ಬೆಳಗಾವಿ: ಅಧಿಕಾರ ಹಸ್ತಾಂತರ ವಿಚಾರವಾಗಿ ಸಿಎಂ ಮತ್ತು ಡಿಸಿಎಂ ಬಣದಲ್ಲಿ ಚಟುವಟಿಕೆಗಳು ತೀವ್ರಗೊಂಡಿರುವ ನಡುವೆಯೇ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಕಳೆದ ರಾತ್ರಿ ಸಮಾನ ಮನಸ್ಕ ಹಾಗೂ ವಾಲ್ಮೀಕಿ ಸಮುದಾಯದ ಶಾಸಕರ ಜೊತೆ ಭೋಜನಕೂಟ ನಡೆಸಿದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಕೆ ಎನ್ ರಾಜಣ್ಣ, ಈ ಭೋಜನಕೂಟ ಕೇವಲ ಸಮುದಾಯದ ಚಟುವಟಿಕೆಗಳ ಬಗ್ಗೆ ಮಾತನಾಡಲು ಆಯೋಜಿಸಿದ್ದ ಸಭೆ ಅಲ್ಲ; ಹಲವಾರು ರಾಜಕೀಯ ವಿಚಾರಗಳನ್ನು ಈ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಸದ್ಯದಲ್ಲಿಯೇ ಅವುಗಳ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಅವರೇ ವಿವರಣೆ ನೀಡಲಿದ್ದಾರೆ ಎಂದರು.
ಕೆಪಿಸಿಸಿ ಅಧ್ಯಕ್ಷರ ಅಧಿಕಾರಾವಧಿ ಕುರಿತಂತೆ ಕಳೆದ 2023ರ ಮೇ 18ರಂದು ಎಐಸಿಸಿ ಬಿಡುಗಡೆ ಮಾಡಿರುವ ಪತ್ರವೊಂದನ್ನು ಪ್ರದರ್ಶಿಸಿದ ಅವರು, ಹೈಕಮಾಂಡ್ ಈ ಪತ್ರದಲ್ಲಿ ಹೇಳಿರುವಂತೆ ನಡೆದುಕೊಳ್ಳಬೇಕು ಎಂದರು.
ಅಂದು ಎಐಸಿಸಿ ಬಿಡುಗಡೆ ಮಾಡಿರುವ ಪತ್ರದಲ್ಲಿ ಮುಂದಿನ ಲೋಕಸಭೆ ಚುನಾವಣೆ ಮುಗಿಯುವವರೆಗೆ ಡಿ ಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ ಎಂದು ಹೇಳಿತ್ತು.ಇದೀಗ ಅದು ಮುಕ್ತಾಯಗೊಂಡಿದ್ದು ಹೈಕಮಾಂಡ್ ಪತ್ರದಲ್ಲಿ ತಿಳಿಸಿರುವಂತೆ ನಿರ್ಧಾರ ಕೈಗೊಳ್ಳಬೇಕು ಎಂದರು.




