ಜನಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ಗುಣಮಟ್ಟದ ಔಷಧಿಗಳನ್ನು ಪೂರೈಸುವ ಉದ್ದೇಶದಿಂದ ಜಾರಿಗೊಳಿಸಿದ್ದ ಪ್ರಧಾನಮಂತ್ರಿ Narendra Modi ಜೀ ಅವರ ಜನ ಔಷಧ ಕೇಂದ್ರಗಳನ್ನು ಸ್ಥಗಿತ ಮಾಡುವ ಮೂಲಕ ರಾಜ್ಯ ಸರ್ಕಾರ ದ್ವೇಷದ ರಾಜಕರಾಣಕ್ಜೆ ಮುನ್ನುಡಿ ಬರೆದಿದೆ.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ಗುಣಮಟ್ಟದ ಔಷಧಿಗಳು ಮತ್ತು ಶಸ್ತ್ರಚಿಕಿತ್ಸಾ ಸಾಮಗ್ರಿಗಳನ್ನು ಎಲ್ಲರಿಗೂ ಕೈಗೆಟುಕುವ ಬೆಲೆಯಲ್ಲಿ ಲಭ್ಯವಾಗುವಂತೆ ಮಾಡುವುದು ಮತ್ತು ಗ್ರಾಹಕರು/ರೋಗಿಗಳ ಆರ್ಥಿಕ ವೆಚ್ಚವನ್ನು ಕಡಿಮೆ ಮಾಡುವುದು ಇದರ ಉದ್ದೇಶವಾಗಿತ್ತು.
ಸಾರ್ವಜನಿಕ ವಲಯದ ಔಷಧ ಉದ್ಯಮಗಳ ಬ್ಯೂರೋ (ಬಿಪಿಪಿಐ) ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಪರಿಯೋಜನಾ ಯೋಜನೆಯ ಭಾಗವಾಗಿ ಜನ ಔಷಧಿ ಕೇಂದ್ರಗಳನ್ನು ನಡೆಸುತ್ತಿವೆ. ಇವುಗಳಿಂದಲೇ ಎಲ್ಲರಿಗೂ ಗುಣಮಟ್ಟದ ಜೆನೆರಿಕ್ ಔಷಧಿಗಳು ಲಭ್ಯವಾಗುತ್ತವೆ.
ಬ್ರಾಂಡೆಡ್ ಔಷಧಗಳ ಬೆಲೆಗೆ ಹೋಲಿಸಿದರೆ ಕೇಂದ್ರಗಳಲ್ಲಿ ದೊರಕುತ್ತಿರುವ ಔಷಧಗಳ ಬೆಲೆ ಸರಾಸರಿ ನಾಲ್ಕರಿಂದ ಐದು ಪಟ್ಟು ರಿಯಾಯಿತಿ ದರದಲ್ಲಿದೆ. ಕರ್ನಾಟಕದಲ್ಲಿ ವಾರ್ಷಿಕವಾಗಿ ಮಾರಾಟವಾಗುವ ಜನೌಷಧಿ ಮೌಲ್ಯ ಅಂದಾಜು 125 ಕೋಟಿ ರೂಪಾಯಿಗೂ ಹೆಚ್ಚು.
ಜನೌಷಧಿ ಕೇಂದ್ರಗಳಲ್ಲಿ ಗುಣಮಟ್ಟದ 825 ಬಗೆಯ ಔಷಧಗಳು 122 ನಮೂನೆ ಸರ್ಜಿಕಲ್ ಸಾಧನಗಳು ಲಭ್ಯವಿದ್ದವು. ಕೇವಲ ಒಂದು ರೂಪಾಯಿಗೆ ‘ಸುವಿಧಾ’ ಹೆಸರಿನಲ್ಲಿ ಸ್ಯಾನಿಟರಿ ಪ್ಯಾಡ್ ಮಾರಾಟ ಮಾಡಲಾಗುತ್ತಿತ್ತು.
ಆದರೆ ಕೇಂದ್ರ ಸರ್ಕಾರದ ಮೇಲಿನ ದ್ವೇಷಕ್ಕೆ ಮಾಡಿಕೊಂಡಿರುವ ಒಪ್ಪಂದವನ್ನು ರದ್ದುಪಡಿಸಲು ಹೊರಟಿರುವ ರಾಜ್ಯ ಸರ್ಕಾರ ಬಡವರ ಹೊಟ್ಟೆಯ ಮೇಲೆ ಗದಾಪ್ರಹಾರ ನಡೆಸಲು ಹೊರಟಿದೆ.
ಜನ ಔಷಧ ಕೇಂದ್ರಗಳನ್ನು ಮುಚ್ಚಲು ಹೊರಟಿರುವುದರ ಹಿಂದೆ ಖಾಸಗಿಯವರ ಲಾಬಿ ಇದ್ದಂತೆ ಕಾಣುತ್ತಿದೆ. ಇದರಲ್ಲಿ ಸಿ.ಎಂ@ಸಿದ್ದರಾಮಯ್ಯ ಹಾಗೂ ಸಚಿವ ದಿನೇಶ್ ಗುಂಡೂರಾವ್ ನಿಮ್ಮ ಕಮೀಷನ್ ಎಷ್ಟು ಎಂಬುದನ್ನು ಬಹಿರಂಗಪಡಿಸಿ.
– ಎಂ.ಪಿ.ರೇಣುಕಾಚಾರ್ಯ, ಮಾಜಿ ಸಚಿವ




