ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ)ದ ಅಧಿಕಾರಿಗಳು ನೇತ್ರಾವತಿ ನದಿಯ ತಟದಲ್ಲಿ ಸ್ಥಳ ಮಹಜರು ಆರಂಭಿಸಿದ್ದಾರೆ.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ಎಸ್‌ಐಟಿ ವಿಚಾರಣೆ ವೇಳೆ ದೂರುದಾರ, ತಲೆ ಬುರುಡೆಯನ್ನು ನೇತ್ರಾವತಿ ಸ್ನಾನಘಟ್ಟದ ಬಳಿಯಿಂದ ಹೊರತೆಗೆದಿರುವುದಾಗಿ ತಿಳಿಸಿದ್ದ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ತಂಡ ಫೊರೆನ್ಸಿಕ್ ಇಲಾಖೆಯ ಹಿರಿಯ ಅಧಿಕಾರಿಗಳು, ಕಂದಾಯ ಇಲಾಖೆ, ಅರಣ್ಯ ಇಲಾಖೆ ಮತ್ತು ಸರ್ವೇ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಸ್ಥಳ ಮಹಜರು ಕೈಗೊಂಡರು.
ಎಸ್‌ಐಟಿ ಎಸ್ಪಿ ಸಿ.ಎ.ಸೈಮನ್ ನೇತೃತ್ವದಲ್ಲಿ ದೂರುದಾರನನ್ನು ಅಧಿಕಾರಿಗಳು ಸ್ಥಳಕ್ಕೆ ಕರೆತಂದಿದ್ದು, ಪೊಲೀಸ್ ಬಿಗಿ ಭದ್ರತೆಯಲ್ಲಿ ಸ್ಥಳ ಮಹಜರು ನಡೆಸಿದರು.
ದೂರುದಾರ ಶವಗಳನ್ನು ಹೂತಿರುವುದಾಗಿ ಹೇಳಿರುವ ಎಲ್ಲಾ ಸ್ಥಳಗಳನ್ನು ಎಸ್‌ಐಟಿ ಅಧಿಕಾರಿಗಳಾದ ಎಸ್ ಪಿ ಜಿತೇಂದ್ರ ಕುಮಾರ್ ದಯಾಮ ಮತ್ತು ಎಸ್ಪಿ ಸಿ.ಎ.ಸೈಮನ್, ಅರಣ್ಯ ಇಲಾಖೆಯ ರೇಂಜರ್ ತ್ಯಾಗರಾಜ್ ಸೇರಿ ಇನ್ನಿತರರ ಸಮ್ಮುಖದಲ್ಲಿ ಪರಿಶೀಲನೆ ನಡೆಸಿದರು.
ಕಳೆದ ಎರಡು ದಿನಗಳಿಂದ ಎಸ್‌ಐಟಿ ತಂಡ ದೂರುದಾರನನ್ನು ಸುಮಾರು 14 ಗಂಟೆಗಳ ಕಾಲ ವಿಚಾರಣೆ ನಡೆಸಿ ಹಲವು ಮಹತ್ವದ ಮಾಹಿತಿಗಳನ್ನು ಪಡೆದುಕೊಂಡಿದೆ.
ಇಂದಿನಿಂದ ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಯಿಂದ ಕಾರ್ಯಾಚರಣೆ ನಡೆಸಲಿದ್ದು, ದೂರುದಾರನ ಹೇಳಿಕೆ ಆಧಾರದ ಮೇಲೆ ಡಿಜಿಪಿ ಪ್ರಣವ್ ಮೊಹಂತಿ ತಂಡ ತನಿಖೆ ಚುರುಕುಗೊಳಿಸಿದ್ದಾರೆ.
ಸ್ಥಳ ಮಹಜರು ಬಳಿಕ ದೂರುದಾರನನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆಯಿದ್ದು, ನಂತರ ಆತ ಹೂತ್ತಿದ್ದೇನೆ ಎನ್ನಲಾಗುತ್ತಿರುವ ಪ್ರದೇಶಗಳ ಪರಿಶೀಲನೆ ನಡೆಸುವ ಸಾಧ್ಯತೆಯಿದೆ.



