ಹೊಸ ಯರಗನಹಳ್ಳಿಯಲ್ಲಿ ಮಣ್ಣು ಪರೀಕ್ಷೆ ವರದಿ ವಿತರಣೆ ಮತ್ತು ರೈತರೊಂದಿಗೆ ಸಂವಾದ
ಪುಟ್ಟಣ್ಣಯ್ಯ ಫೌಂಡೇಶನ್, ಕರ್ನಾಟಕ ಕೃಷಿ ಇಲಾಖೆ, ಆನೋಡ್, ಅಸರ್ ಮತ್ತು ಕರ್ನಾಟಕ ರಾಜ್ಯ ರೈತ ಸಂಘದ ಸಹಯೋಗ
ಮಂಡ್ಯ: ಮೇಲುಕೋಟೆ ವಿಧಾನಸಭೆ ವ್ಯಾಪ್ತಿಯ ಹೊಸ ಯರಗನಹಳ್ಳಿಯಲ್ಲಿ ಮಣ್ಣು ಪರೀಕ್ಷಾ ಫಲಿತಾಂಶ ವಿತರಣೆ ಹಾಗೂ ಮಣ್ಣಿನ ಆರೋಗ್ಯ ಸಂರಕ್ಷಣೆ ಸಹಭಾಗಿತ್ವ ಕುರಿತು ಜಾಗೃತಿ ಕಾರ್ಯಕ್ರಮವನ್ನು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ಮಾರ್ಗದರ್ಶನದಲ್ಲಿ, ಪುಟ್ಟಣ್ಣಯ್ಯ ಫೌಂಡೇಶನ್, ಕರ್ನಾಟಕ ಕೃಷಿ ಇಲಾಖೆ, ಆನೋಡ್, ಅಸರ್ ಮತ್ತು ಕರ್ನಾಟಕ ರಾಜ್ಯ ರೈತ ಸಂಘದ ಸಹಯೋಗದೊಂದಿಗೆ ಆಯೋಜಿಸಲಾಗಿತ್ತು.
- ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಫೇಕುಗಳ ಕಾಟ!
- ಇತಿಹಾಸದಲ್ಲೇ ದಾಖಲೆ ಬರೆಯುವಂತೆ ಬಸ್ ಟಿಕೆಟ್ ದರ ಏರಿಕೆ: ಆರ್ ಅಶೋಕ್
- ನವೆಂಬರ್ 07 ರಿಂದ ಎರಡನೇ ಹಂತದ ‘ವಾರ್ಡ್ ಒನ್’ ಅಭಿಯಾನ
- ಆ್ಯಕ್ಸಿಡೆಂಟಲ್ ಸಿಎಂ ಬೊಮ್ಮಾಯಿ ಅವರೇ ಹಾವೇರಿ ಕ್ಷೇತ್ರದ ಬಗ್ಗೆ ಗಮನ ಕೊಡಿ: ಬಿ ಕೆ ಹರಿಪ್ರಸಾದ್
- 40 ದಾಟಿದ ಪುರುಷರ ಮನಸ್ಸನ್ನು ಅರ್ಥಮಾಡಿಕೊಳ್ಳುವುದು ಹೇಗೆ?
ಇದೇ ವೇಳೆ ಹೊಸ ಯರಗನಹಳ್ಳಿ ಭಾಗದಲ್ಲಿ ಈ ಹಿಂದೆ ನಡೆಸಲಾಗಿದ್ದ ಮಣ್ಣು ಪರೀಕ್ಷೆಯ ಫಲಿತಾಂಶಗಳು ಹಾಗೂ ವರದಿಗಳನ್ನು ಅಧಿಕೃತವಾಗಿ ರೈತರಿಗೆ ವಿತರಿಸಲಾಯಿತು. ಜೊತೆಗೆ, ವರದಿ ವಿತರಣೆಯ ನಂತರ ರೈತರೊಂದಿಗೆ ವಿಶೇಷ ಸಂವಾದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ “ಮಣ್ಣನ್ನು ಹೇಗೆ ಕಾಪಾಡಿಕೊಳ್ಳಬೇಕು ಮತ್ತು ಮಣ್ಣಿನ ಆರೋಗ್ಯವನ್ನು ಹೇಗೆ ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು” ಎಂಬ ಬಗ್ಗೆ ತಜ್ಞರು ರೈತರಿಗೆ ಮಾರ್ಗದರ್ಶನ ನೀಡಿ, ಅವರ ಸಂಶಯಗಳಿಗೆ ಉತ್ತರಿಸಿ, ಸಂದೇಹವನ್ನು ಪರಿಹರಿಸಿದರು.
ರೈತರ ಪರವಾದ ಈ ಕಾರ್ಯಕ್ರಮದ ಕುರಿತು ಮತ್ತು ದರ್ಶನ್ ಪುಟ್ಟಣ್ಣಯ್ಯನವರ ದೂರದೃಷ್ಟಿಯ ಯೋಜನೆಗಳ ಕುರಿತು ಕಾರ್ಯಕ್ರಮದಲ್ಲಿ ಹಾಜರಿದ್ದ ನಾಗರಿಕರು ಪ್ರಶಂಸೆ ವ್ಯಕ್ತಪಡಿಸಿದರು. ಜೊತೆಗೆ, ಇದಕ್ಕೆ ನೆರವಾದ ಪುಟ್ಟಣ್ಣಯ್ಯ ಫೌಂಡೇಶನ್, ಕರ್ನಾಟಕ ಕೃಷಿ ಇಲಾಖೆ, ಆನೋಡ್, ಅಸರ್ ಮತ್ತು ಕರ್ನಾಟಕ ರಾಜ್ಯ ರೈತ ಸಂಘದವರಿಗೆ ಧನ್ಯವಾದಗಳನ್ನು ಅರ್ಪಿಸಿದರು.
ಕಾರ್ಯಕ್ರಮದಲ್ಲಿ ಪುಟ್ಟಣ್ಣಯ್ಯ ಫೌಂಡೇಶನ್ ಪದಾಧಿಕಾರಿಗಳು, ಕರ್ನಾಟಕ ಕೃಷಿ ಇಲಾಖೆಯ ಅಧಿಕಾರಿಗಳು, ಆನೋಡ್ ಮತ್ತು ಅಸರ್ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರು ಹಾಜರಿದ್ದರು.




