ಪರಿಸರ ಉಳಿಸಿ, ಬೆಳೆಸಲು ಮತ್ತು ಸಾರ್ವಜನಿಕರಿಗೆ ಪರಿಸರ ಜಾಗೃತಿ ಮೂಡಿಸಲು ಬಾಂಧವ ಸಂಸ್ಥೆ ಶ್ರಮಿಸುತ್ತಿದೆ: ಎನ್.ನಾಗರಾಜು
ಬೆಂಗಳೂರು: ಜಯನಗರದ ಬಾಂಧವ ಸಾಮಾಜಿಕ ಸೇವಾ ಸಂಸ್ಥೆ ವತಿಯಿಂದ ಎಲ್.ಐ.ಸಿ. ಕಾಲೋನಿ ಉದ್ಯಾನವನದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಜೇಡಿ ಮಣ್ಣಿನ ಗಣೇಶ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಮಾಜಿ ಶಾಸಕಿ, ಕೆಪಿಸಿಸಿ ಮಹಿಳಾ ರಾಜ್ಯಾಧ್ಯಕ್ಷೆ ಸೌಮ್ಯ ರೆಡ್ಡಿ, ಜಯನಗರ ಗ್ಯಾರಂಟಿ ಯೋಜನೆ ಆನುಷ್ಠಾನ ಸಮಿತಿ ಅಧ್ಯಕ್ಷ ಎನ್.ನಾಗರಾಜು ಮಣ್ಣಿನ ಗಣೇಶ ಮೂರ್ತಿಗಳನ್ನು ಸಾರ್ವಜನಿಕರಿಗೆ ವಿತರಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಎನ್.ನಾಗರಾಜು, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿಯವರ ಮಾರ್ಗದರ್ಶನದಲ್ಲಿ ಬೈರಸಂದ್ರ ವಾರ್ಡ್ ನಲ್ಲಿ 9 ವರ್ಷದಿಂದ ಕೆರೆಯಿಂದ ತಂದ ಜೇಡಿ ಮಣ್ಣಿನಿಂದ ತಯಾರಿಸಿದ ಗೌರಿ, ಗಣೇಶ ಮೂರ್ತಿಗಳನ್ನು ಬಾಂಧವ ಸಂಸ್ಥೆ ವತಿಯಿಂದ ವಿತರಿಸಲಾಗುತ್ತಿದೆ ಎಂದರು.
ಸಾರ್ವಜನಿಕರಿಗೆ ಪರಿಸರ ಜಾಗೃತಿ ಅಭಿಯಾನದ ಜೊತೆಯಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ ಅಚರಣೆ ಪ್ರಯುಕ್ತ ಸಾವಿರಾರು ಜೇಡಿ ಮಣ್ಣಿನ ಗಣೇಶ ಮೂರ್ತಿಗಳನ್ನು ಸಾರ್ವಜನಿಕರಿಗೆ ವಿತರಿಸಲಾಗುತ್ತಿದೆ ಎಂದರು.
ಬಾಂಧವ ಸಂಸ್ಥೆ ಕಲೆ, ಸಾಹಿತ್ಯ, ಮಕ್ಕಳ ಶಿಕ್ಷಣ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಪ್ರೋತ್ಸಾಹ, ಸಹಕಾರ ನೀಡುತ್ತಾ ಬಂದಿದೆ. ಹಿಂದೂ, ಮುಸ್ಲಿಂ, ಕಿಶ್ಚಿಯನ್ ಎಲ್ಲ ಸಮುದಾಯದವರು ಒಟ್ಟಾಗಿ ಸೇರಿ ನಮ್ಮ ವಾರ್ಡ್ ನಲ್ಲಿ ಗಣೇಶ ಹಬ್ಬ ಆಚರಿಸಲಾಗುತ್ತದೆ ಎಂದರು.
ಪರಿಸರ ಉಳಿದರೆ ಮಾತ್ರ ಮನುಷ್ಯ ಉಳಿಯಲು ಸಾಧ್ಯ, ಮುಂದಿನ ಜನಾಂಗಕ್ಕೆ ಪರಿಸರ ನಾಶ ಮಾಡದೇ ಉಳಿಸಬೇಕು ಎಂಬ ಉದ್ದೇಶದಿಂದ ಬಾಂಧವ ಸಂಸ್ಥೆ ಶ್ರಮಿಸುತ್ತಿದೆ. ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ ಮತ್ತು ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿ ಯೋಜನೆಗಳು ರಾಜ್ಯದ ಪ್ರತಿ ಕುಟುಂಬಗಳಿಗೆ ತಲುಪಿವೆ. ರಾಜ್ಯದ ಜನ ಕಾಂಗ್ರೆಸ್ ಪಕ್ಷದ ಜನಪರ ಆಡಳಿತಕ್ಕೆ ಅಭೂತಪೂರ್ವ ಸಹಕಾರ ನೀಡುತ್ತಿದ್ದಾರೆ ಎಂದರು.
ಗಣೇಶ ಹಬ್ಬ ಎಲ್ಲರ ಬಾಳಿನಲ್ಲಿ ಸುಖ, ಶಾಂತಿ ನೆಮ್ಮದ್ದಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.




