ಬೆಂಗಳೂರು: ರಾಜ್ಯ ಕಾಂಗ್ರೆಸ್ಸಿನಲ್ಲಿ ನಾಯಕತ್ವ ಬದಲಾವಣೆ ಕುರಿತಂತೆ ಹಗ್ಗ ಜಗ್ಗಾಟ ನಡೆಯುತ್ತಿರುವ ಬೆನ್ನೆಲ್ಲೇ ರಾಷ್ಟ್ರೀಯ ಮಟ್ಟದಲ್ಲಿ ಹಿಂದುಳಿದ ವರ್ಗಗಳನ್ನು ಪಕ್ಷದತ್ತ ಸೆಳೆಯುವ ದೃಷ್ಟಿಯಿಂದ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಚರ್ಚೆ ಆರಂಭವಾಗಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಇದಕ್ಕಾಗಿ ಎಐಸಿಸಿ ಹಿಂದುಳಿದ ವರ್ಗಗಳ ಘಟಕದ ಕಾರ್ಯ ಕಾರ್ಯ ಶೈಲಿಯನ್ನು ನಿರ್ಧರಿಸುವ ದೃಷ್ಟಿಯಿಂದ ರಚಿಸಲಾಗಿರುವ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವರು ಇರುವ ಸಮನ್ವಯ ಸಮಿತಿ ಸಭೆ ನಾಳೆಯಿಂದ ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆಯಲಿದೆ.
ದೇಶದಲ್ಲಿ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಸಮುದಾಯಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಪರಿಹಾರ ಒದಗಿಸಲು ಕಾರ್ಯತಂತ್ರ ರೂಪಿಸುವ ಉದ್ದೇಶದಿಂದ ರಚಿಸಲಾಗಿರುವ ಈ ಸಮಿತಿಯ ಸಭೆ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯಲಿದೆ.
ಈ ಸಮಿತಿಯಲ್ಲಿ ಹಿರಿಯ ನಾಯಕ ಬಿ ಕೆ ಹರಿಪ್ರಸಾದ್, ಡಿಸಿಎಂ ಡಿ ಕೆ ಶಿವಕುಮಾರ್, ಮಾಜಿ ಸಿಎಂಗಳಾದ ವೀರಪ್ಪ ಮೊಯ್ಲಿ, ಅಶೋಕ್ ಗೆಹ್ಲೋಟ್ ಸೇರಿದಂತೆ ಹಲವರು ಇದ್ದಾರೆ.
ಸದ್ಯದಲ್ಲೇ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನವೇ ಹಿಂದುಳಿದ ವರ್ಗಗಳನ್ನು ಆಕರ್ಷಿಸುವ ದೃಷ್ಟಿಯಿಂದ ಕಾಂಗ್ರೆಸ್ ಈ ಸಮಾವೇಶದ ಮೂಲಕ ಹಲವು ನಿರ್ಧಾರಗಳನ್ನು ಕೈಗೊಂಡು ಅದನ್ನು ಘೋಷಿಸುವ ಸಾಧ್ಯತೆ ಇದೆ.




