ಶಿವಮೊಗ್ಗ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ಅಂತ್ಯೋದಯ ಅನ್ನಭಾಗ್ಯ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು ಪಡಿತರ ಚೀಟಿಯ ಕುಟುಂಬ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮುಖಾಂತರ ಅಕ್ಕಿ ಹಣವನ್ನು ವರ್ಗಾಯಿಸುವ ಪ್ರಕ್ರಿಯೆ ಬದಲಾಗಿ 2025 ರ ಫೆಬ್ರವರಿ ಮಾಹೆಯಿಂದ ಜಾರಿಗೆ ಬರುವಂತೆ ಅರ್ಹ ಫಲಾನುಭವಿಗಳಿಗೆ ಹೆಚ್ಚುವರಿ 5 ಕೆ.ಜಿ ಅಕ್ಕಿ ವಿತರಣೆ ಮಾಡಲು ಆದೇಶಿಸಲಾಗಿದೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ವಿತರಣೆ ಪ್ರಮಾಣ: ಅಂತ್ಯೋದಯ ಪಡಿತರರಿಗೆ 1 ರಿಂದ 3 ಸದಸ್ಯರಿರುವ ಕಾರ್ಡಿಗೆ 35 ಕೆ.ಜಿ. ಅಕ್ಕಿ. 4 ಸದಸ್ಯರಿರುವ ಕಾರ್ಡಿಗೆ 45 ಕೆ.ಜಿ. ಅಕ್ಕಿ, 5 ಸದಸ್ಯರರಿರುವ ಕಾರ್ಡಿಗೆ 65 ಕೆ.ಜಿ. ಅಕ್ಕಿ, 6 ಸದಸ್ಯರಿರುವ ಕಾರ್ಡಿಗೆ 85 ಕೆ.ಜಿ. ಅಕ್ಕಿ, 7 ಸದಸ್ಯರಿರುವ ಕಾರ್ಡುದಾರರಿಗೆ 105 ಕೆ.ಜಿ ಅಕ್ಕಿ ,8 ಸದಸ್ಯರಿರುವ ಕಾರ್ಡಿಗೆ 125 ಕೆ.ಜಿ. ಅಕ್ಕಿ, 9 ಸದಸ್ಯರಿರುವ ಕಾರ್ಡಿಗೆ 145 ಕೆ.ಜಿ. ಅಕ್ಕಿ, 10 ಸದಸ್ಯರಿರುವ ಕಾರ್ಡಿಗೆ 165 ಕೆ.ಜಿ. ಅಕ್ಕಿ, 11 ಸದಸ್ಯರಿರುವ ಕಾರ್ಡಿಗೆ 185 ಕೆ.ಜಿ. ಅಕ್ಕಿ, 12 ಸದಸ್ಯರಿರುವ ಕಾರ್ಡಿಗೆ 205 ಕೆಜಿ. ಅಕ್ಕಿಯನ್ನು ಹಾಗೂ ಆದ್ಯತಾ ಪಡಿತರ(ಪಿಪಿಹೆಚ್/ಬಿಪಿಎಲ್) ಚೀಟಿಯಲ್ಲಿನ ಪ್ರತಿಯೊಬ್ಬ ಸದಸ್ಯರಿಗೆ 15 ಕೆ.ಜಿ. ಅಕ್ಕಿಯನ್ನು ಕೊಡಲಾಗುತ್ತದೆ.
ಪಡಿತರ ಚೀಟಿದಾರರು ಮಾರ್ಚ್ ತಿಂಗಳ ಅಂತ್ಯದವರೆಗೆ ತಮ್ಮ ವ್ಯಾಪ್ತಿಯ ನ್ಯಾಯ ಬೆಲೆ ಅಂಗಡಿಯಲ್ಲಿ ಬಯೋಮೆಟ್ರಿಕ್ ಕೊಟ್ಟು ರಶೀದಿ ಪಡೆದು ಉಚಿತವಾಗಿ ಆಹಾರಧಾನ್ಯವನ್ನು ಪಡೆದುಕೊಳ್ಳಬಹುದಾಗಿದೆ. ಒಂದು ವೇಳೆ ನ್ಯಾಯ ಬೆಲೆ ಅಂಗಡಿಯವರು ಕಡಿಮೆ ಪ್ರಮಾಣದಲ್ಲಿ ಅಕ್ಕಿಯನ್ನು ವಿತರಿಸಿದಲ್ಲಿ ಟೋಲ್ಫ್ರೀ ಸಂ.1967, ಆಹಾರ ನಿರೀಕ್ಷಕರ ಮೊ.ಸಂ. 9611195920 ಗೆ ದೂರು ಸಲ್ಲಿಸಬಹುದು.




