ಗದಗ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಗದಗ ಜಿಲ್ಲಾ ಸಮಿತಿ ಸಭೆ ಜಿಲ್ಲಾ ಕಛೇರಿಯಲ್ಲಿ ಜರುಗಿತು.
ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಹಾಗೂ ಜಿಲ್ಲಾ ಉಸ್ತುವಾರಿ ರಂಜಾನ್ ಕಡಿವಾಳ್ ರವರ ಉಪಸ್ಥಿತಿಯಲ್ಲಿ ನಡೆದ ಸಭೆ ಮತ್ತು ಕಾರ್ಯಕರ್ತ ರೊಂದಿಗೆ ನಡೆಸಿದ ಸಂವಾದದಲ್ಲಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ಯಾವ ಅಭ್ಯರ್ಥಿಗೆ ಬೆಂಬಲ ನೀಡಬೇಕು? ಎಂಬ ಪಕ್ಷದ ನಿಲುವಿನ ಕುರಿತು ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲಾಯಿತು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಪ್ರಾಸ್ತಾವಿಕವಾಗಿ ಮಾತನಾಡಿದ ಅಪ್ಸರ್ ಕೊಡ್ಲಿಪೇಟೆ, ಎರಡು ಜಿಲ್ಲೆಗಳ ವ್ಯಾಪ್ತಿಯಲ್ಲಿ ಇರುವ ಲೋಕಸಭಾ ಕ್ಷೇತ್ರದಲ್ಲಿ ಯಾವುದೇ ಕೈಗಾರಿಕೆಗಳು ಇಲ್ಲ. ಜನಪ್ರತಿನಿಧಿಗಳು ಅಂತವುಗಳನ್ನು ತರಲು ಪ್ರಯತ್ನ ಪಟ್ಟಿಲ್ಲ. ಇದುವರೆಗೆ ಆಯ್ಕೆಯಾದ ಜನಪ್ರತಿನಿಧಿಗಳು ಬಂದ ಅನುದಾನ ಖರ್ಚು ಮಾಡಿದ್ದಾರೆಯೇ ಹೊರತು ಹೊಸ ಯೋಜನೆಗಳನ್ನು ತರಲು ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ ಎಂದು ಆರೋಪಿಸಿದರು.
ಹಾವೇರಿ ಹತ್ತಿರ ಸಕ್ಕರೆ ಕಾರ್ಖಾನೆ ಇದೆ. ಕಾರ್ಖಾನೆಯನ್ನು 30 ವರ್ಷಗಳ ಅವಧಿಗೆ ಖಾಸಗಿ ಅವರಿಗೆ ಗುತ್ತಿಗೆ ನೀಡಲಾಗಿದೆ. ಖಾಸಗಿ ಅವರಿಗೆ ನೀಡದೆ ರೈತರೇ ನಿರ್ವಹಣೆ ಮಾಡುವಂತೆ ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದರು.
2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ದೃಷ್ಟಿಯಿಂದ ಪಕ್ಷ ತನ್ನ ಅಭ್ಯರ್ಥಿಗಳನ್ನು ಚುನಾವಣಾ ಕಣಕ್ಕೆ ಇಳಿಸದಿರಲು ತೀರ್ಮಾನಿಸಿದ್ದು, ರಾಜ್ಯಾದ್ಯಂತ ಯಾವ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಬೇಕು ಎಂಬ ಬಗ್ಗೆ ಲೋಕಸಭಾ ಕ್ಷೇತ್ರವಾರು ಕಾರ್ಯಕರ್ತರ ಸಮಾವೇಶ ನಡೆಸಿ ಅಭಿಪ್ರಾಯ ಸಂಗ್ರಹಿಸಲಾಗುತ್ತಿದ್ದು, ಇನ್ನಷ್ಟೇ ಅಂತಿಮ ತೀರ್ಮಾನವಾಗಬೇಕಿದೆ ಎಂದರು.
ಜಿಲ್ಲಾಧ್ಯಕ್ಷ ಬಿಲಾಲ್ ಮಾತನಾಡಿ, ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಕೆಲ ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಮನೆ ಮಗನೇ ಕೊಲೆಗೆ ಸುಪಾರಿ ನೀಡಿದ್ದಾಗಿ ಪೋಲಿಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿರುವುದು ಆಘಾತಕಾರಿಯಾಗಿದೆ. ಕೃತ್ಯ ನಡೆದ 72 ಘಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರಿಗೆ ಅಭಿನಂದನೆಗಳು ಎಂದರು.
ಬಿಜೆಪಿ ನಾಯಕನ ಕಡೆಯಿಂದ ನೀಡಲಾದ ಸುಪಾರಿ ಕಿಲ್ಲರ್ಸ್ ಗಳನ್ನು ಮತ್ತು ಸುಪಾರಿ ಕೊಟ್ಟವನನ್ನು ಬಂಧಿಸಿರುವ ಪೊಲೀಸರು ಸಮಗ್ರ ತನಿಖೆ ನಡೆಸಿ ಈ ಪ್ರಕರಣದ ಹಿಂದಿರುವ ನೈಜ ಕಾರಣವೇನು ಎಂಬುದನ್ನು ಸಮಾಜದ ಮುಂದೆ ಬಹಿರಂಗಪಡಿಸಬೇಕು ಎಂದರು.
ಜಿಲ್ಲಾ ಉಸ್ತುವಾರಿ ಮತ್ತು ರಾಜ್ಯ ಸಮಿತಿ ಸದಸ್ಯ ರಂಜಾನ್ ಕಡಿವಾಳ್ ಮಾತನಾಡಿ, ಮುಂದಿನ ದಿನಗಳಲ್ಲಿ ಗುಲಾಮಿ ರಾಜಕೀಯದಿಂದ ಮುಕ್ತಿ ಪಡೆಯಲು ಚಿಂತಿಸಿ ಘನತೆಯ ರಾಜಕೀಯಕ್ಕಾಗಿ ಎ ಎಸ್ ಡಿ ಪಿ ಐ ಪಕ್ಷವನ್ನು ಬಲಪಡಿಸುವ ಅವಶ್ಯಕತೆ ಇದೆ ಎಂದರು
ಮುಂದಿನ ತಿಂಗಳು 7ನೇ ತಾರೀಖಿನಂದು ನಡೆಯುವ ಚುನಾವಣೆಯಲ್ಲಿ ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಮತಚಲಾವಣೆಯ ಪರ್ಸೆಂಟೇಜ್ ಅನ್ನು ಹೆಚ್ಚಿಸಲು ಕಾರ್ಯತಂತ್ರ ರೂಪಿಸುವ ಸಲುವಾಗಿ ಗದಗ ಮತ್ತು ಹಾವೇರಿ ಜಿಲ್ಲೆಯ ಕ್ಷೇತ್ರವಾರು ಪಕ್ಷದ ಕಾರ್ಯಕರ್ತರ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಪ್ರಧಾನ ಕಾರ್ಯದರ್ಶಿ ಅನ್ವರ್ ಬಾಗೇವಾಡಿ, ಉಪಾಧ್ಯಕ್ಷ ಹಿದಾಯತುಲ್ಲಾ ಕಾಗದಗಾರ್, ಕಾರ್ಯದರ್ಶಿ ಇರ್ಫಾನ್ ಗುಲಗುಂದಿ, ಖಜಾಂಚಿ ಮುಜಾಹಿದ್ ಕಣಕೇನ್ನವರ್ ಹಾಗೂ ಜಿಲ್ಲಾ ಸದಸ್ಯರಾದ ಹಸ್ಸನ ನಾಗನೂರ್, ಅಬ್ದುಲ್, ಅನ್ವರ್ ಮುಲ್ಲಾ, ಮುಸ್ತಾಕ್ ಸಾಬ್ ಹೊಸಮನಿ, ವಾರ್ಡಿನ ಅಧ್ಯಕ್ಷರು ಕಾರ್ಯದರ್ಶಿಗಳು ಬ್ರಾಂಚಿನ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಜರಿದ್ದರು.




