ಬೆಂಗಳೂರು: ವಿಧಾನಸಭೆ ಉಪಚುನಾವಣೆ ಮುಗಿಯುತಿದ್ದಂತೆ ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತ ಚರ್ಚೆಗಳು ಬಿರುಸಾಗಿವೆ. ಎ ಐ ಸಿ ಸಿ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು, ಸಂಪುಟ ಪುನರ್ರಚನೆ ಚರ್ಚೆ ರೆಕ್ಕೆಪುಕ್ಕ ಬಲಿತಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಸಂಪುಟ ಪುನಾರಚನೆ, ನೆನೆಗುದಿಗೆ ಬಿದ್ದಿರುವ ನಿಗಮ, ಮಂಡಳಿಗಳ ನೇಮಕಾತಿ, ವಿಧಾನ ಪರಿಷತ್ ನಾಮಕರಣ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯುತ್ತಿದ್ದು, ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಕುರಿತು ಕೂಡ ಮಾತುಕತೆ ನಡೆಯಲಿದೆ ಎನ್ನಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಪಕ್ಷದ ಅಧ್ಯಕ್ಷ ಸ್ಥಾನ ತೊರೆಯುವುದಾಗಿ ಹೇಳಿದ್ದರು. ಇದೀಗ ತಮ್ಮ ಸ್ಥಾನಕ್ಕೆ ಅರ್ಹರನ್ನು ನೇಮಕ ಮಾಡುವಂತೆ ಹೈಕಮಾಂಡ್ ಗೆ ಮನವಿ ಮಾಡಲಿದ್ದಾರೆ.
ಪಕ್ಷದ ಅಧ್ಯಕ್ಷ ಸ್ಥಾನ ತೊರೆಯುವ ಕುರಿತು ಅವರು ಈಗಾಗಲೇ ಸಿದ್ದರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಜೊತೆ ಮಾತುಕತೆ ನಡೆಸಿದ್ದಾರೆ. ಎಐಸಿಸಿ ಕಾರ್ಯಕ್ರಮದಲ್ಲಿ ಈ ಬಗ್ಗೆ ಚರ್ಚೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಶಿವಕುಮಾರ್ ಅವರು ಅಧ್ಯಕ್ಷ ಸ್ಥಾನ ತೊರೆಯಲಿದ್ದಾರೆ ಎಂಬ ಸುದ್ದಿ ಹೊರಬೀಳುತ್ತಿದ್ದಂತೆ ಈ ಸ್ಥಾನಕ್ಕೆ ನೇಮಕಗೊಳ್ಳಲು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಬೃಹತ್ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ಸೇರಿದಂತೆ ಹಲವರು ಲಾಬಿ ಆರಂಭಿಸಿದ್ದಾರೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.




