ಸನ್ಮಾನ್ಯ ಸಿಎಂ Siddaramaiah ನವರೇ..
ಮೂಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಬೊಗಳೆ ಬಿಡುವ ನಿಮಗೆ ಕನ್ನಡ ಬರುತ್ತದೆ, ಭಾಷೆಯೂ ಗೊತ್ತಿದೆ ಎಂದು ನಾನಾದರೂ ಪರಿಭಾವಿಸುತ್ತೇನೆ.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ನೀವು ಸ್ವಯಂಘೋಷಿತ ವಕೀಲರಲ್ಲವೇ?
ಇಲ್ಲಿರುವ ದಾಖಲೆಯನ್ನೊಮ್ಮೆ ಕಣ್ಣಲ್ಲಿ ಕಣ್ಣಿಟ್ಟು ಓದಿ.
“50:50ರ ಅನುಪಾತದಲ್ಲಿಯೇ ಮೂಡಾ ಬದಲಿ ನಿವೇಶನ ನೀಡಲೇಬೇಕು ಎಂದು ಸಿಎಂ ಸಾಹೇಬರ ಧರ್ಮಪತ್ನಿ ‘ಒತ್ತಾಯ’ ಮಾಡಿದ್ದಾರೆ!!”
“ಅರ್ಜಿದಾರರಾದ ಶ್ರೀಮತಿ ಪಾರ್ವತಮ್ಮ ಇವರಿಗೆ ಮಾರುಕಟ್ಟೆ ದರದಲ್ಲಿ ಜಮೀನಿನ ಪರಿಹಾರ ನೀಡುವುದಾಗಿಯೂ ಅಥವಾ 40:60ರ ಅನುಪಾತದಲ್ಲಿ ನಿವೇಶನ ನೀಡುವುದಾಗಿಯೂ ತಿಳಿಸಲಾಗಿತ್ತು. ಆದರೆ ಪ್ರಾಧಿಕಾರದ ಈ ಸಲಹೆಗೆ ಅವರು ಒಪ್ಪಿಗೆ ನೀಡದೇ ಇದ್ದು, ಬದಲಿ ಜಮೀನನ್ನು ನೀಡುವಂತೆ ಒತ್ತಾಯಿಸಿರುತ್ತಾರೆ.”

ಇದು ಮೂಡಾ ದಾಖಲೆಯಲ್ಲಿರುವ ಒಕ್ಕಣೆ. ಇದಕ್ಕೆ ತಾವು ಏನಂತೀರಿ?
ಇದು ತಮ್ಮ ಪ್ರಕಾರ ಟಿಪ್ಪಣಿಯೋ..? ಒಕ್ಕಣೆಯೋ..? ಅಥವಾ ಅಪ್ಪಣೆಯೋ..?
ಸೂಪರ್ ಸಿಎಂ ಅವರೇ ‘ಒತ್ತಾಯಿಸಿರುತ್ತಾರೆ!!!’ ಎಂದರೆ ಮೂಡಾ ಅಧಿಕಾರಿಗಳು ಇನ್ನೇನು ಮಾಡಿಯಾರು?
ಆಗ ತಾವು ರಾಜ್ಯದಲ್ಲಿ ಏನಾಗಿದ್ದಿರಿ? ವಿಧಾನಸೌಧದ 3ನೇ ಮಹಡಿಯಲ್ಲಿರುವ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂತಿದ್ದಿರಿ.
ಈಗ ಹೇಳಿ.. ಯಾರ ತಟ್ಟೆಯಲ್ಲಿ ಏನು ಸತ್ತು ಬಿದ್ದಿದೆ?
ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..??
– ಎಚ್ ಡಿ ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ



