ಬಳ್ಳಾರಿ: ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರಪ್ರತಿನಿಧಿ ಮತ್ತು ಮತ್ತು ಫೀಲ್ಡ್ ಆಫೀಸರ್‌ಗಳ ನೇಮಕಕ್ಕಾಗಿ ಅಕ್ಟೋಬರ್ 14ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 02 ಗಂಟೆಯವರೆಗೆ, ನಗರದ ಕೋಟೆ ಆವರಣದ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ಅರ್ಹ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರ ಹಾಗೂ ಶೈಕ್ಷಣಿಕ ಪ್ರಮಾಣ ಪತ್ರದ ನಕಲುಗಳೊಂದಿಗೆ ಅಂದು ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗಬಹುದು.
ಅರ್ಹತೆಗಳು:
1. ಐದು ಸಾವಿರಕ್ಕಿಂತ ಕಡಿಮೆ ಜನಸಂಖ್ಯೆ ಹೊಂದಿರುವ ಪ್ರದೇಶದಲ್ಲಿ ವಾಸಿಸುತ್ತಿದ್ದರೆ 10ನೇ ತರಗತಿ ಉತ್ತೀರ್ಣರಾಗಿರಬೇಕು.
2. ಐದು ಸಾವಿರ ಹಾಗೂ ಅದಕ್ಕಿಂತ ಹೆಚ್ಚಿನ ಜನಸಂಖ್ಯೆ ಹೊಂದಿರುವ ಇತರೆ ಪ್ರದೇಶಗಳಿಗೆ 12ನೇ ತರಗತಿ ಉತ್ತೀರ್ಣರಾಗಿರಬೇಕು.
3. ಬಳ್ಳಾರಿ ಹಾಗೂ ವಿಜಯನಗರ (ಹೊಸಪೇಟೆ) ಜಿಲ್ಲೆಯ ವ್ಯಾಪ್ತಿಯಲ್ಲಿ ವಾಸಿಸುವ ವಿಳಾಸ ಪುರಾವೆಯನ್ನು ಹೊಂದಿರಬೇಕು.
4. ವಯೋಮಿತಿ 18 ವರ್ಷ, ಗರಿಷ್ಠ ವಯಸ್ಸಿನ ಮಿತಿ ಇರುವುದಿಲ್ಲ.
ನೇರಪ್ರತಿನಿಧಿಗಳು: ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗ ನಿರತ ಯುವಕರು, ಮಾಜಿ ವಿಮಾ ಕಂಪನಿಗಳ ಸಲಹೆಗಾರರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳಿಯ ಕಾರ್ಯಕರ್ತೆಯರು, ಮಾಜಿ ಗ್ರಾಮ ಪಂಚಾಯಿತಿಯ ಸದಸ್ಯರು ಅರ್ಹರಾಗಿರುತ್ತಾರೆ.
ಫೀಲ್ಡ್ಆಫೀಸರ್: ನಿವೃತ್ತ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನೌಕರರು, ನಿವೃತ್ತ ಗ್ರಾಮೀಣ ಅಂಚೆ ಸೇವಕರು (ಜಿಡಿಎಸ್) ಅರ್ಹರಾಗಿರುತ್ತಾರೆ. ವಿಮಾ ಉತ್ಪನ್ನಗಳನ್ನು ಮಾರಾಟ ಮಾಡುವ ಅನುಭವ, ಕಂಪ್ಯೂಟರ್ ಜ್ಞಾನ ಅಥವಾ ಸ್ಥಳೀಯ ಪ್ರದೇಶದ ಜ್ಞಾನವಿರಬೇಕು.
ಆಯ್ಕೆಯಾದ ಅಭ್ಯರ್ಥಿಗಳು ರೂ.5000/- (ಐದು ಸಾವಿರ ಮಾತ್ರ) ಗಳನ್ನು ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ್ ವಿಕಾಸ ಪತ್ರದ ರೂಪದಲ್ಲಿ ಭದ್ರತಾ ಠೇವಣಿ ಇಡಬೇಕಾಗುತ್ತದೆ.
ಆಯ್ಕೆಯಾದ ನೇರಪ್ರತಿನಿಧಿ ಮತ್ತು ಫೀಲ್ಡ್ಆಫೀಸರ್‌ಗಳಿಗೆ ಅವರು ಮಾಡಿದ ವ್ಯವಹಾರಕ್ಕೆ ತಕ್ಕಂತೆ ಸೂಕ್ತ ಕಮಿಷನ್ ನೀಡಲಾಗುವುದು. ಇದರ ಹೊರತಾಗಿ ಬೇರೆ ಯಾವುದೇ ನಿಗದಿತ ವೇತನ ಇರುವುದಿಲ್ಲ.
ಅಭ್ಯರ್ಥಿಗಳು ಬೇರೆ ಯಾವುದೇ ವಿಮಾ ಕಂಪನಿ, ಸಂಸ್ಥೆ, ಸಂಘಗಳ ಏಜೆಂಟ್ ಆಗಿರಬಾರದು.
ಬೇಕಾದ ದಾಖಲೆಗಳು: ಆಧಾರ್‌ಕಾರ್ಡ್, ಪಾನ್‌ಕಾರ್ಡ್, ಪಾಸ್‌ಪೋರ್ಟ್ ಅಳತೆಯ 2 ಭಾವಚಿತ್ರ, ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ಅಂಕಪಟ್ಟಿ ದಾಖಲೆಗಳನ್ನು ಸಲ್ಲಿಸಬೇಕು.
ನೋಂದಣಿಯ ಸಮಯ: ಬೆಳಗ್ಗೆ 10:30 ರಿಂದ 11:30 ರ ವರೆಗೆ.
ಹೆಚ್ಚಿನ ಮಾಹಿತಿಗಾಗಿ ಡೆವಲಪ್‌ಮೆಂಟ್ ಆಫೀಸರ್ ಮಾರುತಿ.ವಿ (ಮೊ.9481694420) ಹಾಗೂ ಅಂಚೆ ಅಧೀಕ್ಷಕರ ಕಾರ್ಯಾಲಯ ಅಥವಾ ದೂ.08392-266768 ಗೆ ಸಂಪರ್ಕಿಸಬಹುದು.




