ಬೆಂಗಳೂರು: ರಾಜಾಜಿನಗರದಲ್ಲಿ ಧರ್ಮಸ್ಥಳ ಪಾದಯಾತ್ರ ಸಮಿತಿ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ದ ಅಪಪ್ರಚಾರ, ಷಡ್ಯಂತ್ರ, ನಿರಾಧಾರ ಆರೋಪ ಮಾಡಲಾಗಿದೆ ಎಂದು ಧರ್ಮ ರಕ್ಷಣೆಗಾಗಿ ಧರ್ಮದ ರಕ್ಷಣಾ ಪೂಜೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಮಾಜಿ ಶಿಕ್ಷಣ ಸಚಿವ, ಶಾಸಕ ಎಸ್.ಸುರೇಶ್ ಕುಮಾರ್ ನೇತೃತ್ವದಲ್ಲಿ ಮೋದಿ ವೃತ್ತದಿಂದ ಪಾದಯಾತ್ರೆ ಮೂಲಕ ಸಾಗಿ ಶ್ರೀ ಶನೇಶ್ವರ ಸ್ವಾಮಿ ಸನ್ನಿಧಾನ ಮತ್ತು ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಎಸ್.ಸುರೇಶ್ ಕುಮಾರ್ ಮಾತನಾಡಿ, ಶ್ರೀ ಕ್ಷೇತ್ರದ ಧರ್ಮಸ್ಥಳದ ವಿರುದ್ಧ ವ್ಯವಸ್ಥಿತವಾಗಿ ಅಪಪ್ರಚಾರ, ಷಡ್ಯಂತ್ರ, ಪಿತೂರಿ ಮಾಡುತ್ತಿದ್ದಾರೆ. ನಮ್ಮ ಧರ್ಮದ ವಿರುದ್ಧ ವ್ಯವಸ್ಥಿತ ಸಂಚು ನಡೆಯುತ್ತಿದೆ ಎಂದರು.
ಅಮಾಯಕಿ ಸೌಜನ್ಯ ಹತ್ಯೆಗೆ ನ್ಯಾಯ ದೊರಕಬೇಕು ಎಂಬ ಧ್ವನಿ ಎತ್ತಿರುವುದು ನಾವು. ಮುಸುಕುಧಾರಿಯ ಬಣ್ಣ ಬಯಲು ಆಗಿದೆ. ಅಪಪ್ರಚಾರಕ್ಕೆ ವಿಡಿಯೊ ಮಾಡಿದ ವ್ಯಕ್ತಿ ಯಾರೊ ಹೇಳಿ ಕೊಟ್ಟಿದ್ದು ಅಂತ ಹೇಳಿಕೆ ನೀಡಿದ್ದಾನೆ. ಬುರುಡೆ ಬಿಟ್ಟ ಬುರುಡೆ ವ್ಯಕ್ತಿಯ ಬಗ್ಗೆ ಪೂರ್ವಾಪರ ಯೋಚನೆ ಮಾಡದೇ ಇರುವುದು ಸರ್ಕಾರದ ವೈಫಲ್ಯ ಎಂದು ಕಾಣುತ್ತದೆ. ಅವನ ಮಾತುಗಳನ್ನು ಸರ್ಕಾರ ನಂಬಿರುವುದು ದುರಂತ ಎಂದರು.
ಕಂಚಿ ಕಾಮಕೋಟಿ, ಶಬರಿಮಲೆ ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ಮಾಡಿದ ಸಂಚುಗಳು ಸೋಲುತ್ತಿವೆ. ಜನರ ಭಾವನೆ ಭರವಸೆ ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲಿದೆ. ಜನರ ನಂಬಿಕೆಗೆ ಧಕ್ಕೆ ತರುತ್ತಿರುವ ವ್ಯಕ್ತಿಗಳಿಗೆ ಒಳ್ಳೆ ಬುದ್ಧಿ ಕೊಡಲಿ ಎಂದು ಮಂಜುನಾಥನಲ್ಲಿ ಪ್ರಾರ್ಥಿಸುತ್ತೇನೆ ಎಂದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆರವರಿಗೆ ಧೈರ್ಯ, ಆತ್ಮಸ್ಥೃೆರ್ಯ ಲಭಿಸಲಿ, ದುಷ್ಟ ಶಕ್ತಿಗಳಿಗೆ ಸೋಲಾಗಲಿ ಎಂದು ವಿಶೇಷ ಪೂಜೆ ನಡೆಯುತ್ತದೆ. ಷಡ್ಯಂತ್ರ ಮಾಡಿದವರು ಪರಿತಪಿಸುತ್ತಿದ್ದಾರೆ. ಅವರಿಗೆ ಒಳ್ಳೆ ಬುದ್ಧಿ ಕೊಡಲಿ. ಧರ್ಮ ಉಳಿಯಬೇಕು, ಅಧರ್ಮ ಅಳಿಯಬೇಕು ಎಂದು ವಿಶೇಷ ಪೂಜೆ ಸಲ್ಲಿಸುತ್ತಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ಮಾಜಿ ಮೇಯರ್ ರಂಗಣ್ಣ, ಪಾಲಿಕೆ ಮಾಜಿ ಸದಸ್ಯರುಗಳಾದ ಎಂ.ಮುನಿರಾಜು, ರಾಜಣ್ಣ , ಹೆಚ್.ಆರ್.ಕೃಷ್ಣಪ್ಪ, ಹೆಚ್.ವಿಜಯಕುಮಾರ್, ದೀಪಾ ನಾಗೇಶ್, ಪ್ರತಿಮ, ಮಂಡಲದ ಅಧ್ಯಕ್ಷ ಸುದರ್ಶನ್, ಪ್ರಧಾನ ಕಾರ್ಯದರ್ಶಿ ಗಿರೀಶ್ ಗೌಡ, ಬಿಜೆಪಿ ಮುಖಂಡರುಗಳಾದ ಕಾಮಧೇನು ಸುರೇಶ್, ಗಂಗಾಧರ್ (ಗೂಳಿ),ಯಶಸ್ ನಾಯಕ್, ಕೇಶವಮೂರ್ತಿ,ರಾಕೇಶ್, ವಿಶ್ವನಾಥ್, ಮೋಹನ್ ರಾಜು, ಕಿರಣ್, ಆನಿಲ್ ರಂಗಣ್ಣ,ಯುವ ಮೋರ್ಚಾ ಅಧ್ಯಕ್ಷರಾದ ಸಂಜಯ್ ಕುಮಾರ್ ರವರು ಮತ್ತು ಹಿಂದೂ ಪರ ಹೋರಾಟಗಾರರು, ಬಿಜೆಪಿ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.







