ಬೆಂಗಳೂರು: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತವರ ಕುಟುಂಬದ ಸಿದ್ಧಾರ್ಥ ವಿಹಾರ ಟ್ರಸ್ಟ್ ಗೆ ಕೆಐಎಡಿಬಿ ಜಮೀನು ಮಾಡಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪದ ಹೈಟೆಕ್ ಡಿಫೆನ್ಸ್ ಏರೋಸ್ಪೇಸ್ ಪಾರ್ಕ್ ನಲ್ಲಿ ಪರಿಶಿಷ್ಟ ಜಾತಿ ಕೋಟಾದಲ್ಲಿ ಈ ಟ್ರಸ್ಟ್ ಗೆ ಜಮೀನು ಮಂಜೂರು ಮಾಡಲಾಗಿದೆ.
ಟ್ರಸ್ಟ್ ನಲ್ಲಿ ಸ್ವತಃ ಮಲ್ಲಿಕಾರ್ಜುನ ಖರ್ಗೆ, ಅವರ ಪತ್ನಿ ರಾಧಾಬಾಯಿ ಖರ್ಗೆ, ಅಳಿಯ ರಾಧಾಕೃಷ್ಣ, ಅವರ ಮಗ ಹಾಗೂ ರಾಜ್ಯದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಮತ್ತೊಬ್ಬ ಪುತ್ರ ರಾಹುಲ್ ಖರ್ಗೆ ಇದ್ದಾರೆ.
ಸದರಿ ಟ್ರಸ್ಟ್ ಗೆ ಭೂಮಿ ಹಂಚಿಕೆಯ ಕ್ರಮ ಸ್ವಹಿತಾಸಕ್ತಿ ಸಂಘರ್ಷ, ಸ್ವಜನಪಕ್ಷಪಾತ, ಅಧಿಕಾರದ ದುರ್ಬಬಳಕೆ ಎಂದು ಆರೋಪಿಸಿರುವ ಬಿಜೆಪಿಯ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಈ ಟ್ರಸ್ಟ್ ಯಾವ ವೈಮಾನಿಕ ಉದ್ಯಮ ನಡೆಸುತ್ತಿದೆ, ಯಾವ ಆಧಾರದಲ್ಲಿ ಇದಕ್ಕೆ ಜಮೀನು ನೀಡಲಾಗಿದೆ ಎಂದು ಪ್ರಶ್ನಿಸಿದ್ದಾರೆ.
ಇದಕ್ಕೆ ಸ್ಪಷ್ಟನೆ ನೀಡಿರುವ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್, ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್ ಗೆ ಏರೋಸ್ಪೇಸ್ ಪಾರ್ಕ್ ನಲ್ಲಿ ಸಿ.ಎ. ನಿವೇಶನವನ್ನು ಕಾನೂನಿನ ಪ್ರಕಾರವೇ ನಿಗದಿತ ಬೆಲೆಗೆ ಕೊಡಲಾಗಿದೆ. ಅವರು ಅಲ್ಲಿ ಸಂಶೋಧನೆ ಮತ್ತು ತರಬೇತಿ ಕೇಂದ್ರ ಸ್ಥಾಪಿಸುವುದಾಗಿ ಹೇಳಿದ್ದಾರೆ. ಇದರಲ್ಲಿ ಯಾವ ನಿಯಮವೂ ಉಲ್ಲಂಘನೆ ಆಗಿಲ್ಲ ಎಂದು ತಿಳಿಸಿದ್ದಾರೆ
ಕೆಐಎಡಿಬಿ ನಿಯಮಗಳ ಪ್ರಕಾರ ಸಿ.ಎ ನಿವೇಶನಗಳಲ್ಲಿ ಆರ್ & ಡಿ ಕೇಂದ್ರಗಳು, ಉತ್ಕೃಷ್ಟತಾ ಕೇಂದ್ರಗಳು, ತಾಂತ್ರಿಕ ಸಂಸ್ಥೆಗಳು, ಕೌಶಲ್ಯಾಭಿವೃದ್ಧಿ, ಸರಕಾರಿ ಕಚೇರಿಗಳು, ಬ್ಯಾಂಕು, ಆಸ್ಪತ್ರೆ, ಹೋಟೆಲ್, ಪೆಟ್ರೋಲ್ ಬಂಕ್, ಕ್ಯಾಂಟೀನ್, ವಸತಿ ಸೌಲಭ್ಯ ಇತ್ಯಾದಿಗಳ ಅಭಿವೃದ್ಧಿಗೆ ಅವಕಾಶವಿದೆ. ಆಸಕ್ತರು ಯಾರು ಬೇಕಾದರೂ ಇದಕ್ಕೆ ಪ್ರಯತ್ನಿಸಬಹುದು. ರಾಜ್ಯ ಮಟ್ಟದ ಏಕಗವಾಕ್ಷಿ ಸಮಿತಿಯ ಶಿಫಾರಸಿನ ನಂತರವಷ್ಟೇ ಇವುಗಳ ಹಂಚಿಕೆಯಾಗುತ್ತದೆ ಎಂದರು.
ಏರೋಸ್ಪೇಸ್ ಪಾರ್ಕಿನಲ್ಲಿ ಟ್ರಸ್ಟ್ ಗೆ ಕೈಗಾರಿಕಾ ನಿವೇಶನವನ್ನೇನೂ ಕೊಟ್ಟಿಲ್ಲ. ಬದಲಿಗೆ, ಸಿ.ಎ. ನಿವೇಶನವನ್ನು ಆರ್ ಆ್ಯಂಡ್ ಡಿ ಕೇಂದ್ರ ಸ್ಥಾಪನೆಗಾಗಿ ನಿಗದಿತ ಬೆಲೆಗೇ ಕೊಡಲಾಗಿದೆ. ಇದರಲ್ಲಿ ಅವರಿಗೆ ಯಾವ ರಿಯಾಯಿತಿಯನ್ನೂ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಹಿಂದೆ ಬಿಜೆಪಿ ಸರಕಾರದಲ್ಲಿ ಚಾಣಕ್ಯ ವಿಶ್ವವಿದ್ಯಾಲಯಕ್ಕೆ ಕೈಗಾರಿಕಾ ಪ್ರದೇಶದಲ್ಲೇ 116 ಎಕರೆಯನ್ನು ಬರೀ 50 ಕೋಟಿ ರೂ.ಗೆ ಕೊಡಲಾಗಿದೆ. ಅದರಿಂದ 137 ಕೋಟಿ ರೂ. ಬೊಕ್ಕಸಕ್ಕೆ ನಷ್ಟವಾಗಿದೆ. ಲೆಹರ್ ಸಿಂಗ್ ಅವರು ಈ ಬಗ್ಗೆಯೂ ಚಕಾರ ಎತ್ತಬಹುದಲ್ಲವೇ ಎಂದು ಪ್ರಶ್ನಿಸಿದರು.




