ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದಾರೆ. ಮನುಷ್ಯನ ತಲೆಬುರುಡೆ ದೊರಕಿದ ಸ್ಥಳ ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯ ಕುಟುಂಬದವರ ಹೇಳಿಕೆ ಮಾಧ್ಯಮಗಳಲ್ಲಿ ಪ್ರಸಾರವಾಗಿರುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
ಈ ಪ್ರದೇಶದಲ್ಲಿ ಅಸಹಜ ಸಾವುಗಳು, ಕೊಲೆ, ಅತ್ಯಾಚಾರ ಹೀಗೆ ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳು ನಡೆದಿರಬಹುದಾಗಿದ್ದು, ಸಮಗ್ರ ಮತ್ತು ನಿಷ್ಪಕ್ಷ ತನಿಖೆಗಾಗಿ ಎಸ್‌ಐಟಿ ರಚಿಸುವಂತೆ ಕೋರಿ ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಸರ್ಕಾರಕ್ಕೆ ಪತ್ರ ಬರೆದಿತ್ತು ಎಂದಿದ್ದಾರೆ.
ಈ ಪ್ರಕರಣದ ಕುರಿತಂತೆ ಉನ್ನತ ಮಟ್ಟದ ತನಿಖೆಯಾಗಬೇಕು ಎಂಬುದಾಗಿ ಸಾರ್ವಜನಿಕ ವಲಯದಿಂದಲೂ ಅಭಿಪ್ರಾಯ ಮತ್ತು ಒತ್ತಾಯಗಳು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆಗಾಗಿ ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಡಾ. ಪ್ರಣವ್ ಮೊಹಾಂತಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ಆದೇಶಿಸಲಾಗಿದೆ ಎಂದಿದ್ದಾರೆ.
ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ದೂರು ಸೇರಿದಂತೆ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯದ ಇತರೆ ಠಾಣೆಗಳಲ್ಲಿ ದಾಖಲಾಗಿರುವ ಮತ್ತು ದಾಖಲಾಗುವ ಎಲ್ಲ ಕ್ರಿಮಿನಲ್ ಪ್ರಕರಣಗಳ ಸಮಗ್ರ ತನಿಖೆಯನ್ನು ಎಸ್‌ಐಟಿ ನಡೆಸಲಿದೆ ಎಂದಿದ್ದಾರೆ.
ವಿಶೇಷ ತನಿಖಾ ತಂಡವು ಕೈಗೊಳ್ಳುವ ಪ್ರಕರಣದ ತನಿಖೆಯ, ತನಿಖಾ ಪ್ರಗತಿಯನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಆಗಿಂದಾಗ್ಗೆ ವರದಿ ಮಾಡುವಂತೆ ಸರ್ಕಾರವು ಆದೇಶಿಸಿದೆ ಎಂದಿದ್ದಾರೆ.




