ಬಳ್ಳಾರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನಗರದ ಹಳೇ ತಾಲ್ಲೂಕು ಕಚೇರಿ ಹಿಂಭಾಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಅ.24 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 02 ಗಂಟೆಯವರೆಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ತಿಳಿಸಿದ್ದಾರೆ.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ಸಂದರ್ಶನದಲ್ಲಿ ಎಲ್ ಮತ್ತು ಟಿ ಫೈನಾನ್ಸ್ ಪ್ರೈವೇಟ್ ಲಿಮಿಟೆಡ್ ಇವರು ತಮ್ಮಲ್ಲಿನ ಖಾಲಿ ಇರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುವರು. ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ.
ನೇರ ಸಂದರ್ಶನದಲ್ಲಿ ಪುರುಷರಿಗೆ ಮಾತ್ರ ಅವಕಾಶ ಇದ್ದು, ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಆಧಾರ್ ಕಾರ್ಡ್ ಪ್ರತಿ ಮತ್ತು ಸ್ವ-ವಿವರಗಳೊಂದಿಗೆ ಅಂದು ನಡೆಯುವ ನೇರ ಸಂದರ್ಶನದಲ್ಲಿ ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.9742718891, 9663263086, 9900827768, 6360408094 ಗೆ ಸಂಪರ್ಕಿಸಬಹುದು.




