ಬೆಂಗಳೂರು: ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ವರ್ಗಾವಣೆ ವೇಳೆ ತೆರಿಗೆ ಸಂಗ್ರಹದಲ್ಲಿನ ಕಾರ್ಯಕ್ಷಮತೆಯನ್ನು ಮಾನದಂಡವಾಗಿ ಪರಿಗಣಿಸುವುದಾಗಿ ತಿಳಿಸಿರುವ ಸಿಎಂ ಸಿದ್ದರಾಮಯ್ಯ ಸಂಪನ್ಮೂಲ ಕ್ರೂಢೀಕರಣದಲ್ಲಿ ಗುರಿ ಸಾಧಿಸದೇ ಇದ್ದರೆ ಶಿಸ್ತುಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಾರಿಗೊಳಿಸಲಾಗಿದ್ದ ನೀತಿಸಂಹಿತೆ ಮುಕ್ತಾಯಗೊಂಡ ಬೆನ್ನಲ್ಲೇ ಆಡಳಿತ ಯಂತ್ರಕ್ಕೆ ಚುರುಕು ನೀಡಲು ಸಿದ್ದರಾಮಯ್ಯ ಮುಂದಾಗಿದ್ದಾರೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಈ ಸಂಬಂಧ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸುತ್ತಿರುವ ಅವರು ವಾಣಿಜ್ಯ ಮತ್ತು ತೆರಿಗೆ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಸಂಪನ್ಮೂಲ ಕ್ರೂಢೀಕರಣ ಕುರಿತಂತೆ ಚರ್ಚೆ ನಡೆಸಿದರು.
ವಿಭಾಗವಾರು ತೆರಿಗೆ ಸಂಗ್ರಹದ ಕುರಿತು ವಿವರಣೆ ಪಡೆದುಕೊಂಡ ಅವರು ಬಜೆಟ್ ನಲ್ಲಿ ನಿಗದಿಪಡಿಸಿರುವ ಗುರಿ ಸಾಧಿಸದಿದ್ದರೆ ಶಿಸ್ತುಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ವರ್ಗಾವಣೆ ವೇಳೆ ನಿಮ್ಮ ಕಾರ್ಯಕ್ಷಮತೆಯೇ ಮಾನದಂಡ. ಬೇರೆ ಯಾವ ಪ್ರಭಾವಕ್ಕೂ ನಾನು ಮಣೆ ಹಾಕಲ್ಲ. ಅಂದಾಜು, ಜಾರಿ, ಮೇಲ್ಮನವಿ ತಂಡಗಳು ನಿರಂತರ ಸಹಕಾರದಿಂದ ಕೆಲಸ ಮಾಡಿ ಎಂದು ಸೂಚಿಸಿದರು.
ಮೇಲ್ಮನವಿ ಪ್ರಕರಣಗಳನ್ನು 3 ತಿಂಗಳೊಳಗೆ ವಿಲೇವಾರಿ ಮಾಡಬೇಕು, ವಿಳಂಬ ಮಾಡಿದಲ್ಲಿ ಶಿಸ್ತು ಕ್ರಮ ಜರುಗಿಸಲಿದೆ. ಐಜಿಎಸ್ಟಿ ನಕಾರಾತ್ಮಕ ಸೆಟಲ್ ಮೆಂಟ್ ಆಗುವ ಕಡೆ, ಇತರೆ ಸರಕುಗಳ ಮೇಲಿನ ತೆರಿಗೆ ಸಂಗ್ರಹವನ್ನು ಚುರುಕಗೊಳಿಸಬೇಕು ಎಂದು ಎಚ್ಚರಿಸಿದರು.
ಅಂದಾಜು, ಜಾರಿ, ಮೇಲ್ಮನವಿ ಸಮನ್ವಯ ಸಭೆ ತಿಂಗಳಿಗೆ 2 ಬಾರಿ ಕಡ್ಡಾಯವಾಗಿ ನಡೆಸಬೇಕು. ಕಾರ್ಯಯೋಜನೆ ಸಿದ್ಧಪಡಿಸಬೇಕು. ಮೇಲ್ಮನವಿಗಳನ್ನು ಸಕಾಲದಲ್ಲಿ ಇತ್ಯರ್ಥ ಮಾಡಬೇಕು, ಸೆಪ್ಟೆಂಬರ್ ಮೊದಲ ವಾರದಲ್ಲಿ ಮತ್ತೊಮ್ಮೆ ಪ್ರಗತಿ ಪರಿಶೀಲನಾ ಸಭೆ ನಡೆಸುವುದಾಗಿ ತಿಳಿಸಿದ ಅವರು, ಆ ವೇಳೆಗೆ ಗುರಿ ತಲುಪಿರುವಂತೆ ತಾಕೀತು ಮಾಡಿದರು.
ಕೆಲಸ ಮರು ಹಂಚಿಕೆ 2017ಕ್ಕೂ ಹಿಂದಿನ ಪ್ರಕರಣಗಳ ತೀರ್ಮಾನವಾಗಿರುವುದರಿಂದ ಬೆಂಗಳೂರಿನಲ್ಲಿ ಹೆಚ್ಚು ಮೇಲ್ಮನವಿಗಳು ದಾಖಲಾಗುತ್ತಿದ್ದು, ಇವುಗಳ ವಿಲೇವಾರಿಗಾಗಿ ಹೆಚ್ಚುವರಿ ಜಂಟಿ ಆಯುಕ್ತರ ಹುದ್ದೆ ಮಂಜೂರಾಗಿದ್ದು ಜುಲೈ 1 ರಿಂದ ಜಾರಿಗೆ ಬರಲಿದೆ ಎಂದರು.



