ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನಾಚರಣೆ
ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನಾಚರಣೆ
ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಸೆಪ್ಟೆಂಬರ್ 5 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಹದಡಿ ರಸ್ತೆಯಲ್ಲಿರುವ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ರಡವರ ಜನ್ಮ ದಿನಾಚರಣೆ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪುರಸ್ಕೃತರಿಗೆ ಹಾಗೂ ದಾವಣಗೆರೆ ಉತ್ತರ ಮತ್ತು ದಕ್ಷಿಣ ವಲಯದ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭವನ್ನು ಆಯೋಜಿಸಲಾಗಿದೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಕಾರ್ಯಕ್ರಮ ಉದ್ಘಾಟಿಸುವರು. ವಿಧಾನಸಭಾ ಸದಸ್ಯ ಡಾ. ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು. ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಚಿತ್ರಕಲಾ ಪ್ರದರ್ಶನ ಭಾವಚಿತ್ರಗಳ ಅನಾವರಣ ಮಾಡುವರು.
ಮುಖ್ಯ ಅತಿಥಿಗಳಾಗಿ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ, ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ, ಹರಿಹರ ಶಾಸಕ ಬಿ.ಪಿ ಹರೀಶ್, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್ ಭೋಜೇಗೌಡ, ಡಿ.ಎಸ್ ಅರುಣ್, ಚಿದಾನಂದ. ಎಂ.ಗೌಡ, ಕೆ.ಎಸ್ ನವೀನ್, ಕೆ.ಅಬ್ದುಲ್ ಜಬ್ಬಾರ್, ಡಾ.ಧನಂಜಯ್ ಸರ್ಜಿ, ಡಿ.ಟಿ.ಶ್ರೀನಿವಾಸ್, ರಾಜ್ಯ ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಆಸಗೋಡು ಜಯಸಿಂಹ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮದ ಅಧ್ಯಕ್ಷ ಎನ್.ಜಯದೇವನಾಯ್ಕ, ದೂಡಾ ಅಧ್ಯಕ್ಷ ದಿನೇಶ್.ಕೆ.ಶೆಟ್ಟಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಮನೂರು ಟಿ ಬಸವರಾಜ್, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ರಾಅವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಪಾಲಿಕೆ ಆಯುಕ್ತೆ ರೇಣುಕಾ, ತಹಶೀಲ್ದಾರ್ ಅಶ್ವಥ್, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ರಾಮಭೋವಿ, ಕರ್ನಾಟಕ ರಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವೀರೇಶ್.ಎಸ್.ಒಡೇನ್ಪುರ ಭಾಗವಹಿಸುವರು. ನಿವೃತ್ತ ಪ್ರಾಧ್ಯಾಪಕ ಪ್ರೊ.ಎ.ಬಿ.ರಾಮಚಂದ್ರಪ್ಪ ವಿಶೇಷ ಉಪನ್ಯಾಸ ನೀಡಲಿದ್ದಾರೆ.




