ಬೆಂಗಳೂರು: ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಮತ್ತು ರಾಜ್ಯದಲ್ಲಿ ದಲಿತ ಸಮುದಾಯದವರಿಗೆ ಸಿಎಂ ಹುದ್ದೆ ಸಿಗಬೇಕು ಎಂಬ ವಿಚಾರ ತೀವ್ರ ಸ್ವರೂಪ ಪಡೆದಿರುವ ಬೆನ್ನಲ್ಲೇ ಸಹಕಾರ ಸಚಿವ ಕೆ ಎನ್ ರಾಜಣ್ಣ ಹೊಸ ವಿಷಯದ ಮೂಲಕ ಸಂಚಲನ ಮೂಡಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾರು ಸಿಎಂ ಆಗಬೇಕು, ಯಾರು ಡಿಸಿಎಂ ಆಗಬೇಕು ಮತ್ತು ಕೆಪಿಸಿಸಿ ಅಧ್ಯಕ್ಷರಾಗಬೇಕು ಎಂಬ ಕುರಿತು 2023ರ ಮೇ 18ರಂದು ಎಐಸಿಸಿ ಹೊರಡಿಸಿರುವ ನೋಟಿಫಿಕೇಶನ್ನಲ್ಲಿ ಪ್ರಸ್ತಾಪಿಸಲಾಗಿದೆ. ಇದನ್ನು ಬಹಿರಂಗಪಡಿಸುವಂತೆ ಹೈಕಮಾಂಡ್ ಗೆ ಆಗ್ರಹ ಮಾಡಿದ್ದೇವೆ ಎಂದರು.
ಈ ವಿಚಾರವಾಗಿ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ಮುಖಂಡರ ಬಳಿ ಪ್ರಸ್ತಾಪಿಸಿದ್ದೇನೆ. ಅವರ ಪ್ರತಿಕ್ರಿಯೆಗಾಗಿ ನಾನು ಕಾಯುತ್ತಿದ್ದೇನೆ ಎಂದರು.
ದೆಹಲಿಯಲ್ಲಿ ಹೈಕಮಾಂಡ್ ಜೊತೆ ಅನೇಕ ವಿಷಯಗಳನ್ನು ಪ್ರಸ್ತಾಪ ಮಾಡಿದ್ದೇನೆ. ಅದರಲ್ಲಿ ವಿಧಾನ ಪರಿಷತ್ಗೆ ನಾಮಕರಣ ಸದಸ್ಯರ ನೇಮಕದಲ್ಲಿ ಇದುವರೆಗೂ ಅಧಿಕಾರ ವಂಚಿತ ಸಣ್ಣ ಜಾತಿಗಳನ್ನು ಪರಿಗಣಿಸಬೇಕೆಂದು ಸೇರಿದಂತೆ ಪಕ್ಷದ ಸಂಘಟನೆ ದೃಷ್ಟಿಯಿಂದ ಅಗತ್ಯವಿರುವ ಕ್ರಮಗಳ ಬಗ್ಗೆ ಮಾತನಾಡಿದ್ದೇನೆ ಎಂದರು.
ಸದ್ಯ ರಾಜ್ಯದಲ್ಲಿ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾರೆ. ಅವರೇ ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸಲಿದ್ದಾರೆ, ಮಾತ್ರವಲ್ಲ ಮುಂದಿನ ಅವಧಿಗೂ ರಾಜ್ಯದ ಜನತೆ ಅವರಿಗೆ ಮುಖ್ಯಮಂತ್ರಿ ಆಗಲು ಆಶೀರ್ವಾದ ಮಾಡಲಿದ್ದಾರೆ ಎಂದರು.
ಈ ಹಿಂದೆ ರಾಜ್ಯದಲ್ಲಿ ದಲಿತರೊಬ್ಬರು ಸಿಎಂ ಆಗುವ ಅವಕಾಶವಿತ್ತು. ಮಲ್ಲಿಕಾರ್ಜುನ ಖರ್ಗೆ ಅವರು ಜೆಡಿಎಸ್ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಸಿಎಂ ಆಗುವ ಸಾಧ್ಯತೆ ಇತ್ತು. ಆದರೆ ಇವರು ಮುಖ್ಯಮಂತ್ರಿಯಾದರೆ ಬದಲಾಯಿಸಲು ಸಾಧ್ಯವಿಲ್ಲ ಎಂಬ ದೂರಾಲೋಚನೆ ಮಾಡಿದ ಮಾಜಿ ಪ್ರಧಾನಿ ದೇವೇಗೌಡ ಅವರು ಧರ್ಮಸಿಂಗ್ ಅವರನ್ನು ಮುಖ್ಯಮಂತ್ರಿ ಮಾಡಿ ಆನಂತರ ಬದಲಾಯಿಸಿದರು ಎಂದರು.




