ಧಾರವಾಡ: 2025-26ನೇ ಸಾಲಿನ ಧಾರವಾಡ ಜಿಲ್ಲಾ ಮಟ್ಟದ ಯುವಜನೋತ್ಸವದ ಸ್ಪರ್ಧೆಗಳನ್ನು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ರಾಷ್ಟ್ರೀಯ ಸೇವಾ ಯೋಜನಾ ಕೋಶ, ಕರ್ನಾಟಕ ವಿಶ್ವವಿದ್ಯಾಲಯ ಮತ್ತು ಜೆ.ಎಸ್.ಎಸ್. ಸಮೂಹ ಸಂಸ್ಥೆಗಳು ವಿದ್ಯಾಗಿರಿ, ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 16, 2025 ರಂದು ಬೆಳಿಗ್ಗೆ 9:30 ಗಂಟೆಗೆ ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್. ಕಾಲೇಜು ಆವರಣದಲ್ಲಿನ ಉತ್ಸವ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಆಸಕ್ತಿಯುಳ್ಳ 15 ರಿಂದ 29 ವರ್ಷ ವಯೋಮಿತಿಯ ಸ್ಪರ್ಧಾಳುಗಳು ಹಾಗೂ ಯುವಕ, ಯುವತಿ ಮಂಡಳದ ಸದಸ್ಯರು, ಕಾಲೇಜು ಯುವಕ, ಯುವತಿಯರು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಬಹುದಾಗಿದೆ. ಅಕ್ಟೋಬರ್ 16, 2025 ರಂದು ಬೆಳಿಗ್ಗೆ 9:30 ರೊಳಗಾಗಿ ಉತ್ಸವ ಕಲಾಕ್ಷೇತ್ರದಲ್ಲಿ ಹೆಸರು ನೊಂದಾಯಿಸಿಕೊಳ್ಳಬೇಕು.
ಸ್ಪರ್ಧೆಗಳು: ಜನಪದ ನೃತ್ಯ, ಜನಪದ ಗೀತೆ, ವಿಜ್ಞಾನ ಮೇಳದ ಪ್ರದರ್ಶನ ಸ್ಪರ್ಧೆಗಳು (ತಂಡಗಳು), ಕಥೆ ಬರೆಯುವುದು, ಚಿತ್ರಕಲೆ, ಕವಿತೆ ಬರೆಯುವುದು (ವೈಯಕ್ತಿಕ) ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಸ್ಪರ್ಧೆಗಳ ನಿಯಮಾವಳಿ ಹಾಗೂ ಷರತ್ತುಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2447424ಗೆ ಸಂಪರ್ಕಿಸಬಹುದು.




