ಧಾರವಾಡ: ದೇವರಾಜ ಅರಸು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ. ಬಡವರ, ಹಿಂದುಳಿದವರ ಪರ ನಿಂತು ಸಾಮಾಜಿಕ ಮತ್ತು ಮೂಲಭೂತ ಅವಶ್ಯಕತೆಗಳನ್ನು ಒದಗಿಸಿದವರು, ಇವರು ಶಿಕ್ಷಣ ಕ್ಷೇತ್ರಕ್ಕೆ ಕೊಟ್ಟ ಕೊಡುಗೆ ಅಪಾರವಾಗಿದೆ, ಲಕ್ಷಾಂತರ ವಿದ್ಯಾರ್ಥಿ ವಸತಿ ನಿಲಯಗಳನ್ನು ಕಟ್ಟಿಸಿಕೊಟ್ಟವರು ಇವರು, ಸಾಮಾಜಿಕ ನ್ಯಾಯದ ಪರವಾಗಿ ಧ್ವನಿ ಎತ್ತಿದ ಇವರು ತಮ್ಮ ಆಧಿಕಾರದ ಸಂದರ್ಭದಲ್ಲಿ ಸಮಾಜದಲ್ಲಿದ್ದಂತಹ ಎಲ್ಲ ವರ್ಗದವರ ಪರವಾಗಿ ಶ್ರಮಿಸಿದರು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾದ ಡಿ. ದೇವರಾಜು ಅರಸು ಅವರ 109 ನೇ ಜನ್ಮ ದಿನಾಚರಣೆಯ ಅಂಗವಾಗಿ ಡಿ. ದೇವರಾಜು ಅರಸು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದಲ್ಲಿ ದೇವರಾಜು ಅರಸು ಅವರಂತಹ ವ್ಯಕ್ತಿಗಳು ಇದ್ದಾಗ ಮಾತ್ರ ಸಮಾಜ ಸುಧಾರಣೆಯಾಗುತ್ತದೆ. ದೇವರಾಜು ಅರಸು ಅವರು ಕ್ರಾಂತಿಕಾರಿ ಹೋರಾಟಗಾರರಾಗಿದ್ದರು. ನಾವು ಮಾಡುತ್ತಿರುವಂತ ಕಾಯಕದ ಬಗ್ಗೆ ಕೀಳರಿಮೆ ಪಡಬಾರದು. ದೇವರಾಜು ಅರಸರ ಪ್ರತಿಯೊಂದು ತತ್ವ, ಆದರ್ಶಗಳನ್ನು ಪಾಲಿಸೋಣ, ಅವರ ಕೆಲವೊಂದು ಗುಣಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದರು.
ಮುಖ್ಯ ಅತಿಥಿಗಳಾಗಿ ಡಿ.ದೇವರಾಜು ಅರಸು ಪ್ರಶಸ್ತಿ ಪುರಸ್ಕೃತ ಶಶಿಧರ ತೋಡಕರ ಅವರು ಮಾತನಾಡಿ, ಸಾಮಾಜಿಕ ಬದಲಾವಣೆ, ಬಡತನ ನಿರ್ಮೂಲನೆ, ಮನೆಗಳ ನಿರ್ಮಾಣದಲ್ಲಿ ಅದ್ವಿತೀಯ ಕೆಲಸ ಮಾಡಿದ್ದಾರೆ. ಜಿಲ್ಲೆಯಲ್ಲಿ ಹಿಂದುಳಿದ ವರ್ಗದ ವಸತಿ ನಿಲಯದಲ್ಲಿ ವಿದ್ಯಾಭ್ಯಾಸ ಮಾಡುವಂತಹ ಮಕ್ಕಳು ದೇವರಾಜು ಅರಸು ಅವರ ಮಾರ್ಗದಲ್ಲಿ ನಡೆಯಬೇಕು, ಹಿಂದುಳಿದ ವರ್ಗದವರ ಅಭಿವೃದ್ಧಿಗೆ ಬುನಾದಿ ಹಾಕಿದ ಕೀರ್ತಿ ಅರಸು ಅವರದು. 70-80 ರ ದಶಕದಲ್ಲಿ ಸಾಮಾಜಿಕ ಬದಲಾವಣೆಗೆ ಕಾರಣವಾದ ನ್ಯಾಯ ಪ್ರತೀಕ ಎಂಬ ಖ್ಯಾತಿಗೂ ಪಾತ್ರರಾಗಿದ್ದಾರೆ ಎಂದರು.
ಗೊಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ನಾಗರಾಜ ಎಸ್ ಅವರು ಡಿ.ದೇವರಾಜು ಅರಸು ಅವರ ಶೈಕ್ಷಣಿಕ ಜೀವನದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನೀಡಿದರು.
ಕಾರ್ಯಕ್ರಮದಲ್ಲಿ ಡಿ. ದೇವರಾಜು ಅರಸು ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಕುಶಾಲ್, ನಾಮ ನಿರ್ದೇಶಿತ ಸದಸ್ಯ ಗುರುನಾಥ ಹುಲಗಾರ, ಅಲೆಮಾರಿ ಸಮುದಾಯದ ಮುಖಂಡ ರಾಜು ವೇಲಕರ, ಈಶ್ವರ ಬೆಳ್ಳಿಗಟ್ಟಿ ಇದ್ದರು. ಅಲ್ಪ ಸಂಖ್ಯಾತರ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಗೋಪಾಲ ಲಮಾಣಿ, ರವಿ ಕುಲಕರ್ಣಿ, ಗೀತಾ ಹೂಗಾರ, ಹಿಂದುಳಿದ ವರ್ಗಗಳ ವಸತಿ ನಿಲಯದ ನಿಲಯ ಪಾಲಕರು, ವಿಧ್ಯಾರ್ಥಿಗಳು ಹಾಗೂ ಸಾರ್ವಜನಿಕರು ಮೊದಲಾದವರು ಹಾಜರಿದ್ದರು.




