ಎಸಿ ನ್ಯಾಯಾಲಯಗಳಲ್ಲಿ ಬಾಕಿ ಇದ್ದ ಶೇ.70ರಷ್ಟು ತಕರಾರು ಅರ್ಜಿಗಳ ವಿಲೇ: ಕೃಷ್ಣ ಬೈರೇಗೌಡ ಮೆಚ್ಚುಗೆ
ಹಿಂದಿನ ಸರ್ಕಾರ ಉಳಿಸಿ ಹೋಗಿದ್ದ ಬಹುತೇಕ ಪ್ರಕರಣಗಳಿಗೆ ಮುಕ್ತಿ
ತಕರಾರು ಅರ್ಜಿಗಳ ವಿಲೇಗೆ 18ಜನ ವಿಶೇಷ ʼಎಸಿʼಗಳ ನೇಮಕ
ಜನವರಿ-ಫೆಬ್ರವರಿಯೊಳಗೆ ಎಲ್ಲಾ ಹಳೆ ಪ್ರಕರಣಗಳಿಗೂ ಇತ್ಯರ್ಥದ ಗುರಿ
ಬೆಂಗಳೂರು: ಉಪ ವಿಭಾಗಾಧಿಕಾರಿ (ಎ.ಸಿ) ಕಂದಾಯ ನ್ಯಾಯಾಲಯದಲ್ಲಿ ಈ ಹಿಂದಿನ ಸರ್ಕಾರ ಉಳಿಸಿ ಹೋಗಿದ್ದ ಹಳೆಯ ತಕರಾರು ಅರ್ಜಿಗಳ ಪೈಕಿ ಶೇ.80ರಷ್ಟು ಪ್ರಕರಣಗಳನ್ನು ಕಳೆದ ಒಂದು ವರ್ಷದಲ್ಲಿ ಇತ್ಯರ್ಥಪಡಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳ ಕಾರ್ಯ ವೈಖರಿಗೆ ಮೆಚ್ಚುಗೆ ಸೂಚಿಸಿದರು.
ವಿಕಾಸಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ಉಪ ವಿಭಾಗಾಧಿಕಾರಿಗಳ ಜೊತೆ ಮಾಸಿಕ ಸಭೆ ನಡೆಸಿ ಮಾತನಾಡಿದ ಅವರು, “ಎಸಿ ನ್ಯಾಯಾಲಯಗಳಲ್ಲಿ ಪ್ರಕರಣಗಳನ್ನು ವಿಲೇವಾರಿ ಮಾಡಲು ಸರ್ಕಾರ ನಿಗದಿಪಡಿಸಿರುವ ಕಾಲಮಿತಿ 6 ತಿಂಗಳು ಮಾತ್ರ. ಆದರೆ ಕಳೆದ ಸರ್ಕಾರ ತನ್ನ ಅಧಿಕಾರದ ಅವಧಿಯಲ್ಲಿ ಜನಸಾಮಾನ್ಯರ ಸಮಸ್ಯೆಗಳನ್ನು ಬಗೆಹರಿಸಬೇಕಾದ ಕಂದಾಯ ನ್ಯಾಯಾಲಯಗಳ ಪ್ರಕರಣಗ ವಿಳಂಬದ ಬಗ್ಗೆ ತಲೆಯನ್ನೇ ಕೆಡಿಸಿಕೊಂಡಿರಲಿಲ್ಲ. ಪರಿಣಾಮ ರೈತರು ತೀವ್ರ ತೊಂದರೆ ಒಳಗಾಗಬೇಕಾದ ಸ್ಥಿತಿ ಎದುರಾಗಿತ್ತು” ಎಂದು ವಿಷಾದಿಸಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್ಬೆಂಗಳೂರು: ಗದಗ ತಾಲೂಕನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದೇನೆ ಎಂದು ಮಾಜಿ ಸಚಿವ ಎಚ್ ಕೆ ಪಾಟೀಲ್ ಹೇಳಿದ್ದಾರೆ. ಗದಗ ತಾಲೂಕಿನ ರೈತರು ಹಾಗೂ ಜನತೆ ಎದುರಿಸುತ್ತಿರುವ ಬರ… Read more: ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ“ಮಾತ ತುಳುವೆರೆಗ್ ಎನ್ನ ಮೋಕೆದ ಸೊಲ್ಮೆಲು ❤” ತುಳುವಿನ ಗೌರವದ ಹೆಜ್ಜೆಗೆ ಅಂದು ನಾನು ಮುಖ್ಯಮಂತ್ರಿಯಾಗಿ ಹಾಕಿದ ಅಡಿಪಾಯ, ಇಂದು ಸಾಕಾರಗೊಂಡಿದ್ದನ್ನು ನೋಡಿ ಖುಷಿಯಾಗುತ್ತಿದೆ. ನಿನ್ನೆಯಿಂದ ತುಳು ಭಾಷಿಗರು ವ್ಯಕ್ತಪಡಿಸುತ್ತಿರುವ ಸಂತಸಕ್ಕೆ… Read more: ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆಬೆಳಗಾವಿ: ಪೆರಿಯಾರ್ ಇ.ವಿ.ರಾಮಸ್ವಾಮಿ ನಾಯ್ಕರ್ ನವಯುಗದ ಪ್ರವರ್ತಕ, ಆಗ್ನೇಯ ಏಷ್ಯಾದ ಸಾಕ್ರೆಟಿಸ್, ಸಾಮಾಜಿಕ ಸುಧಾರಣಾ ಚಳುವಳಿಗಳ ತಂದೆ, ಅಜ್ಞಾನ, ಮೌಢ್ಯ ಮತ್ತು ಕಂದಾಚಾರಗಳ ಪರಮ ಶತ್ರು ಎಂಬುದಾಗಿ ಯುನೆಸ್ಕೊ ದಾಖಲಿಸಿದೆ ಎಂದು… Read more: ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿಯಾವ ರೀತಿಯಲ್ಲಿ ರಾಜ್ಯದ ಸಂಪುಟ ಸಭೆಗಳನ್ನು ಆಯಾ ರಾಜ್ಯದ ಬೇರೆಬೇರೆ ಜಿಲ್ಲೆಗಳಲ್ಲಿ ಕೆಲವು ಬಾರಿ ನಡೆಸಿ, ಜಿಲ್ಲಾ ಸಮಸ್ಯೆಗಳಿಗೆ ಹೆಚ್ಚಿನ ಗಮನವನ್ನು ಹರಿಸಿ, ಆ ಜಿಲ್ಲೆಯ ಜನರಲ್ಲಿ ಭರವಸೆಯನ್ನು ಮೂಡಿಸುವಂತಹ ಕಾರ್ಯಕ್ರಮಗಳನ್ನು… Read more: ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂಕರಾವಳಿ ಜಿಲ್ಲೆಗಳ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಲು, ಪ್ರವಾಸೋದ್ಯಮ ಸಹಿತ ಅಭಿವೃದ್ದಿ ನೀತಿಯಲ್ಲಿ ಕಾರ್ಪೊರೇಟ್ ಪರವಾದ ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ ಘೋಷಣೆ ಮಂಗಳೂರು:… Read more: ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
“ನಮ್ಮ ಸರ್ಕಾರ ಅಧಿಕಾರ ವಹಿಸಿಕೊಂಡಾಗ ಎಸಿ ನ್ಯಾಯಾಲಯದಲ್ಲಿ ಒಂದು ವರ್ಷಕ್ಕಿಂತ ಹೆಚ್ಚಿನ ಅವಧಿಯ 59,339 ಪ್ರಕರಣಗಳು ವಿಲೇ ಆಗದೆ ಬಾಕಿ ಉಳಿದಿದ್ದವು. ಕಂದಾಯ ನ್ಯಾಯಾಲಯಗಳಲ್ಲಿ ಪ್ರಕರಣಗಳ ವಿಲೇ ಈ ರೀತಿಯಾಗಿ ಮಿತಿಮೀರಿ ವಿಳಂಭವಾಗುವುದರಿಂದ ಸಾಮಾನ್ಯ ಜನರಿಗೆ ತೀವ್ರ ತೊಂದರೆಯಾಗುತ್ತಿರುವುದನ್ನು ಗಮನಿಸಿದ ನಮ್ಮ ಸರ್ಕಾರ ಇದಕ್ಕೊಂದು ಪರಿಹಾರ ನೀಡಲು ತೀರ್ಮಾನಿಸಿತ್ತು. ಬಾಕಿ ಪ್ರಕರಣಗಳನ್ನು ವಿಲೇ ಮಾಡಬೇಕು ಎಂದು ಮಾನ್ಯ ಮುಖ್ಯಮಂತ್ರಿಯವರ ಸೂಚನೆ ಮೇರೆಗೆ ಕಳೆದ ಒಂದು ವರ್ಷದಲ್ಲಿ ಬಾಕಿ ಪ್ರಕರಣಗಳ ವಿಲೇವಾರಿಯ್ನು ಅಭಿಯಾನ ಮಾದರಿಯಲ್ಲಿ ಕೈಗೆತ್ತಿಕೊಳ್ಳಲಾಗಿದೆ” ಎಂದರು
“ಎಸಿ ನ್ಯಾಯಾಲಯಗಳಲ್ಲಿ ಒಂದು ವರ್ಷಕ್ಕಿಂತ ಹೆಚ್ಚು ಅವಧಿಗೆ ಬಾಕಿ ಇದ್ದ 59,339 ಪ್ರಕರಣಗಳ ಪೈಕಿ 36956 ಕಳೆದ ಒಂದು ವರ್ಷದಲ್ಲಿ ಪ್ರಕರಣಗಳನ್ನು ವಿಲೇ ಮಾಡಲಾಗಿದೆ. ಹಾಲಿ ಬಾಕಿಯನ್ನು 22383 ಕ್ಕೆ ಇಳಿಸಲಾಗಿದ್ದು, ಶೇ.70ಕ್ಕೂ ಹೆಚ್ಚು ಪ್ರಗತಿ ಸಾಧಿಸಲಾಗಿದೆ” ಎಂದು ಅಧಿಕಾರಿಗಳ ಕಾರ್ಯ ವೈಖರಿ ಬಗ್ಗೆ ಮೆಚ್ಚುಗೆ ಸೂಚಿಸಿದರು.
“1 ರಿಂದ 5ವರ್ಷಗಳ ಅವಧಿಯಲ್ಲಿ ಬಾಕಿ ಉಳಿದಿದ್ದ 26,552 ಪ್ರಕರಣಗಳ ಪೈಕಿ 10,992 ಪ್ರಕರಣಗಳನ್ನು ವಿಲೇ ಮಾಡಲಾಗಿದೆ. ಇನ್ನೂ 5 ವರ್ಷಕ್ಕೂ ಮೇಲ್ಪಟ್ಟ 32,787 ಪ್ರಕರಣಗಳನ್ನು ಈ ಹಿಂದಿನ ಸರ್ಕಾರ ಬಾಕಿ ಉಳಿಸಿಹೋಗಿತ್ತು. ಇದು ಆಡಳಿತ ಯಂತ್ರ ವೈಫಲ್ಯವಲ್ಲದೆ ಮತ್ತೇನು ಅಲ್ಲ. ಆದರೆ, ಈ ಪ್ರಕರಣಗಳನ್ನೂ ಕಳೆದ ಇಂದು ವರ್ಷದ ಅವಧಿಯಲ್ಲಿ 25,964 ಪ್ರಕರಣಗಳಿಗೆ ಮುಕ್ತಿ ನೀಡಲಾಗಿದೆ. ಕೇವಲ 6823 ಪ್ರಕರಣಗಳನ್ನು ಮಾತ್ರ ಉಳಿಸಲಾಗಿದೆ” ಎಂದು ಪ್ರಶಂಸಿಸಿದರು.
“ಎಸಿ ಕಂದಾಯ ನ್ಯಾಯಾಲಯಗಳಲ್ಲಿನ ಪ್ರಕರಣಗಳ ಇತ್ಯರ್ಥಕ್ಕಾಗಿಯೇ ಸರ್ಕಾರ 18 ಜನ ವಿಶೇಷ ಉಪ ವಿಭಾಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ತಕರಾರು ಅರ್ಜಿಗಳ ವಿಲೇವಾರಿಯನ್ನು ಎಲ್ಲಾ ಅಧಿಕಾರಿಗಳೂ ಇದೇ ವೇಗದಲ್ಲಿ ಮುಂದುವರೆಸಿದರೆ ಮುಂದಿನ ಜನವರಿ ಅಥವಾ ಫೆಬ್ರವರಿಯೊಳಗಾಗಿ ಎಲ್ಲಾ ಬಾಕಿ ಪ್ರಕರಣಗಳೂ ಇತ್ಯರ್ಥವಾಗಲಿದೆ. ಅಲ್ಲದೆ, ಉಪ ವಿಭಾಗಾಧಿಕಾರಿಗಳು ವಾರಕ್ಕೆ ನಾಲ್ಕು ಮತ್ತು ವಿಶೇಷ ಉಪ ವಿಭಾಗಾಧಿಕಾರಿಗಳು ಎರಡು ಪ್ರಕರಣವನ್ನು ವಿಲೇಗೊಳಿಸಬೇಕು” ಎಂದು ಅವರು ತಿಳಿಸಿದರು.
ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯ, ಕಂದಾಯ ಆಯುಕ್ತ ಸುನೀಲ್ ಕುಮಾರ್ ಹಾಜರಿದ್ದರು.




