ಬಳ್ಳಾರಿ: ಬಳ್ಳಾರಿಯಲ್ಲಿ ಸಂಭವಿಸಿದ ಬಾಣಂತಿಯರ ಸಾವು ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬಳ್ಳಾರಿ ತಾಲ್ಲೂಕಿನ ಬಸರಕೋಡು ಮತ್ತು ಬಾಣಾಪುರ ಗ್ರಾಮಗಳ ಸಂತ್ರಸ್ತರ ಮನೆಗೆ ಭೇಟಿ ನೀಡಿದರು.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಬಳ್ಳಾರಿ ತಾಲ್ಲೂಕಿನ ಬಸರಕೋಡು ಗ್ರಾಮದ ಕಮ್ಮಾರಿ ಲಲಿತಾ ಅವರ ಮನೆಗೆ ಭೇಟಿ ನೀಡಿ, ಪೋಷಕರ ಜೊತೆ ಮಾತನಾಡಿ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಧೈರ್ಯದಿಂದ ಮಗುವನ್ನು ಆರೈಕೆ ಮಾಡಬೇಕು, ಸರ್ಕಾರದಿಂದ ಹೆಚ್ಚಿನ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು.
ಇದಕ್ಕೂ ಮುನ್ನ ಬಾಣಾಪುರ ಗ್ರಾಮದ ಮೃತೆ ಹೂಗಾರ ನಂದಿನಿ ಅವರ ಮನೆಗೆ ಭೇಟಿ ನೀಡಿದರು. ಈ ವೇಳೆ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ತಹಶೀಲ್ದಾರ ಗುರುರಾಜ ಸೇರಿದಂತೆ ವೈದ್ಯಾಧಿಕಾರಿಗಳು ಹಾಗೂ ಇತರರು ಹಾಜರಿದ್ದರು.




