ವೀರೇಂದ್ರ ಹೆಗ್ಗಡೆ ಬೆಂಬಲಿಸಿ ಬಿಜೆಪಿ ಧರ್ಮ ಯಾತ್ರೆ
ಬೆಂಗಳೂರು: ಅಸಹಜ ಸಾವುಗಳ ಆರೋಪದ ಪ್ರಕರಣದ ಹೆಸರಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಪಾವಿತ್ರ್ಯಕ್ಕೆ ಧಕ್ಕೆ ತರುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿರುವ ಬಿಜೆಪಿ ಈ ಬಗ್ಗೆ ರಾಷ್ಟ್ರೀಯ ತನಿಖಾ ದಳ(ಎನ್ ಐಎ)ದ ತನಿಖೆ ನಡೆಸಲು ಆಗ್ರಹಿಸಿದೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಧರ್ಮಸ್ಥಳದೊಂದಿಗೆ ನಾವಿದ್ದೇವೆ ಎಂದು ಬೃಹತ್ ಧರ್ಮ ಯಾತ್ರೆ ನಡೆಸಿದ ಬಿಜೆಪಿ ನಾಯಕರು ರಾಜ್ಯ ಸರ್ಕಾರ ಮತ್ತು ತಲೆ ಬುರುಡೆ ಖ್ಯಾತಿಯ ಹೋರಾಟಗಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ, ಹಿಂದೂ ವಿರೋಧಿ ಸರ್ಕಾರಕ್ಕೆ ಪಾಠ ಕಲಿಸಲು ಧರ್ಮಸ್ಥಳ ಚಲೋ ಆರಂಭಿಸಲಾಗಿದೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ನಂತರ, ಕರ್ನಾಟಕದ ರಾಜ್ಯದ ಗೃಹಮಂತ್ರಿಯನ್ನು ಅವರ ಮನೆಗೆ ಹೋಗಲು ಸರ್ಕಾರ ತಡೆದಿದೆ ಎಂದರು.
ಧರ್ಮಸ್ಥಳ ವಿಚಾರದಲ್ಲಿ ಒಂದು ತಿಂಗಳಿಂದ ನಿತ್ಯ ಅಪಪ್ರಚಾರ ನಡೆಯುತ್ತಿದೆ. ಇಲ್ಲಿಯವರೆಗೂ ತಾಳ್ಮೆಯಿಂದಲೂ ಇದ್ದೆವು. ಧರ್ಮಸ್ಥಳ ವಿಚಾರಕ್ಕೆ ಎಸ್‌ಐಟಿ ತನಿಖೆ ವೇಳೆ ನಾವು ಸ್ವಾಗತಿಸಿದ್ದೆವು. ಆದರೆ, ಅಪಪ್ರಚಾರ ಆಗುತ್ತಿದ್ದರೆ, ಸರ್ಕಾರ ತಡೆಯುತ್ತದೆ ಎಂದುಕೊಂಡೆವು. ಆದರೆ, ಮಾಡಲಿಲ್ಲ ಎಂದರು.




