ಕಾಟನ್ ಪೇಟೆಯಲ್ಲಿ ಸಾರ್ವಜನಿಕರಿಗೆ ಉಚಿತವಾಗಿ 3000 ಗಣೇಶ ಮೂರ್ತಿ ವಿತರಣೆ

2 years ago

ಮಹಿಳೆಯರಿಗೆ ಬಾಗಿನ ವಿತರಣೆ

ಪರಿಸರ ಸ್ನೇಹಿ ಗಣೇಶ ಹಬ್ಬ ಅಚರಣೆ ಮಾಡೋಣ, ಪಿ.ಓ.ಪಿ.ಗಣೇಶ ನಿರ್ಬಂಧಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕು: ದಿನೇಶ್ ಗುಂಡೂರಾವ್

ಬೆಂಗಳೂರು: ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕಾಟನ್ ಪೇಟೆಯಲ್ಲಿ ಸಾರ್ವಜನಿಕರಿಗೆ ಗಣೇಶ ಹಬ್ಬದ ಪ್ರಯುಕ್ತ 3000ಸಾವಿರ ಗೌರಿ, ಗಣೇಶಮೂರ್ತಿಗಳ ವಿತರಣೆ ಮತ್ತು ಮಹಿಳೆಯರಿಗೆ ಬಾಗಿನ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಮತ್ತು ಕಾಟನ್ ಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶ್ರೀನಿವಾಸಮೂರ್ತಿ ಸಾರ್ವಜನಿಕರಿಗೆ ಗಣೇಶ ಮೂರ್ತಿಗಳನ್ನು ವಿತರಿಸಿದರು.

ಇದೇ ವೇಳೆ ಮಾತನಾಡಿದ ದಿನೇಶ್ ಗುಂಡೂರಾವ್, ವಿಘ್ನಗಳ ನಿವಾರಣೆಯಾಗಲಿ, ಸುಖ, ಶಾಂತಿ ಮತ್ತು ನೆಮ್ಮದಿ ಲಭಿಸಲಿ. ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಮಾಡಬೇಕು ಎಂದರು.

ಪರಿಸರ ಸಂರಕ್ಷಣೆ ಮಾಡುವುದು ಅಷ್ಟೆ ಮುಖ್ಯ. ಜನರ ಸಹಕಾರದಿಂದ ಮಾತ್ರ ಪಿ.ಓ.ಪಿ.ಗಣೇಶ ಮೂರ್ತಿ ಪ್ರತಿಷ್ಠಾಪನೆ ನಿಲ್ಲುವುದು. ಪರಿಸರ ಉಳಿಯಬೇಕು ಎಂದರೆ ಎಲ್ಲರು ಮಣ್ಣಿನ ಗಣೇಶ ಪ್ರತಿಷ್ಠಾಪನೆ ಮಾಡುವ ಮೂಲಕ ಗಣೇಶ ಹಬ್ಬ ಆಚರಣೆ ಮಾಡೋಣ ಎಂದು ಕರೆ ನೀಡಿದರು.

ನಾಡಿನಲ್ಲಿ ಉತ್ತಮ ಮಳೆಯಾಗಿದೆ ಮತ್ತು ರಾಜ್ಯದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಮಹತ್ವಪೂರ್ಣ ಕ್ರಾಂತಿ ತರಲಾಗಿದೆ ಎಂದರು.

ಶ್ರೀನಿವಾಸಮೂರ್ತಿ ಮಾತನಾಡಿ, ಸಚಿವರಾದ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಕಾಟನ್ ಪೇಟೆ ಬ್ಲಾಕ್ ನಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಮಾಡಲಾಗಿದೆ ಎಂದರು

ರಾಜ್ಯ ಸರ್ಕಾರದ ಜನಪ್ರಿಯ ಯೋಜನೆಗಳಾದ 5 ಗ್ಯಾರಂಟಿ ಯೋಜನೆಗಳನ್ನು ಕಾಟನ್ ಪೇಟೆ ಬ್ಲಾಕ್ ನಲ್ಲಿ ಪ್ರತಿ ಮನೆಗಳಿಗೆ ತಲುಪಿಸಲಾಗಿದೆ ಎಂದರು.

ಸಾರ್ವಜನಿಕರು ತಮ್ಮ ಮನೆಗಳಲ್ಲಿ ಅದ್ದೂರಿಯಾಗಿ ಆಚರಿಸಲಿ ಎಂದು 3000 ಗಣೇಶ ಮೂರ್ತಿಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ ಮತ್ತು ಮಹಿಳೆಯರಿಗೆ ಬಾಗಿನ ನೀಡಲಾಗುತ್ತಿದೆ ಎಂದರು.

ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜೆ.ಸರವಣನ್, ಕಾಂಗ್ರೆಸ್ ಪಕ್ಷದ ಮುಖಂಡ ಶಶಿ ಮತ್ತು ಸ್ಥಳೀಯ ಕಾರ್ಯಕರ್ತರು ಹಾಜರಿದ್ದರು.

Leave a Reply