ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಇದೇ ಜನವರಿ 10ರಂದು ಬೆಳಿಗ್ಗೆ 10 ರಿಂದ 2 ರವರೆಗೆ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ ಸಂದರ್ಶನ ನಡೆಯಲಿದೆ.
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
ಈ ಮೇಳದಲ್ಲಿ ವಿವಿಧ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ಹೊಂದಿರುವ 18 ರಿಂದ 30 ವರ್ಷದೊಳಗಿನ ಪುರುಷ ಅಥವಾ ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿವೆ. ಅಭ್ಯರ್ಥಿಗಳು ಅಗತ್ಯ ದಾಖಲೆಗಳಾದ 5 ಬಯೋಡಾಟಾ ಪ್ರತಿಗಳು, ವಿದ್ಯಾರ್ಹತೆಯ ಜೆರಾಕ್ಸ್ ಪ್ರತಿಗಳೊಂದಿಗೆ ಭಾಗವಹಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಗರದ ಹಳೇ ವೈಶಾಲಿ ಗೇಟ್ ಹತ್ತಿರ, ಸ್ಟೇಡಿಯಂ ತಿರುವು, ಉದ್ಯೋಗ ವಿನಿಮಯ ಕೇಂದ್ರ ಕಚೇರಿ, ಚಿತ್ರದುರ್ಗ ದೂರವಾಣಿ ಸಂಖ್ಯೆ 7022459064, 9945587060, 8105619020 ಗೆ ಸಂಪರ್ಕಿಸಬಹುದು.




