ಬೆಂಗಳೂರು: ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರ ಅತ್ಯಂತ ಸುಭದ್ರವಾಗಿದೆ. ಲೋಕಸಭೆ ಚುನಾವಣೆ ನಂತರ ಈ ಸರ್ಕಾರ ಪತನಗೊಳ್ಳಲಿದೆ ಎಂದು ಬಿಜೆಪಿ ತಿರುಕನ ಕನಸು ಕಾಣುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವ್ಯಂಗ್ಯವಾಡಿದ್ದಾರೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಲೋಕಸಭೆ ಚುನಾವಣೆ ನಂತರ ರಾಜ್ಯದಲ್ಲಿ ಆಪರೇಷನ್ ಕಮಲ ನಡೆಯಲಿದೆ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ರಾಜ್ಯದ ಎಲ್ಲಾ ಕಾಂಗ್ರೆಸ್ ಶಾಸಕರು ಒಟ್ಟಾಗಿದ್ದು ಇವರ ಹೇಳಿಕೆಗೆ ಮಹತ್ವ ಕೊಡುವ ಅಗತ್ಯವಿಲ್ಲ ಎಂದರು.
ಲೋಕಸಭೆ ಚುನಾವಣೆ ಫಲಿತಾಂಶ ಹೊರಬಂದು ಕೇಂದ್ರದಲ್ಲಿ ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿ ಕಾರಕ್ಕೆ ಬಂದರೆ ಏಕನಾಥ ಶಿಂಧೆ ನೇತೃತ್ವದ ಸರ್ಕಾರ ಪತನಗೊಳ್ಳಲಿದೆ. ಮೊದಲು ಅವರು ತಮ್ಮ ಸರ್ಕಾರವನ್ನು ಉಳಿಸಿಕೊಳ್ಳಲಿ ಎಂದರು.
ರಾಜ್ಯದಲ್ಲಿ ಜೆಡಿಎಸ್, ಬಿಜೆಪಿ ಎರಡೂ ಸೇರಿದರೆ 84 ಶಾಸಕರಾಗುತ್ತಾರೆ. ನಾವು 137 ಶಾಸಕರನ್ನು ಹೊಂದಿದ್ದೇವೆ. ನಮ್ಮ ಸರ್ಕಾರ ಪತನವಾಗಬೇಕಾದರೆ 55 ಕ್ಕೂ ಹೆಚ್ಚು ಶಾಸಕರು ರಾಜೀನಾಮೆ ಕೊಡಬೇಕು. ನಮ್ಮ ಸಂಖ್ಯಾಬಲ 83 ರಷ್ಟಾಗಬೇಕು. ಆಗ ಸರ್ಕಾರ ಪತನವಾಗಲು ಸಾಧ್ಯ. ಇಲ್ಲದೇ ಹೋದರೆ ಬಿಜೆಪಿಯವರು ಹೇಗೆ ಹೊಸ ಸರ್ಕಾರ ರಚನೆ ಮಾಡುತ್ತಾರೆ? ಎಂದು ಪ್ರಶ್ನಿಸಿದರು.
ಲೋಕಸಭಾ ಚುನಾವಣೆಯಲ್ಲಿ 28 ಕ್ಕೆ 28 ಕ್ಷೇತ್ರಗಳನ್ನೂ ಗೆಲ್ಲುತ್ತೇವೆ ಎಂದು ಹೇಳಿಕೊಳ್ಳುತ್ತಿದ್ದರು. ಆದರೆ ಜನರ ನಾಡಿಮಿಡಿತ ನೋಡಿದರೆ ಅವರು ಏಕ ಅಂಕಿಯನ್ನು ದಾಟುವುದೂ ಕಷ್ಟಸಾಧ್ಯವಾಗಿದೆ. ಕಾಂಗ್ರೆಸ್‌ನ ಹೆಚ್ಚಿನ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಹೀಗಾಗಿ ಹತಾಶರಾಗಿರುವ ಬಿಜೆಪಿಯವರು ಇಂತಹ ಅಸಂಬದ್ಧವಾದ ಪ್ರಚಾರವನ್ನು ನಡೆಸುತ್ತಿದ್ದಾರೆ ಎಂದರು.
ಲೋಕಸಭಾ ಚುನಾವಣೆಗೆ 10ಕ್ಕೂ ಹೆಚ್ಚು ಬಿಜೆಪಿ ಸಂಸದರಿಗೆ ಗೋಬ್ಯಾಕ್ ಎಂಬ ಘೋಷಣೆ ಬಿಸಿ ತಟ್ಟಿತ್ತು. ಮೊದಲು ಅವರು ತಮ್ಮ ಮನೆಯನ್ನು ಸರಿಯಾಗಿ ನೋಡಿಕೊಳ್ಳಲಿ. ಅನಂತರ ನಮ್ಮ ಪಕ್ಷದ ಬಗ್ಗೆ ಚರ್ಚೆ ಮಾಡಲಿ ಎಂದರು.
ಬಿಜೆಪಿಯಲ್ಲೀಗ ಮತ ತಂದುಕೊಡುವಂತಹ ನಾಯಕತ್ವ ಯಾರದಿದೆ? ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ. ಲೋಕಸಭಾ ಚುನಾವಣೆಯಲ್ಲಿ ಮೋದಿಗಾಗಿ ಮತ ನೀಡಿ ಎಂದು ಕೇಳಿಕೊಂಡರು. ಅವರ ಯೋಗ್ಯತೆಗೆ ಬಿಜೆಪಿ ಹೆಸರಿನಲ್ಲಾಗಲೀ ಅಥವಾ ಅಭ್ಯರ್ಥಿಗಳ ಹೆಸರಿನಲ್ಲಾಗಲೀ ಮತ ಕೇಳಲಿಲ್ಲ ಎಂದರು.



