ಬಳ್ಳಾರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನ.29 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಹಳೇ ತಾಲ್ಲೂಕು ಕಚೇರಿ ಹಿಂಭಾಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಹಟ್ಟಪ್ಪ ತಿಳಿಸಿದ್ದಾರೆ.
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
- ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ: ಸಿದ್ದರಾಮಯ್ಯ
ಜೆಎಸ್ಡಬ್ಲ್ಯು ಸಿಮೆಂಟ್ ಕಂಪನಿ ಮತ್ತು ಆಕ್ಸಿಸ್ ಬ್ಯಾಂಕ್ ಇವರು ತಮ್ಮಲ್ಲಿನ ಖಾಲಿ ಇರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುವರು.
ಜೆಎಸ್ಡಬ್ಲ್ಯು ಸಿಮೆಂಟ್ ಕಂಪನಿ: ವಿದ್ಯಾರ್ಹತೆ ಡಿಪ್ಲೋಮಾ ಸಿವಿಲ್, ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಭಾಗವಹಿಸಬಹುದು.
ಆಕ್ಸಿಸ್ ಬ್ಯಾಂಕ್: ವಿದ್ಯಾರ್ಹತೆ ಪಿಯುಸಿ, ಬಿಎ, ಬಿ.ಕಾಂ, ಬಿಬಿಎ ಹಾಗೂ ಇತರೆ ಪದವೀಧರರು ಭಾಗವಹಿಸಬಹುದು.
ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ. ನೇರ ಸಂದರ್ಶನದಲ್ಲಿ ಪುರುಷರಿಗೆ ಮಾತ್ರ ಅವಕಾಶ.
ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ ಮತ್ತು ಸ್ವ-ವಿವರಗಳೊಂದಿಗೆ ಹಳೇ ತಾಲ್ಲೂಕು ಕಚೇರಿ ಹಿಂಭಾಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಅಂದು ನಡೆಯುವ ನೇರ ಸಂದರ್ಶನದಲ್ಲಿ ಆಸಕ್ತ ಅಭ್ಯರ್ಥಿಗಳು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಮೊ.9742718891, 9663263086, 9900827768, 6360408094 ಗೆ ಸಂಪರ್ಕಿಸಬಹುದು.




