ಚಾಮರಾಜನಗರ: ಧಾರ್ಮಿಕ ಕ್ಷೇತ್ರವಾದ ಮಲೈ ಮಹದೇಶ್ವರ ಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದು ಮೈಸೂರು ವಿಭಾಗದ ವಿವಿಧ ಜಿಲ್ಲೆಗಳಿಗೆ ಸೇರಿದ 3,647 ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ,
ರಾಜ್ಯದ ನಾಲ್ಕು ವಿಭಾಗಗಳಲ್ಲಿ ಸಭೆ ನಡೆಸಲು ತೀರ್ಮಾನಿಸಿ ಈಗಾಗಲೇ ಕಲಬುರಗಿ ಆಗಿದೆ. ಈಗ ಮೈಸೂರು ವಿಭಾಗದ್ದು ನಡೆದಿದೆ. ಮುಂದಿನ ದಿನಗಳಲ್ಲಿ ಬೆಳಗಾವಿ ಹಾಗೂ ಬೆಂಗಳೂರು ವಿಭಾಗದ ಸಭೆಯನ್ನು ಮಾಡಲಿದ್ದೇವೆ ಎಂದರು.
ಬೆಳಗಾವಿ ಕಂದಾಯ ವಿಭಾಗದ ಸಂಪುಟ ಸಭೆಯನ್ನು ವಿಜಯಪುರ ಹಾಗೂ ಬೆಂಗಳೂರು ವಿಭಾಗದ ಸಂಪುಟ ಸಭೆಯನ್ನು ನಂದಿ ಬೆಟ್ಟದಲ್ಲಿ ನಡೆಸಲು ತೀರ್ಮಾನಿಸಿದ್ದೇವೆ ಎಂದರು.
ಮೈಸೂರು ವಿಭಾಗದ 78 ವಿಷಯಗಳ ಬಗ್ಗೆ ಚರ್ಚೆ ಆಗಿದೆ. ಕಲಬುರಗಿ ವಿಭಾಗದಲ್ಲಿ 56 ವಿಷಯಗಳ ತೀರ್ಮಾನ ಆಗಿತ್ತು. ಈಗ 3647 ಕೋಟಿ ಮೊತ್ತದ ಯೋಜನೆಗಳಿಗೆ ಸಭೆಯಲ್ಲಿ ಅನುಮೋದನೆ ದೊರೆತಿದೆ ಎಂದರು.
ಲೋಕೋಪಯೋಗಿ, ನೀರಾವರಿ, ಸಣ್ಣ ನೀರಾವರಿ, ಇಂಧನ, ಆರೋಗ್ಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೆರೆಗಳಿಗೆ ನೀರು ತುಂಬಿಸುವ ಯೋಜನೆ, ಬುಡಕಟ್ಟು ಅಭಿವೃದ್ಧಿ, ಹಾಡಿಗಳಿಗೆ ರಸ್ತೆ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ ಎಂದರು.
ಒಟ್ಟು 1787 ಕೋಟಿ ಯೋಜನೆಗಳು ನೀರಾವರಿ, ಪ.ಪಂಗಡದ ಜನರು ವಾಸಿಸುವ ಕಡೆಗೆ 237 ಕೋಟಿ, ಮಾನವ – ವನ್ಯಜೀವಿ ಸಂಘರ್ಷ ನಿವಾರಣೆಗೆ ಚಾಮರಾಜನಗರ ಜಿಲ್ಲೆಗೆ 210 ಕೋಟಿ ವೆಚ್ಚದಲ್ಲಿ ರೈಲ್ವೆ ಬ್ಯಾರಿಕೇಡ್ ಹಾಕಲಾಗುವುದು ಎಂದರು.
ಕುಡಿಯುವ ನೀರಿನ ಯೋಜನೆಗೆ 317 ಕೋಟಿ, ಆರೋಗ್ಯ ಸುಧಾರಣೆಗೆ 210 ಕೋಟಿ, ಕೊಳ್ಳೇಗಾಲದಲ್ಲಿ ಜಿಲ್ಲಾ ಆಸ್ಪತ್ರೆ ನಿರ್ಮಿಸಲಾಗುವುದು. ಈಗ ಇರುವ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಿ 250 ಹಾಸಿಗೆಗಳ ಆಸ್ಪತ್ರೆ ಮಾಡಲಾಗುವುದು. ಪ್ರವಾಸೋದ್ಯಮ ಇಲಾಖೆಗೆ 300 ಕೋಟಿ, ಹೊಸ ತಾಲ್ಲೂಕಾದ ಹನೂರಿನಲ್ಲಿ ತಾಲ್ಲೂಕು ಭವನ, ತಾಲ್ಲೂಕು ಆಸ್ಪತ್ರೆ (50 ಹಾಸಿಗೆ ಸಾಮರ್ಥ್ಯ) ನಿರ್ಮಿಸಲಾಗುವುದು ಎಂದರು.
ಚಿಕ್ಕಲ್ಲೂರಿನಲ್ಲಿ ಮಂಟೇಸ್ವಾಮಿ, ಸಿದ್ದಪ್ಪಾಜಿ ಪ್ರಾಧಿಕಾರ ರಚನೆ ಮಾಡಲಾಗುವುದು. ಇಲವಾಲ ಹೋಬಳಿಯಲ್ಲಿ ಕ್ರಿಕೆಟ್ ಮೈದಾನಕ್ಕೆ ಜಾಗ ಕೊಡಲಾಗುವುದು. ಅಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನ ಮಾಡಲಾಗುವುದು ಎಂದರು.
ಭಾರತ್ ಜೋಡೊ ಸಂದರ್ಭದಲ್ಲಿ ಬದನವಾಳು ಗ್ರಾಮಕ್ಕೆ ಭೇಟಿ ಕೊಟ್ಟಿದ್ದೆವು. ಅಲ್ಲಿರುವ ಖಾದಿ ಗ್ರಾಮೋದ್ಯೋಗ ಕೇಂದ್ರ ಅಭಿವೃದ್ಧಿಗೆ 40 ಕೋಟಿ ನೀಡಲಾಗುವುದು. ಈ ವರ್ಷ 20 ಕೋಟಿ ಖರ್ಚು ಮಾಡಲಾಗುವುದು ಎಂದರು.
ಮೈಸೂರು ಏರ್‌ಪೋರ್ಟ್ ರನ್ ವೇ ವಿಸ್ತರಣೆಗೆ ಜಾಗ, ಮೈಸೂರಿನ ಹಳೆಯ ಜಿಲ್ಲಾಧಿಕಾರಿ ಕಚೇರಿಯನ್ನು 30 ಕೋಟಿ ವೆಚ್ಚದಲ್ಲಿ ಮ್ಯೂಸಿಯಂ ಆಗಿ ಅಭಿವೃದ್ಧಿ ಮಾಡಲಾಗುವುದು. ಬುಡಕಟ್ಟು ಜನರು ವಾಸಿಸುವ ಕಡೆಗಳಲ್ಲಿ ಮೂಲ ಸೌಕರ್ಯ ಒದಗಿಸಲಾಗುವುದು ಹಾಗೂ ಚಾಮರಾಜನಗರ, ಮೈಸೂರು ಜಿಲ್ಲೆಯ ವಿವಿಧ ತಾಲ್ಲೂಕಿನಲ್ಲಿ ಕೆರೆಗಳಿಗೆ ನೀರು ತುಂಬಿಸಲಾಗುವುದು ಎಂದರು.
ಚಾಮರಾಜನಗರದಲ್ಲಿ ಹೊಸ ಪ್ರವಾಸಿ ಮಂದಿರ ನಿರ್ಮಾಣ ಮಾಡಲಾಗುವುದು. ಅಲ್ಲಿ, ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ ಮಾಡಲಾಗುವುದು. ಕ್ರೀಡಾಂಗಣ ಅಭಿವೃದ್ಧಿಗೆ 15 ಕೋಟಿ ಕೊಡಲಾಗುವುದು ಎಂದರು.
ಸಚಿವ ಸಂಪುಟದ ಆರಂಭದಲ್ಲಿ ಶ್ರೀನಗರದಲ್ಲಿ ನಡೆದ ಉಗ್ರರ ದಾಳಿಗೆ ಖಂಡನಾ ನಿರ್ಣಯ ಕೈಗೊಳ್ಳಲಾಯಿತು. ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೋಪ್ ನಿಧನಕ್ಕೆ ಸಂತಾಪ ಸಲ್ಲಿಸಲಾಯಿತು.




