ಕಾರವಾರ: ವಿಧಾನ ಪರಿಷತ್ ಶಾಸಕರ 2023-24 ನೇ ಸಾಲಿನ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ ಅವರು ನಗರಸಭೆ ಆವರಣದಲ್ಲಿ ಒಟ್ಟು 9 ವಿಕಲಚೇತನರಿಗೆ 10 ಲಕ್ಷ ರೂ ಅನುದಾನದಲ್ಲಿ ಯಂತ್ರಚಾಲಿತ ತ್ರಿಚಕ್ರ ವಾಹನವನ್ನು ವಿತರಿಸಿದರು.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ನಂತರ ಮಾತನಾಡಿದ ಅವರು, ವಿಕಲಚೇತನರು ಸ್ವಾವಲಂಬಿಗಳಾಗಿ ಬದುಕಬೇಕು. ಉದ್ಯೋಗಕ್ಕಾಗಿ ಮತ್ತು ಮತ್ತಿತರ ವ್ಯವಸ್ಥೆಗಳಿಗೆ ಬೇರೆಯವರನ್ನು ಆಶ್ರಯಿಸಬೇಕಾದ ಅನಿವಾರ್ಯತೆ ಇದೆ. ಆ ಕಾರಣಕ್ಕೆ ಅವರ ಬದುಕಿಗೆ ಚೈತನ್ಯ ನೀಡಲು ಮತ್ತು ಉಳಿದವರಿಗಿಂತ ನಾವೇನೂ ಕಡಿಮೆ ಇಲ್ಲ ಎಂದು ಸಾಧಿಸಿ ತೋರಿಸಲು ಸರ್ಕಾರ ನೆರವು ನೀಡುತ್ತಿದೆ ಇವುಗಳ ಸದುಪಯೋಗ ಪಡೆಯಬೇಕು ಎಂದರು.
ಕಳೆದ ವರ್ಷ ಕೂಡಾ 10 ಜನ ಫಲಾನುಭವಿಗಳಿಗೆ ವಾಹನ ವಿತರಣೆ ಮಾಡಲಾಗಿದ್ದು, ಮುಂದಿನ ವರ್ಷ ವಿಕಲಚೇತನ ಮಕ್ಕಳಿಗೆ ವಿದ್ಯಾಭ್ಯಾಸ ಸಲುವಾಗಿ ಲ್ಯಾಪ್ಟಾಪ್ ಕಂಪ್ಯೂಟರ್ ವಿತರಣೆ ಮಾಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ನಗರಸಭಾ ಅಧ್ಯಕ್ಷ ರವಿರಾಜ ಅಂಕೋಲೆಕರ, ಸ್ಥಾಯಿ ಸಮಿತಿ ಅಧ್ಯಕ್ಷೆ ಮಾಲಾ ಹುಲಸ್ವಾರ, ವಿಕಲಚೇತನ ಕಲ್ಯಾಣಾಧಿಕಾರಿ ರಾಘವೇಂದ್ರ ಭಟ್ಟ, ನಗರಸಭೆ ಎಎಇ ಸದಾನಂದ ಮತ್ತಿತರರು ಉಪಸ್ಥಿತರಿದ್ದರು.




