ಮಂಗಳೂರು: ಸಂತ ಮದರ್ ತೆರೇಸಾ ವಿಚಾರ ವೇದಿಕೆ, ಮಂಗಳೂರು ಹಾಗೂ ಸಾಮರಸ್ಯ ಮಂಗಳೂರು ಇವರುಗಳ ಜಂಟಿ ಆಶ್ರಯದಲ್ಲಿ ಪ್ರೀತಿ ಹರಡಲಿ ಎಲ್ಲೆಡೆ ಎಂಬ ಘೋಷವಾಕ್ಯದೊಂದಿಗೆ ಮಾನವೀಯತೆಯ ಪ್ರತಿರೂಪ ಸಂತ ಮದರ್ ತೆರೇಸಾರವರ 27ನೇ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ತಾ.03-09-2024ರಂದು ಮಂಗಳವಾರ ಬೆಳಿಗ್ಗೆ 10ಕ್ಕೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸಂವಿಧಾನದ ಆಶಯಗಳಲ್ಲಿ ಪ್ರೀತಿ ಸಹಬಾಳ್ವೆಯ ಪಯಣ ಎಂಬ ವಿಷಯದಲ್ಲಿ ದ.ಕ.ಜಿಲ್ಲಾ ಮಟ್ಟದ ವಿಚಾರ ಸಂಕಿರಣ ಜರುಗಲಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ವಿಚಾರ ಸಂಕಿರಣವನ್ನು ಸಂಸದ ಸಸಿಕಾಂತ್ ಸೆಂಥಿಲ್ ಉದ್ಘಾಟಿಸಲಿದ್ದು, ವಿಷಯ ಮಂಡನೆಯನ್ನು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಮಾಡಲಿದ್ದಾರೆ. ಸಾಹಿತಿಗ ಆಯೆಷಾ ಫರ್ಝಾನಾ ಯು.ಟಿ. ಪ್ರತಿಕ್ರಿಯೆ ನೀಡಲಿದ್ದಾರೆ. ಅಧ್ಯಕ್ಷತೆಯನ್ನು ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೋ ವಹಿಸಲಿದ್ದಾರೆ.
ಅಂದು ಬೆಳಿಗ್ಗೆ 8.30ಕ್ಕೆ ಏಕತಾರಿ ಹಾಡುಗಾರ ನಾದಾ ಮಣಿನಾಲ್ಕೂರು ಹಾಗೂ ಲಿಯೋ ರಾಣಿಪುರರವರಿಂದ ಪ್ರೀತಿಯ ಸಿಂಚನ ಎಂಬ ಸೌಹಾರ್ದ ಗಾಯನ ಕಾರ್ಯಕ್ರಮ ಜರುಗಲಿದೆ.
ಪ್ರೀತಿ ಮತ್ತು ಸೇವೆಯ ಮೂಲಕ ಜಗತ್ತಿಗೆ ಮಹಾತಾಯಿ ಎಂದು ಗರುುತಿಸಿಕೊಂಡಿರುವ ಸಂತ ಮದರ್ ತೆರೇಸಾರವರ ವಿಚಾರಧಾರೆಯನ್ನು ಇಂದಿನ ಯುವ ಪೀಳಿಗೆಗೆ ತಿಳಿಸಿಕೊಡುವ ಮಹತ್ತರ ಜವಾಬ್ದಾರಿಯನ್ನು ಹೊಂದಿದೆ.
ಕಳೆದ 7 ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಸಂತ ಮದರ್ ತೆರೇಸಾ ವಿಚಾರ ವೇದಿಕೆಯಲ್ಲಿ ಸರ್ವ ಧರ್ಮದ ಸೌಹಾರ್ದ ಪ್ರಿಯ ಜನತೆ, ವಿದ್ಯಾರ್ಥಿ, ಯುವಜನ, ಮಹಿಳಾ, ದಲಿತ, ಆದಿವಾಸಿ, ರೈತ, ಕಾರ್ಮಿಕ ಸಂಘಟನೆಗಳ ನಾಯಕರು, ಮಧ್ಯಮ ವರ್ಗದ ನೌಕರರು, ಸಾಹಿತಿಗಳು, ಪ್ರಗತಿಪರ ಚಿಂತಕರು, ಶಿಕ್ಷಣ ತಜ್ಞರು, ವಕೀಲರು, ವೈದ್ಯರು, ಬುದ್ದಿಜೀವಿಗಳನ್ನೊಳಗೊಂಡ ಜಾತ್ಯತೀತ ನೆಲೆಗಟ್ಟಿನ ಮನಸ್ಸುಗಳು ಸೌಹಾರ್ದ ತಂಡವಾಗಿ ವಿವಿಧ ಹಂತದ ಕಾರ್ಯಕ್ರಮಗಳನ್ನು ವರ್ಷವಿಡೀ ಆಯೋಜಿಸಲಾಗುತ್ತದೆ.
ಪ್ರತಿಯೊಂದು ಧರ್ಮದ ಹಬ್ಬಗಳು ಸರ್ವ ಜನತೆಯ ಹಬ್ಬವಾಗಲಿ ಎಂಬ ಆಶಯದೊಂದಿಗೆ ಸೌಹಾರ್ದ ದೀಪಾವಳಿ, ಸೌಹಾರ್ದ ಕ್ರಿಸ್ ಮಸ್, ಸೌಹಾರ್ದ ಇಫ್ತಾರ್ ಕೂಟ ಹಾಗೂ ನಾಡಹಬ್ಬ ದಸರಾವನ್ನು ಸಾಮರಸ್ಯ ದಸರಾವನ್ನಾಗಿ ಆಚರಿಸಲಾಗಿದೆ.
ಮದರ್ ತೆರೇಸಾರವರಿಗೆ ಮಕ್ಕಳ ಮೇಲೆ ಅಪಾರ ಪ್ರೀತಿ ಹೊಂದಿದ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಚಿಣ್ಣರ ಕಲರವ ಎಂಬ ಮಕ್ಕಳ ಸಂತಸ ಕಲಿಕಾ ಕಾರ್ಯಾಗಾರವನ್ನು ಕೂಡ ನಡೆಸಲಾಗಿದೆ. ಸೌಹಾರ್ದತೆ ಹಾಗೂ ಜನತೆಯ ಬದುಕಿನ ಪ್ರಶ್ನೆಗಳು ಎದುರಾದಾಗ ಇತರ ಸಮಾನ ಮನಸ್ಕ ಸಂಘಟನೆಗಳ ಜೊತೆಗೆ ಗುರುತಿಸಿಕೊಂಡು ಶಕ್ತಿಮೀರಿ ಶ್ರಮಿಸಲಾಗಿದೆ.
ಮಂಗಳೂರನ್ನು ಮತ್ತೆ ಸಾಮರಸ್ಯದ ತಾಣವನ್ನಾಗಿಸಲು ಕಳೆದ 3 ವರ್ಷಗಳ ಹಿಂದೆ ಜನ್ಮ ತಾಳಿದ ಸಾಮರಸ್ಯ ಮಂಗಳೂರು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಮಂಗಳೂರಿನ ಜನತೆಯ ಹೃದಯ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಸಾಮರಸ್ಯ ಮಂಗಳೂರು ಜನ್ಮ ತಾಳುವಲ್ಲಿ ಪ್ರಮುಖ ಕಾರಣಕರ್ತರಾದ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ದ.ಕ.ಜಿಲ್ಲೆಯ ಕೊಮುವಾದಿ ರಾಜಕಾರಣವನ್ನು ಕಣ್ಣಾರೆ ಕಂಡು ಬೇಸತ್ತು ಜಿಲ್ಲಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿ, ದೇಶದ ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವುದಾಗಿ ಪ್ರತಿಜ್ಞೆ ಕೈಗೊಂಡ ಮಂಗಳೂರಿನಲ್ಲಿ ಇದೇ ಕಾರ್ಯಕ್ರಮದಲ್ಲಿ ಸಾರ್ವಜನಿಕವಾಗಿ ಅಭಿನಂದಿಸಲಾಗುವುದು.
ಈ ಹಿನ್ನೆಲೆಯಲ್ಲಿ ಎರಡು ಪ್ರಮುಖ ಸಂಘಟನೆಗಳ ಜಂಟಿ ಆಶ್ರಯದಲ್ಲಿ ನಡೆಯುವ ಅತ್ಯಂತ ಮಹತ್ವದ ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಪ್ರಜ್ಞಾವಂತ ಜನತೆ, ಸಾರ್ವಜನಿಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಸಂಘಟಕರು ವಿನಂತಿಸಿದ್ದಾರೆ.




