ಯುವ ನಟ, ಆಕ್ಷನ್ ಪ್ರಿನ್ಸ್, ಸಹೋದರ ಧ್ರುವ ಸರ್ಜಾ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು.
- ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಪೋಸ್ಟ್ ಕುರಿತು ಯೋಗೇಶ್ ಮಾಸ್ಟರ್ ಸ್ಪಷ್ಟೀಕರಣ
- ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆಗಾಗಿ ದೀರ್ಘಾವಧಿ ಯೋಜನೆ: ಕೃಷ್ಣ ಬೈರೇಗೌಡ
- ಹಾರಿಕಾ ಮಂಜುನಾಥ್ ವಿದೇಶಿ ವಿಶ್ವವಿದ್ಯಾಲಯಗಳಿಂದ ಡಿಗ್ರಿ ಪಡೆದಿದ್ದಾರೆಯೇ?
- ಪೌರ ಕಾರ್ಮಿಕರ ದಿರಿಸಿನಲ್ಲಿ ಡಿ ಕೆ ಶಿವಕುಮಾರ್
- ಹಾಸನದಲ್ಲಿ ಭಗತ್ ಸಿಂಗ್ ಜನ್ಮದಿನದ ಅಂಗವಾಗಿ ‘ನಾನೇಕೆ ನಾಸ್ತಿಕ’ ಸಮಾವೇಶ
ಕನ್ನಡ ಚಿತ್ರರಂಗದಲ್ಲಿ ಯುವ ನಾಯಕ ನಟನಾಗಿ ಬೆಳೆಯುವ ಮೂಲಕ ತನ್ನದೇ ಆದ ಖ್ಯಾತಿಯನ್ನು ಹೊಂದಿರುವ ಸಹೋದರ ಧ್ರುವ ಸರ್ಜಾ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರುತ್ತೇನೆ.
ಮಗಳು ಬ್ರಹ್ಮಣಿಯ ಮದುವೆಯ ಆಮಂತ್ರಣ ಪತ್ರಿಕೆ ನೀಡುವ ಸಂದರ್ಭದಲ್ಲಿ, ಧ್ರುವ ಸರ್ಜಾ ಅವರ ಮದುವೆಯ ಸಂದರ್ಭದಲ್ಲಿ ಹಾಗೂ ಕಳೆದ ಮಾರ್ಚ್ ತಿಂಗಳಲ್ಲಿ ಜರುಗಿದ ವಿಶ್ವವಿಖ್ಯಾತ ಆನೆಗೊಂದಿ ಉತ್ಸವದಲ್ಲಿ ಸಹೋದರ ಧ್ರುವ ಸರ್ಜಾರವರೊಂದಿಗೆ ವೇದಿಕೆ ಹಂಚಿಕೊಂಡ ಕ್ಷಣಗಳು ಈಗಲೂ ನನ್ನ ಮನದಲ್ಲಿ ಹಾಗೆಯೇ ಇವೆ.
ಸಹೋದರ ಧ್ರುವ ಸರ್ಜಾ ಅವರು ಈವರೆಗೂ ನಾಲ್ಕು ಚಿತ್ರಗಳಲ್ಲಿ ನಟಿಸಿದ್ದರೂ ಕನ್ನಡ ಚಿತ್ರರಂಗದಲ್ಲಿ ಸ್ಟಾರ್ ನಟರ ಸಾಲುಗಳಲ್ಲಿ ನಿಲ್ಲುತ್ತಾರೆ. ಧ್ರುವ ಸರ್ಜಾ ಅವರು ತಮ್ಮ ಚಿತ್ರರಂಗದ ಪಯಣದಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ, ಅವರ ಬಿಡುಗಡೆಯಾಗಲು ಸಿದ್ಧವಿರುವ “ಮಾರ್ಟಿನ್” ಹಾಗೂ ಮುಂಬರುವ ಎಲ್ಲಾ ಚಿತ್ರಗಳು ಯಶಸ್ಸು ಕಾಣಲಿ, ಭಗವಂತನು ಇವರಿಗೆ ಆರೋಗ್ಯ, ಆಯುಷ್ಯ ಕರುಣಿಸಲಿ ಎಂದು ಶುಭ ಹಾರೈಸುತ್ತಾ, ಮತ್ತೊಮ್ಮೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರುತ್ತೇನೆ.
– ಗಾಲಿ ಜನಾರ್ಧನ ರೆಡ್ಡಿ, ಶಾಸಕ




