ಬೆಂಗಳೂರು: ಧರ್ಮಸ್ಥಳದ ಅಸಹಜ ಸಾವಿನ ಪ್ರಕರಣಗಳ ಬಗ್ಗೆ ಯಾವುದೇ ರೀತಿಯ ಪ್ರಚೋದನಾಕಾರಿ, ಆಕ್ಷೇಪಾರ್ಹ ಮತ್ತು ಸುಳ್ಳು ಸುದ್ದಿ, ಮಾಹಿತಿಗಳನ್ನು ಹರಡದಂತೆ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಈ ಕುರಿತಾಗಿ ಪ್ರಚೋದನಾಕಾರಿ ಆಕ್ಷೇಪಾರ್ಹ ಮತ್ತು ಸುಳ್ಳು ಸುದ್ದಿಗಳನ್ನು ಹರಡಿದರೆ ಅಥವಾ ಫಾರ್ವರ್ಡ್ ಮಾಡಿದರೆ ಅವುಗಳಿಗೆ ಪ್ರತಿಕ್ರಿಯೆಗಳನ್ನು ನೀಡಿದರೆ ಕಾನೂನು ಕ್ರಮ ಜರುಗಿಸಲು ತೀರ್ಮಾನಿಸಿದೆ.
ಧರ್ಮಸ್ಥಳದ ವಿದ್ಯಮಾನ ಕುರಿತಂತೆ ಗೃಹ ಮಂತ್ರಿ ಜಿ ಪರಮೇಶ್ವರ್ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ, ಡಿಜಿಪಿ ಪ್ರಣಬ್ ಮೊಹಂತಿ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಹಿರಿಯ ಪೊಲೀಸ್ ಅಧಿಕಾರಿಗಳಾದ ಮುರುಗನ್, ಶರತ್ ಚಂದ್ರ ಅವರೊಂದಿಗೆ ಸಭೆ ನಡೆಸಿದರು.
ಸಭೆಯಲ್ಲಿ ಸುಳ್ಳು ಸುದ್ದಿ ಮತ್ತು ಪ್ರಚೋದನಕಾರಿ ಮಾಹಿತಿಗಳನ್ನು ಹಂಚಿಕೊಳ್ಳುತ್ತಿರುವುದರಿಂದ ಸಾಕಷ್ಟು ಗೊಂದಲ ಉಂಟಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಿ ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡ ಸೂಕ್ತ ರೀತಿಯಲ್ಲಿ ತನಿಖೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ.
ಸುಳ್ಳು ಸುದ್ದಿಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿರುವ ಪ್ರಚೋದನಕಾರಿ ಹೇಳಿಕೆ ಮತ್ತು ಫಾರ್ವರ್ಡ್ ಗಳಿಂದಾಗಿ ತನಿಖಾ ತಂಡದ ಮೇಲೆ ಸಾಕಷ್ಟು ಒತ್ತಡ ಉಂಟಾಗುತ್ತಿದೆ ಇದನ್ನು ತಪ್ಪಿಸುವ ದೃಷ್ಟಿಯಿಂದ ಸುಳ್ಳು ಸುದ್ದಿ ಮತ್ತು ಪ್ರಚೋದನಕಾರಿ ಹೇಳಿಕೆಗಳಿಗೆ ತಡೆವಾಡ ಹಾಕಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇದಕ್ಕೂ ಮುನ್ನ ವಿಶೇಷ ತನಿಕ ತಂಡದ ಮುಖ್ಯಸ್ಥ ಪ್ರಣಾಬ್ ಮೊಹಾಂತಿ ಅವರು ಪರಮೇಶ್ವರ್ ಅವರನ್ನು ಭೇಟಿ ಮಾಡಿ ತನಿಖೆಯ ಕುರಿತು ಸಂಪೂರ್ಣ ವಿವರವನ್ನು ನೀಡಿದರು.
ಉತ್ಖನನ ನಡೆಯುತ್ತಿರುವ ನಡೆಯುತ್ತಿರುವ ಸ್ಥಳದಲ್ಲಿ ದೊರಕಿರುವ ಅಸ್ತಿಪಂಜರದ ಮೂಳೆಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಅದರ ವರದಿ ಬಂದ ನಂತರ ಮೃತ ದೇಹ ಮಹಿಳೆ ಅಥವಾ ಪುರುಷರದ್ದು ಎಂಬ ಬಗ್ಗೆ ಮಾಹಿತಿ ಲಭ್ಯವಾಗಲಿದೆ. ಸದ್ಯ ಲಭ್ಯವಿರುವ ಮಾಹಿತಿ ಆಧರಿಸಿ ಮೃತದೇಹ ಯಾರಿಗೆ ಸೇರಿದ್ದು ಎಂಬ ಬಗ್ಗೆ ತನಿಖೆ ಮುಂದುವರೆದಿದೆ ತಿಳಿಸಿರುವುದಾಗಿ ಗೊತ್ತಾಗಿದೆ.
ಭೇಟಿಯ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹಸಚಿವ ಜಿ ಪರಮೇಶ್ವರ್, ವಿಶೇಷ ತನಿಖಾ ತಂಡ ತನ್ನ ತನಿಖೆಯನ್ನು ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿ ನೀಡುವವರೆಗೆ ತನಿಖೆಯ ಕುರಿತು ಯಾವುದೇ ಮಾಹಿತಿಯನ್ನು ಹಂಚಿಕೊಳ್ಳುವುದಿಲ್ಲ ಎಂದರು.
ಇದೊಂದು ಸೂಕ್ಷ್ಮ ಪ್ರಕರಣವಾಗಿದೆ. ವಿಶೇಷ ತನಿಖಾ ತಂಡ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದೆ. ಇದರ ಪ್ರಗತಿಯ ಬಗ್ಗೆ ಪ್ರತಿನಿತ್ಯ ಮಾಹಿತಿ ನೀಡುವುದರಿಂದ ತನಿಖೆಯ ಸ್ವರೂಪ ಬದಲಾಗುವ ಸಾಧ್ಯತೆ ಇದೆ. ಹೀಗಾಗಿ ವರದಿ ತಮ್ಮ ಕೈ ಸೇರುವವರಿಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
ತನಿಖಾ ತಂಡದ ಮುಖ್ಯಸ್ಥರಾಗಿರುವ ಪ್ರಣಬ್ ಮೊಹಾಂತಿ ಅವರು ರಾಜ್ಯದಿಂದ ಕೇಂದ್ರ ಸೇವೆಗೆ ಹೋಗಲಿರುವ ಐಪಿಎಸ್ ಅಧಿಕಾರಿಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಇದ್ದಾರೆ. ಆದರೆ ಸದ್ಯಕ್ಕೆ ಅವರನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸುವ ಯಾವುದೇ ಪ್ರಸ್ತಾಪ ತಮ್ಮ ಮುಂದೆ ಇಲ್ಲ ಎಂದರು.
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಾವತಿ ನದಿ ಪಕ್ಕದ ಕಾಡಿನಲ್ಲಿ ಮೃತದೇಹಗಳ ಅವಶೇಷ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಪ್ರಕರಣದ ಸಾಕ್ಷಿ ದೂರುದಾರ ಕಾಡಿನಲ್ಲಿ ತೋರಿಸಿದ ಏಳನೇ ಜಾಗವನ್ನು ಆತನ ಸಮ್ಮುಖದಲ್ಲಿ ವಿಶೇಷ ತನಿಖಾ ತಂಡದವರು (ಎಸ್‌ಐಟಿ) ಅಗೆಯಿಸುತ್ತಿದ್ದಾರೆ. ಎಸ್‌ಐಟಿ ಈ ಸಲುವಾಗಿ ತಂಡದ ಜೊತೆ ಸುಮಾರು 20 ಕಾರ್ಮಿಕರು ಹಾರೆ ಪಿಕಾಸಿಯೊಂದಿಗೆ ಕಾಡಿನ ಒಳಗೆ ತೆರಳಿದ್ದಾರೆ. ಅಗೆಯಲು ಯಂತ್ರವನ್ನು ಕಾಡಿನೊಳಗೆ ಕೊಂಡೊಯ್ಯಲಾಗಿದೆ
ಸಾಕ್ಷಿ ದೂರುದಾರ, ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ , ಎಸ್‌ಐಟಿಯ ಎಸ್ಪಿ ಜಿತೇಂದ್ರ ಕುಮಾರ್ ದಯಾಮ ಸ್ಥಳದಲ್ಲಿದ್ದರು.




