್ ಡಿ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನೀಡುವ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ 15ರ ವರೆಗೆ ಅವಕಾಶ ಕಲ್ಪಿಸಲಾಗಿದ್ದು, ವಿವರಗಳಿಗಾಗಿ ವೆಬ್ಸೈಟ್ https://bcwd.karnataka.gov.in/ ಅನ್ನು ನೋಡಬಹುದು.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ-8050770004 ಗೆ ಸಂಪರ್ಕಿಸಬಹುದು.




