ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಹಿರಿಯ ನಾಯಕ ಆರ್ ವಿ ದೇಶಪಾಂಡೆ ನೀಡಿರುವ ಹೇಳಿಕೆ ರಾಜ್ಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ರಾಜ್ಯ ಆಡಳಿತ ಸುಧಾರಣೆ ಆಯೋಗದ ಅಧ್ಯಕ್ಷರೂ ಆಗಿರುವ ದೇಶಪಾಂಡೆ ಅವರ ಹೇಳಿಕೆಗೆ ಆಡಳಿತಾರೂಢ ಕಾಂಗ್ರೆಸ್ ಮತ್ತು ವಿಪಕ್ಷಗಳ ನಾಯಕರಿಂದಲೂ ತೀವ್ರ ಆಕ್ಷೇಪ ವ್ಯಕ್ತವಾಗಿದೆ.
ಕಾರವಾರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಆರ್ ವಿ ದೇಶಪಾಂಡೆ, ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಯೋಜನೆಗಳ ಕಾರಣದಿಂದ ಕುಂಠಿತವಾಗಿದೆ. ತಾವು ಮುಖ್ಯಮಂತ್ರಿ ಆಗಿದ್ದರೆ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುತ್ತಿರಲಿಲ್ಲ ಎಂದಿದ್ದಾರೆ.
ಅಲ್ಲದೆ ಮಹಿಳೆಯರು ಎಲ್ಲ ಸೌಲಭ್ಯ ಗಳನ್ನೂ ಪಡೆಯುತ್ತಿದ್ದಾರೆ. ಪುರುಷರಿಗೆ ಯಾವುದೇ ಯೋಜನೆ ಇಲ್ಲ. ಸರ್ಕಾರದ ಈ ಯೋಜನೆಗಳನ್ನು ಜನರಿಗೆ ತಲುಪಿಸಲು ಅನೇಕ ಸಮಿತಿಗಳನ್ನು ರಚಿಸಲಾಗಿದೆ. ಅವುಗಳನ್ನು ನಿಭಾಯಿಸುವುದೇ ಆಗಿದೆ. ಹೀಗಾಗಿ ರಾಜ್ಯದಲ್ಲಿ ಅಭಿವೃದ್ಧಿಯ ವೇಗ ತಗ್ಗಿದೆ ಎಂದು ತಮ್ಮ ಸರ್ಕಾರದ ಜನಪರ ಯೋಜನೆಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.
ಇದಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಗ್ರಹ ಸಚಿವ ಡಾ. ಜಿ ಪರಮೇಶ್ವರ್, ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ಅಪಾರ ಪ್ರಮಾಣದ ಜನ ಮೆಚ್ಚುಗೆ ಗಳಿಸಿವೆ. ಬಡವರು ಮತ್ತು ಕೆಳ ಮಧ್ಯಮ ವರ್ಗದವರಿಗೆ ದೊಡ್ಡ ಪ್ರಮಾಣದಲ್ಲಿ ಅನುಕೂಲವಾಗಿದೆ. ಗ್ಯಾರಂಟಿ ಯೋಜನೆಗಳ ಕಾರಣಕ್ಕೆ ಯಾವುದೇ ಅಭಿವೃದ್ಧಿ ಯೋಜನೆಗಳು ಸ್ಥಗಿತಗೊಂಡಿಲ್ಲ ಎಂದು ಸಮರ್ಥಿಸಿಕೊಂಡರು.
ದೇಶಪಾಂಡೆ ಅವರಿಗೆ ಯಾವ ಅಭಿವೃದ್ಧಿ ಯೋಜನೆ ಬೇಕಾಗಿತ್ತೋ ಯಾವುಗಳ ನಿಂತು ಹೋಗಿವೆಯೋ ಗೊತ್ತಿಲ್ಲ. ತಾವು ಉಸ್ತುವಾರಿ ಹೊತ್ತಿರುವ ತುಮಕೂರು ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳು ಜಾರಿಯಲ್ಲಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮೂರು ಬಾರಿ ತುಮಕೂರು ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ದೇಶಪಾಂಡೆ ಅವರು ಮುಖ್ಯಮಂತ್ರಿ ಆದಾಗ ಬೇಕಾದರೆ ಗ್ಯಾರಂಟಿಗಳನ್ನು ನಿಲ್ಲಿಸಿಕೊಳ್ಳಲಿ ಎಂದರು.
ಸಚಿವ ದಿನೇಶ್ ಗುಂಡೂರಾವ್ ಕೂಡಾ ಇದಕ್ಕೆ ಪ್ರತಿಕ್ರಿಯೆ ನೀಡಿದ್ದು, ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿ. ಎರಡು ವರ್ಷಗಿಂತ ಹೆಚ್ಚು ಕಾಲ ಜಾರಿಗೊಂಡು ಜನರಿಗೆ ತಲುಪುತ್ತಿದೆ. ಯಾರು ಏನು ಬೇಕಾದರೂ ಹೇಳಿಕೆ ಕೊಡಬಹುದು. ಯೋಜನೆಯಲ್ಲಿ ಕೆಲವು ಲೋಪದೋಷಗಳಿರಬಹುದು. ಆದರೆ ಕಾಂಗ್ರೆಸ್ ಸರ್ಕಾರದ ಒಂದು ಕ್ರಾಂತಿಕಾರಕ ಯೋಜನೆ ಇದಾಗಿದೆ. ಕಾಂಗ್ರೆಸ್ ನಾಯಕರಲ್ಲಿ ಕೆಲವು ಅಭಿಪ್ರಾಯ ಇದೆ ಅದು ಅವರ ವೈಯಕ್ತಿಕ ಎಂದು ಸರ್ಕಾರದ ಯೋಜನೆಯನ್ನು ಸಮರ್ಥಿಸಿಕೊಂಡಿದ್ದಾರೆ.
ದೇಶಪಾಂಡೆ ಹೇಳಿಕೆಗೆ ವಿಧಾನಸಭೆಯ ವಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯೆ ನೀಡಿದ್ದು, ಆರ್ ವಿ ದೇಶಪಾಂಡೆ ಸತ್ಯ ಹೇಳಿದ್ದಾರೆ. ಈ ಹಿಂದೆ ರಾಯರೆಡ್ಡಿ ಸಹ ಸತ್ಯ ಹೇಳಿದ್ದರು. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಿಗೆ ಈ ಬಗ್ಗೆ ಜ್ಞಾನೋದಯ ಆಗಲಿದೆ ಎಂದಿದ್ದಾರೆ.
ಅದೇ ರೀತಿಯಲ್ಲಿ ಪರಿಷತ್ ವಿಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಮಾತನಾಡಿ, ಗ್ಯಾರಂಟಿ ಹೆಸರಿನಲ್ಲಿ ದಿವಾಳಿ ಆಗುತ್ತಿದೆ. ಕಾಂಗ್ರೆಸ್ ನವರು ಒಳಗಿಂದೊಳಗೆ ಗ್ಯಾರಂಟಿ ವಿರೋಧ ಮಾಡುತ್ತಿದ್ದಾರೆ. ದೇಶಪಾಂಡೆ ಹೇಳಿಕೆಯೇ ಸಾಕ್ಷಿ ಎಂದು ತಿರುಗೇಟು ನೀಡಿದ್ದಾರೆ.




