ಧಾರವಾಡ: ಧಾರವಾಡ ನಗರ ವಿದ್ಯಾಕಾಶಿ ಎಂದು ಹೆಸರು ಪಡೆದಿದ್ದು, ಹುಬ್ಬಳ್ಳಿ ಧಾರವಾಡ ಅವಳಿ ನಗರಗಳಿಗೆ ಪ್ರತಿದಿನ ಭೇಟಿಕೊಡುವ ಸಾರ್ವಜನಿಕ ಪ್ರಯಾಣಿಕರ ಸಂಖ್ಯೆಯು ಹೆಚ್ಚುತ್ತಿದೆ. ಪ್ರಯಾಣಿಕರಿಗೆ ವಿಶೇಷವಾಗಿ ವಿದ್ಯಾರ್ಥಿಗಳಿಗೆ ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಧಾರವಾಡ ನಗರ ಸಾರಿಗೆ ಬಸ್ ನಿಲ್ದಾಣವನ್ನು ಮರು ನಿರ್ಮಾಣಗೊಳಿಸಲಾಗುತ್ತಿದೆ ಎಂದು ಎನ್‍ಡಬ್ಲ್ಯೂಕೆಎಸ್‍ಆರ್‍ಟಿಸಿಯ ವ್ಯವಸ್ಥಾಪಕ ನಿರ್ದೇಶಕ ಪ್ರಿಯಾಂಗ ತಿಳಿಸಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಾಮಗಾರಿಗೆ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಜನೇವರಿ 8, 2024 ರಂದು ಶಂಕುಸ್ಥಾಪನೆಯನ್ನು ನೆರವೇರಿಸಿದ್ದರು. ಇಲಾಖೆ ಮತ್ತು ಸರ್ಕಾರದ ನಗರ ಭೂಸಾರಿಗೆ ನಿರ್ದೇಶನಾಲಯ ನೀಡಿರುವ ಅನುದಾನದಲ್ಲಿ ಕಾಮಗಾರಿಯನ್ನು ಪ್ರಾರಂಭಿಸಲಾಗಿದೆ. ಕಾಮಗಾರಿಗೆ ನಿಗಪಡಿಸಿದ ಕಾಲಾವಧಿಯು 12 ತಿಂಗಳಾಗಿದ್ದು, ಒಪ್ಪಂದದ ಪ್ರಕಾರ ಗುತ್ತಿಗೆದಾರರು ಮೇ 14, 2025 ರಂದು ಪೂರ್ಣಗೊಳಿಸಬೇಕಿದ್ದು, ಅದಕ್ಕೂ ಪೂರ್ವದಲ್ಲೇ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಸ್ತುತ ಬಸ್ ನಿಲ್ದಾಣದ ಮುಖ್ಯ ಕಟ್ಟಡ ಪ್ಲಿಂತ್ ಮಟ್ಟಕ್ಕೆ ಬಂದಿದ್ದು, ಫ್ಲೋರ್ ಕಾಲಂ ಎತ್ತರಿಸುವ ಕೆಲಸ ಹಾಗೂ ಬಸ್ ನಿಲುಗಡೆ ಅಂಕಣಗಳ ಕಾಲಂ ಕಾಂಕ್ರೀಟ್ ಕೆಲಸ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ.




