CEC ಇತ್ತೀಚೆಗೆ ಯಾವ ವಿಚಾರದಲ್ಲಿ ನಿಷ್ಪಕ್ಷಪಾತವಾಗಿ ಹಾಗೂ ನಿಷ್ಟೂರವಾಗಿ ನಡೆದುಕೊಂಡಿದೆ?: ದಿನೇಶ್ ಗುಂಡೂರಾವ್

3 years ago

ಬೆಂಗಳೂರು: ಸುಪ್ರೀಂ ಕೋರ್ಟ್ ಕೇಂದ್ರ ಚುನಾವಣಾ ಆಯೋಗ ದುರ್ಬಲ ಸಂಸ್ಥೆ ಎಂಬ ಅಭಿಪ್ರಾಯಪಟ್ಟಿದೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಆಯೋಗದ ಇತ್ತೀಚಿನ ಕಾರ್ಯವೈಖರಿ ಗಮನಿಸಿದರೆ ಅದು ಸತ್ಯ ಕೂಡ. CEC ಹೆಸರಿಗೆ ಮಾತ್ರ ಸಾಂವಿಧಾನಿಕ ಸಂಸ್ಥೆ. ಆದರೆ ಈ ಸರ್ಕಾರದ ಅವಧಿಯಲ್ಲಿ ಹಲ್ಲಿಲ್ಲದ ಹಾವು. CEC ಇತ್ತೀಚೆಗೆ ಯಾವ ವಿಚಾರದಲ್ಲಿ ನಿಷ್ಪಕ್ಷಪಾತವಾಗಿ ಹಾಗೂ ನಿಷ್ಟೂರವಾಗಿ ನಡೆದುಕೊಂಡಿದೆ? ಎಂದು ಪ್ರಶ್ನಿಸಿದ್ದಾರೆ.

ಕೇಂದ್ರ ಸಚಿವ ಸಂಪುಟ ತಮಗೆ ಯಾರು‌ ಅತಿ ಹೆಚ್ಚು ನಿಷ್ಟರೋ, ಯಾರು ತಮ್ಮ ಮಾತು ಚಾಚೂ ತಪ್ಪದೆ ಪಾಲಿಸುತ್ತಾರೋ ಅಂತಹ ಜಿ ಹುಜೂರ್ ಮನಃಸ್ಥಿತಿಯವರನ್ನು ಚುನಾವಣಾ ಆಯೋಗದ ಆಯುಕ್ತರನ್ನಾಗಿ ನೇಮಿಸುತ್ತದೆ. ಅಂತಹ ಆಯುಕ್ತರು ತಮಗೆ ಹುದ್ದೆ ಕಲ್ಪಿಸಿದ ಸರ್ಕಾರಕ್ಕೆ ಮುಜುರೆ ಸಲ್ಲಿಸುವುದು ಬಿಟ್ಟು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.

ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳನ್ನು ಆಯ್ಕೆ ಮಾಡುವ ಕೊಲಿಜಿಯಂ ವ್ಯವಸ್ಥೆಯಂತೆ ಚುನಾವಣಾ ಆಯೋಗಕ್ಕೆ ಆಯುಕ್ತರನ್ನು ನೇಮಕ ಮಾಡಬೇಕು. ಇಲ್ಲವೇ ಕರ್ನಾಟಕದಲ್ಲಿ‌ ಲೋಕಾಯುಕ್ತರ ನೇಮಕದ ಮಾನದಂಡದಂತೆ ಆಯುಕ್ತರನ್ನು ನೇಮಿಸಬೇಕು. ಹಾಗಾದಾಗ‌ ಮಾತ್ರ ಆಯೋಗ ಸಮರ್ಥವಾಗಿ ಮತ್ತು ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಸಾಧ್ಯ ಎಂದು ಅಭಿಪ್ರಾಯ ಪಟ್ಟಿದ್ದಾರೆ.

Leave a Reply