ಬೆಂಗಳೂರು: ತಮ್ಮ ವಿರುದ್ಧ ಕೇಳಿ ಬಂದಿರುವ ಎಲ್ಲಾ ಆರೋಪಗಳನ್ನು ತಳ್ಳಿ ಹಾಕಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಪಕ್ಷದ ರಾಜ್ಯಾಧ್ಯಕ್ಷನಾಗಿ ತಾವು ಯಾವುದೇ ಜಿಲ್ಲೆಯ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಹಸ್ತಕ್ಷೇಪ ಮಾಡಿಲ್ಲ. ವರಿಷ್ಠರ ಸೂಚನೆ ಮೇರೆಗೆ ಚುನಾವಣೆ ನಡೆದಿದೆ ಎಂದರು.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಗೌರವಾನ್ವಿತ ಎಲ್ಲ ಹಿರಿಯರಲ್ಲಿ ತಿಳಿಸುವುದಕ್ಕೆ ಇಷ್ಟಪಡುತ್ತೇನೆ. ನಾನು ರಾಜ್ಯದ ಅಧ್ಯಕ್ಷನಾಗಿ ಯಾವುದೇ ಜಿಲ್ಲೆಯ ಚುನಾವಣೆ ಸಂಬಂಧ ಅಭಿಪ್ರಾಯ ಕೊಟ್ಟಿಲ್ಲ, ಕೊಡುವುದಕ್ಕೆ ಅವಕಾಶವೂ ಇಲ್ಲ. ಕೇಂದ್ರದಿಂದ ನಮ್ಮ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರಿಗೆ ಚುನಾವಣೆಯ ಜವಾಬ್ದಾರಿಯನ್ನು ಕೊಟ್ಟಿದ್ದಾರೆ. 13 ಜನ ವೀಕ್ಷಕರನ್ನು ಕೂಡ ನೇಮಕ ಮಾಡಿದ್ದರು. ಪ್ರತಿಯೊಬ್ಬ ವೀಕ್ಷಕರಿಗೂ ಕೂಡ ಮೂರು-ಮೂರು ಜಿಲ್ಲೆಗಳ ಜವಾಬ್ದಾರಿ ಕೂಡ ನೀಡಲಾಗಿತ್ತು ಎಂದರು.
ಕೇಂದ್ರ ಎಲ್ಲವನ್ನೂ ಗಮನಿಸುತ್ತಿದೆ. ಮಾನ್ಯ ಸುಧಾಕರ್ ಅವರ ಆಕ್ರೋಶಭರಿತ ಮಾತುಗಳನ್ನು ನಾನು ಕೇಳಿದ್ದೇನೆ. ವಿಜಯೇಂದ್ರ ಅವರು ನಮ್ಮನ್ನು ಸಮಾಧಿ ಮಾಡಲು ಹೊರಟಿದ್ದಾರೆ ಅನ್ನುವ ಮಾತನ್ನು ಹೇಳಿದ್ದಾರೆ. ಈ ರೀತಿ ಹೇಳಿಕೆಗಳನ್ನು ದಯವಿಟ್ಟು ಕೊಡಬೇಡಿ. ಅದು ನಿಮಗೂ, ನನಗೂ ಗೌರವ ತರುವುದಿಲ್ಲ ಎಂದರು.
ಅಲ್ಲಿ ಆಯ್ಕೆಯಾದವರು ಕೂಡ ಪಕ್ಷದ ಒಬ್ಬ ಕಾರ್ಯಕರ್ತ. ಮತ್ತೆ ಸುಧಾಕರ್ ಅವರ ಸಂಬಂಧಿ ಕೂಡ ಹೌದು. ಚುನಾವಣಾ ಪ್ರಕ್ರಿಯೆಯನ್ನು ಅವರು ಅರ್ಥ ಮಾಡಿಕೊಳ್ಳಲಿ. ಅವರು ಏನೇ ಟೀಕೆ ಮಾಡಿದರೂ ನಾನು ಟೀಕಿಸಲು ಹೋಗುವುದಿಲ್ಲ. ಮಾಜಿ ಸಚಿವರಾಗಿ ಅವರಿಗೂ ಸಹ ಜವಾಬ್ದಾರಿಗಳಿವೆ. ಪಕ್ಷ ಏನು ತೀರ್ಮಾನ ಮಾಡಿದೆಯೋ ಅದಕ್ಕೆ ಕೇಂದ್ರದ ಸಮ್ಮತಿ ಕೂಡ ಇದೆ. ಅದರಲ್ಲಿ ಯಾರೂ ಮೂಗು ತೂರಿಸುವುದಿಲ್ಲ ಎಂದರು.



