ಬೆಂಗಳೂರು: ಕೇಂದ್ರ ಸರ್ಕಾರದ ಪ್ರಸಾದ್ ಯೋಜನೆಯಡಿಯಲ್ಲಿ ಬೆಳಗಾವಿಯ ಸವದತ್ತಿಯಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಯೋಜನೆಗೆ ಕೇಂದ್ರ ಪ್ರವಾಸೋದ್ಯಮ ಸಚಿವಾಲಯ ಅನುಮೋದನೆ ನೀಡಿದೆ.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ಈ ಯೋಜನೆ ಅಡಿಯಲ್ಲಿ ರೇಣುಕಾ ಯಲ್ಲಮ್ಮ ದೇವಸ್ಥಾನದ ಆವರಣದಲ್ಲಿ 18.37 ಕೋಟಿ ವೆಚ್ಚದಲ್ಲಿ ಯಾತ್ರಿಕರ ಆಗಮನ ಕೇಂದ್ರ, ಕೆಫೆಟೇರಿಯಾ, ಪ್ರಥಮ ಚಿಕಿತ್ಸಾ ಕೇಂದ್ರ ಮತ್ತು ಇತರ ಆಧುನಿಕ ಸೌಲಭ್ಯಗಳನ್ನು ದೇವಸ್ಥಾನದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದೆ.
ಇದರಿಂದಾಗಿ ದೇವಸ್ಥಾನಕ್ಕೆ ಭೇಟಿ ನೀಡುವ ಹೆಚ್ಚಿನ ಸಂಖ್ಯೆಯ ಭಕ್ತರಿಗೆ ಅನುಕೂಲವಾಗಲಿದೆ ಎಂದು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಗಜೇಂದ್ರ ಸಿಂಗ್ ಅವರ ಪೋಸ್ಟ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸರ್ಕಾರದ ಪ್ರಸಾದ್ ಯೋಜನೆ ಅಡಿಯಲ್ಲಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಯೋಜನೆಗೆ ಅನುಮೋದನೆ ನೀಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಧನ್ಯವಾದಗಳು ಎಂದಿದ್ದಾರೆ.
ಈ ಉಪಕ್ರಮವು ತೀರ್ಥಯಾತ್ರೆಯ ಅನುಭವವನ್ನು ಹೆಚ್ಚಿಸುತ್ತದೆ ಮತ್ತು ಸಾವಿರಾರು ಭಕ್ತರಿಗೆ ಆಧುನಿಕ ಸೌಲಭ್ಯಗಳನ್ನು ಒದಗಿಸುತ್ತದೆ ಎಂದಿದ್ದಾರೆ.



