ಇನ್ನೊಬ್ರ ಬಗ್ಗೆ ಮಾತಾಡ್ಬೇಕಾದ್ರೆ ಯೋಚಿಸಿ ಮಾತಾಡಿ ದರ್ಶನ್ ಅವರೇ: ಪ್ರೇಮ್

5 years ago

ಬೆಂಗಳೂರು: ದರ್ಶನ್ ಅವ್ರೆ, ನಾನು ಕರಿಯ ಸಿನಿಮಾ ಮಾಡ್ಬೇಕಾದ್ರೆ  ಯಾವ್ ಪುಡಂಗುನೂ ಅಲ್ಲಾ ನಂಗ್ ಕೊಂಬು ಇರ್ಲಿಲ್ಲ.. ನಾನೊಬ್ಬ ಸಾಮಾನ್ಯ ನಿರ್ದೇಶಕ ಎಂದು ನಿರ್ದೇಶಕ ಎಕ್ಸ್‌ ಕ್ಯೂಸ್‌ ಮಿ ಪ್ರೇಂ ತಿರುಗೇಟು ನೀಡಿದ್ದಾರೆ.

ಮೈಸೂರಿನ ದಿ ಪ್ರಿನ್ಸ್‌ ಹೊಟೆಲ್‌ ನಲ್ಲಿ ನಡೆದಿದೆ ಎನ್ನಲಾದ ಗಲಾಟೆ, ಹಲ್ಲೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಡಾ.ರಾಜ್‌ ಕುಮಾರ್‌ ಅವರ ಆಸ್ತಿಯನ್ನು ಒಂದು ಸುತ್ತು ಸುತ್ತಿ, ಇದೀಗ ನಿರ್ದೇಶಕ ಪ್ರೇಮ್‌ ವಿಷಯಕ್ಕೆ ಬಂದು ತಲುಪಿದೆ. ಈ ನಡುವೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮತ್ತು ಇಂದ್ರಜಿತ್‌ ಲಂಕೇಶ್‌ ಭೇಟಿಯಾಗಿರುವ ಫೋಟೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿ ಒಂದು ಸುತ್ತಿನ ಚರ್ಚೆಗಳು ಮುಗಿದಿವೆ.

ಈ ಎಲ್ಲ ಬೆಳವಣಿಗೆಗಳ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿರುವ ಪ್ರೇಮ್‌, ರಾಜಕುಮಾರ್ ರವರು, ಅಂಬರೀಷ್ ರವರು, ವಿಷ್ಣುವರ್ಧನ್ ರವರು ಹಾಗೂ ರಜನಿಕಾಂತ್ ರವರು ಒಬ್ಬ ಒಳ್ಳೆ ನಿರ್ದೇಶಕ ಅಂದು ಬೆನ್ನು ತಟ್ಟಿದ್ರು. ಇಡೀ ಕರ್ನಾಟಕ ಜನತೆ ಹರಸಿ ಹಾರೈಸಿ ಹ್ಯಾಟ್ರಿಕ್ ನಿರ್ದೇಶಕ ಅಂತ ಬಿರುದು ಕೊಟ್ಟಾಗ್ಲು ನನಗ್ ಕೊಂಬು ಬರ್ಲಿಲ್ಲ.. ನಾನು ನಂದೇ ಆದ್ ಸ್ಟೈಲ್ ನಲ್ಲಿ ಸಿನಿಮಾ ಮಾಡ್ಕೊಂಡು ಬಂದೋವ್ನು.. ಎಂದಿದ್ದಾರೆ.

ಸುಮಾರು ನಿರ್ಮಾಪಕರುಗಳು ಹಾಗೂ ನಿಮ್ಮ ಅಭಿಮಾನಿಗಳು ಹಾಗೂ ನನ್ನ ಅಭಿಮಾನಿಗಳು ಪ್ರತಿ ಸಾರಿ ದರ್ಶನ್ ಹಾಗೂ ನಿಮ್ಮ ಕಾಂಬಿನೇಶನ್ ನಲ್ಲಿ ಯಾವಾಗ ಚಿತ್ರ ಮಾಡ್ತಿರಂತ ಕೇಳ್ತಾನೆಯಿದ್ರು. ಇದ್ರ ಬಗ್ಗೆ ನಿಮಗೂ ಗೊತ್ತು ನನಗು ಗೊತ್ತು. ಇಬ್ಬರು ಸೇರಿ ಸಿನಿಮಾ ಮಾಡೋದ್ರ ಬಗ್ಗೆ ಚೆರ್ಚೆ ಮಾಡಿದ್ವಿ. ನಾನು ನಮ್ ಬ್ಯಾನರ್ ನಲ್ ಸಿನಿಮಾ ಮಾಡಿ ಇಲ್ಲಾ ನಿಮ್ ಬ್ಯಾನರ್ ನಲ್ ಸಿನಿಮಾ ಮಾಡೋಣ ಅಂತ ಮತ್ತೆ ಚರ್ಚೆ ಮಾಡಿದ್ವಿ ಎಂದು ಮೆಲುಕು ಹಾಕಿದ್ದಾರೆ.

ಆದರೆ ನನಗೆ ಉಮಾಪತಿಯವರು, ನೀವು ಹಾಗೂ ದರ್ಶನ್ ಸೇರಿ ನಂಗ್ ಸಿನಿಮಾ ಮಾಡ್ಕೊಡಿ ಅಂತ ಅಂದ್ರು. ಅದಿಕ್ಕೆ ನಾನು ಉಮಾಪತಿ ಅವ್ರನ್ನ ನಿಮಗೆ ಪರಿಚಯ ಮಾಡಿ.. ಮೂರು ಜನ ಸೇರಿ ಸಿನಿಮಾ ಮಾಡೋಣ ಅಂತ ಡಿಸೈಡ್ ಮಾಡಿದ್ವಿ.. ಆದ್ರೆ ನನ್ ದಿ ವಿಲ್ಲನ್ ಸಿನಿಮಾ ಲೇಟ್ ಆದ ಕಾರಣ ನಾನೇ ಉಮಾಪತಿಯವರಿಗೆ ದರ್ಶನ್ ಅವ್ರ ಡೇಟ್ ಇದ್ದ ಕಾರಣ ಬೇರೆ ನಿರ್ದೇಶಕರನ್ನ ಹಿಡಿದು ಸಿನಿಮಾ ಮಾಡಿ ಅಂತ ಹೇಳಿದ್ದೆ.. ನನ್ನ ಸಂಭಾವನೆಯನ್ನ ಉಮಾಪತಿಯವರಿಗೆ ವಾಪಾಸ್ ನೀಡಿ  ರಾಬರ್ಟ್ ಸಿನಿಮಾ ಗೆ ಹಾರೈಸಿದವನು ನಾನು.. ಎಂದಿದ್ದಾರೆ.

ಅದೇ ರೀತಿ ರಾಬರ್ಟ್ ಚಿತ್ರ ಹಿಟ್ ಆಯ್ತು, ಎಲ್ಲರ ಹಾಗೇ ನಾನು ಖುಷಿ ಪಟ್ಟೆ.. ಇದ್ರ ಮದ್ಯೆ ನನ್ ಹೆಸ್ರು ಯಾಕೆ.. ದರ್ಶನ್ ಅವ್ರೆ ನಿರ್ದೇಶಕ್ರು ಯಾವ್ ಪುಡಂಗಿಗಳು ಅಲ್ಲಾ, ಅವ್ರಿಗೆ ಕೊಂಬು ಇರಲ್ಲ.. ತೆರೆಮೇಲೆ ಒಬ್ಬ ನಟನನ್ನ ಹುಟ್ಟಾಕಿ ಅವ್ನಿಗ್ ಕೊಂಬು ಬರ್ಬೇಕಾದ್ರೆ ನಿರ್ದೇಶಕನ ಶ್ರಮ ಎಷ್ಟಿರುತ್ತೆಂತ ಪ್ರತಿಯೊಬ್ಬ ಕಲಾವಿದರಿಗೂ ಗೊತ್ತು ಅದು ನಿಮ್ಗೂ ಗೊತ್ತು.. ದಯವಿಟ್ಟು ಇನ್ನೊಬ್ರ ಬಗ್ಗೆ ಮಾತಾಡ್ಬೇಕಾದ್ರೆ ಯೋಚಿಸಿ ಮಾತಾಡಿ ದರ್ಶನ್ ಅವರೇ… Thank you for your kind words. ದೇವ್ರು ನಿಮಗೆ ಒಳ್ಳೇದ್ ಮಾಡ್ಲಿ ಎಂದು ಹಾರೈಸಿದ್ದಾರೆ.

Leave a Reply