ವಿಜಯಪುರ: 47 ದಿನಗಳ ಕಾಲ ಮಕ್ಕಳ ಭವಿಷ್ಯದೊಂದಿಗೆ ಚೆಲ್ಲಾಟವಾಡಿದ ಪರಿಣಾಮ, ಲಕ್ಷಾಂತರ ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾದರು ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದರು.
- ಟಿಪ್ಪು ಸುಲ್ತಾನ್ ಶಹೀದ್ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ ಪ್ರದಾನ
- ಕನ್ನಡ ಪತ್ರಿಕೋದ್ಯಮಕ್ಕೆ ಮತ್ತೊಂದು ಹೊಸ ಗರಿ
- ರಾಜಕೀಯ, ಸಾಮಾಜಿಕ, ಆರ್ಥಿಕ ಬದುಕು ಕಟ್ಟಿಕೊಟ್ಟ ಕಾಂಗ್ರೆಸ್ ಹಿಂದೂ ವಿರೋಧಿ!
- ಪುಟ್ಟ ‘ಒಡೆಯ’ನನ್ನು ಪರಿಚಯಿಸಿದ ಡಾಲಿ ಧನಂಜಯ
- ಸತೀಶ್ ಜಾರಕಿಹೊಳಿ ಅವರನ್ನು ಸಂಪುಟದಿಂದ ಹೊರಗಿಡಬೇಕು: ಆರ್ ಅಶೋಕ್
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಾರು ಒಂದೂವರೆ ಲಕ್ಷ ವಿದ್ಯಾರ್ಥಿಗಳು ಎರಡನೇ ಬಾರಿ ನಡೆದ NEET ಪರೀಕ್ಷೆಗೆ ಹಾಜರಾಗಲಿಲ್ಲ. ಯುವ ಸಮೂಹದ ಸುದೀರ್ಘ ಹೋರಾಟದ ನಂತರ ಕುಂಭಕರ್ಣ ನಿದ್ದೆಯಿಂದ ಎಚ್ಚೆತ್ತುಕೊಂಡು, ಕೇಂದ್ರ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಬೇಕಾಯಿತು ಎಂದರು.
2014ರಲ್ಲಿ “ಅಚ್ಚೇ ದಿನ್” ಎಂಬ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕೇಂದ್ರದ ಮೋದಿ ನೇತೃತ್ವದ ಸರ್ಕಾರದ ಆಡಳಿತದಲ್ಲಿ, ಶಿಕ್ಷಣ, ಉದ್ಯೋಗ ಹಾಗೂ ಜನಜೀವನಕ್ಕೆ ಸಂಬಂಧಿಸಿದ ಅನೇಕ ನಿರ್ಧಾರಗಳು ಸಾರ್ವಜನಿಕ ಅಸಮಾಧಾನಕ್ಕೆ ಕಾರಣವಾಗಿವೆ ಎಂದರು.
ಎಥೆನಾಲ್ ಮಿಶ್ರಿತ ಇಂಧನದ ಬಳಕೆಯನ್ನು ವಿಸ್ತರಿಸುವಂತಹ ಮಹತ್ವದ ನೀತಿಗಳನ್ನು ಜಾರಿಗೊಳಿಸುವ ಮೊದಲು, ಸಮಗ್ರ ವೈಜ್ಞಾನಿಕ ಅಧ್ಯಯನ, ವಾಹನ ತಯಾರಕರ ಅಭಿಪ್ರಾಯ ಹಾಗೂ ದೀರ್ಘಾವಧಿಯ ಪರಿಣಾಮಗಳ ಕುರಿತು ವ್ಯಾಪಕ ಪರಿಶೀಲನೆ ನಡೆಸಬೇಕಿತ್ತು ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಇಂತಹ ವಿಷಯಗಳು ಮುಂದಿನ ದಿನಗಳಲ್ಲಿ ದೊಡ್ಡ ಸಾರ್ವಜನಿಕ ಚರ್ಚೆ ಹಾಗೂ ಹೋರಾಟದ ರೂಪ ಪಡೆಯುವ ಸಾಧ್ಯತೆಯನ್ನೂ ಅಲ್ಲಗಳೆಯಲು ಸಾಧ್ಯವಿಲ್ಲ ಎಂದು ಭವಿಷ್ಯ ನುಡಿದರು.




