ಬೆಂಗಳೂರು: ಧರ್ಮಸ್ಥಳದಲ್ಲಿ ನಿಗೂಢವಾಗಿ ಶವ ಹೂತಿಟ್ಟ ಪ್ರಕರಣ ತನಿಖೆಗೆ ರಚಿಸಲಾಗಿರುವ ಎಸ್‌ಐಟಿ ತಂಡ ಧರ್ಮಸ್ಥಳಕ್ಕೆ ತೆರಳಿ ಕಾರ್ಯಾಚರಣೆ ಆರಂಭಿಸಿದೆ.
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
- ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ: ಸಿದ್ದರಾಮಯ್ಯ
ಇದರ ಬೆನ್ನಲ್ಲೇ ಶವ ಹೂತ ಪ್ರಕರಣದ ತನಿಖೆಗೆ ಹಲವು ವಿಜ್ಞಾನಿಗಳು, ಇಂಜಿನಿಯರ್‌ಗಳು ಹಾಗೂ ತಾಂತ್ರಿಕ ತಜ್ಞರು ತಮ್ಮ ಸೇವೆಗಳನ್ನು ಸ್ವಯಂಪ್ರೇರಿತವಾಗಿ ನೀಡಲು ಮುಂದೆ ಬಂದಿದ್ದಾರೆ.
ಈ ಹಿನ್ನೆಲೆಯಲ್ಲಿ 2003ರಲ್ಲಿ ನಾಪತ್ತೆಯಾಗಿದ್ದ ಯುವತಿಯ ತಾಯಿ ಸುಜಾತಾ ಭಟ್ ಅವರನ್ನು ಸಂಪರ್ಕಿಸಿ ನ್ಯಾಯಾಲಯದ ಮುಂದಿಟ್ಟು ಅನುಮತಿ ಪಡೆಯುವಂತೆ ಮನವಿ ಮಾಡಿದ್ದಾರೆ.
ಈ ಕುರಿತಂತೆ ಸುಜಾತ ಭಟ್ ಪರ ವಕೀಲ ಮಂಜುನಾಥ್ ಪತ್ರಿಕಾ ಹೇಳಿಕೆ ನೀಡಿದ್ದು, ತಜ್ಞರು ತಮ್ಮ ವೈಜ್ಞಾನಿಕ ಜ್ಞಾನ ಹಾಗೂ ಅನುಭವವನ್ನು ಹಂಚಿಕೊಳ್ಳಲು ನಮ್ಮನ್ನು ಸಂಪರ್ಕಿಸಿದ್ದಾರೆ. ಧರ್ಮಸ್ಥಳದಲ್ಲಿ ಶವ ಹೂತಿರುವ ಸ್ಥಳವನ್ನು ಅನಾವರಣಗೊಳಿಸಲು ಮತ್ತು ಡಿಎನ್‌ಎ ಮ್ಯಾಚಿಂಗ್ ಪ್ರಕ್ರಿಯೆಗಾಗಿ ಅಗತ್ಯವಿರುವ ತಂತ್ರಜ್ಞಾನವನ್ನು ಬಳಸುವ ಬಗ್ಗೆ ಅವರು ಸಲಹೆ ನೀಡಲು ಸಿದ್ಧರಾಗಿದ್ದಾರೆ ಎಂದರು.
ಇನ್ನು ತಜ್ಞರು ಉಲ್ಲೇಖಿಸಿದಂತೆ, ಸಮಾಧಿ ತೆರೆಯುವ ಕಾರ್ಯವನ್ನು ಹೆಚ್ಚು ಪರಿಣಾಮಕಾರಿಯಾಗಿ ಪತ್ತೆ ಮಾಡುವುದು, ಶವದ ಗುರುತು ಪತ್ತೆಗೆ ವೈದ್ಯಕೀಯ ಮತ್ತು ಪೋಲಿಸ್ ಅಧಿಕಾರಿಗಳಿಗೆ ಪೂರಕವಾಗಿ ಕೆಲಸ ಮಾಡುವುದಾಗಿ ಮುಂದೆ ಬಂದಿದ್ದಾರೆ. ಎಲ್ಲರ ಸಹಕಾರದಿಂದ ಈ ತನಿಖೆಯನ್ನು ಮಾಡಿದಲ್ಲಿ ಪ್ರಕರಣವನ್ನು ಸತ್ಯದ ಹಾದಿಯತ್ತ ಕೊಂಡೊಯ್ಯಲು ಸಹಕಾರಿಯಾಗುತ್ತದೆ.
ಈ ಬೆಳವಣಿಗೆಯ ಮಧ್ಯೆ, ವಕೀಲ ಮಂಜುನಾಥ್ ಅವರು ವಿಶೇಷ ತನಿಖಾ ತಂಡ ತನಿಖಾ ಪ್ರಕ್ರಿಯೆ ಪ್ರಾಮಾಣಿಕವಾಗಿರಲಿ ಎಂಬ ದೃಷ್ಟಿಯಿಂದ, ಈ ತಜ್ಞರ ಸಂಪರ್ಕ ಮಾಹಿತಿಯನ್ನು ಸಾರ್ವಜನಿಕವಾಗಿ ಲಭ್ಯವಾಗುವಂತೆ ಮಾಡಬೇಕೆಂದು ಆಗ್ರಹಿಸಿದ್ದಾರೆ.
ಮತ್ತೊಂದೆಡೆ ತನಿಖೆಯ ಅಖಾಡಕ್ಕೆ ಧುಮುಕಿರುವ ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ, ತಮ್ಮ ತಂಡದ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಈ ನಡುವೆ ಡಿಐಜಿ ಎಂ.ಎನ್ ಅನುಚೇತ್ ಅವರು ಕಾರ್ಯಸೂಚಿ ಸಿದ್ಧಪಡಿಸಿದ್ದಾರೆ. ಪ್ರಕರಣ ಸಂಬಂಧ ತುರ್ತು ಕೈಗೊಳ್ಳಬೇಕಾದ ಕಾರ್ಯಗಳ ವಿವರಣೆ ಹಾಗೂ ನ್ಯಾಯಾಲಯದಿಂದ ಅನುಮತಿ ಪಡೆಯುವ ಬಗ್ಗೆ ಚರ್ಚಿಸಲಾಯಿತು.
ಧರ್ಮಸ್ಥಳದ ಸುತ್ತಮುತ್ತ ನಡೆದಿದೆ ಎನ್ನಲಾಗಿರುವ ಅಸಹಜ ಸಾವುಗಳ ಕುರಿತಾಗಿ ಕೇಳಿ ಬಂದ ಆರೋಪಗಳಿಗೆ ಸಂಬಂಧಿಸಿದಂತೆ ಅನಾಮಧೇಯ ವ್ಯಕ್ತಿ ನೀಡಿರುವ ದೂರಿನನ್ವಯ ಆತನನ್ನು ಕರೆ ತಂದು ವಿಚಾರಣೆಗೆ ಒಳಪಡಿಸಿ ಹೇಳಿಕೆಗಳನ್ನು ಪಡೆಯುವ ಸಾಧ್ಯತೆ ಇದೆ.
ಅನಾಮಧೇಯ ವ್ಯಕ್ತಿ ಶವಗಳನ್ನು ಹೂಳಿರುವ ಜಾಗಗಳಲ್ಲಿ ತನಿಖಾ ತಂಡ ಶೋಧ ನಡೆಸಿ, ಪರಿಶೀಲಿಸಿ, ವಿಡಿಯೋ ಚಿತ್ರೀಕರಣ ಸೇರಿದಂತೆ ಪ್ರಾಥಮಿಕ ಹಂತದ ಕಾರ್ಯಾಚರಣೆಗಳ ಬಗ್ಗೆ ಡಿಐಜಿ ಅನುಚೇತ್ ಅವರು ತನಿಖಾ ತಂಡದ ಜೊತೆ ಸರಣೆ ಸಭೆಗಳನ್ನು ನಡೆಸುತ್ತಿದ್ದಾರೆ. ಸಿಬ್ಬಂದಿ ನಿರ್ವಹಿಸಬೇಕಾದ ಕೆಲಸ ಕಾರ್ಯಗಳನ್ನು ಅನುಚೇತ್ ಹಂಚಿಕೆ ಮಾಡಿ ಇಂಚಿಂಚು ಮಾಹಿತಿಗಳನ್ನು ಸಂಗ್ರಹಿಸುವಂತೆ ಸೂಚನೆ ನೀಡಿದ್ದಾರೆ.




