ರಾಷ್ಟ್ರ ಧ್ವಜ ಉತ್ಪಾದನಾ ಕೇಂದ್ರಕ್ಕೆ ಡಿಕೆಶಿ ಭೇಟಿ

5 years ago

ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್  ಹುಬ್ಬಳ್ಳಿಯ ಬೆಂಗೇರಿಯಲ್ಲಿನ ಕರ್ನಾಟಕ ಖಾದಿ ಗ್ರಾಮೋದ್ಯೋಗ ಸಂಯುಕ್ತ ಸಂಘದ ರಾಷ್ಟ್ರಧ್ವಜ ಉತ್ಪಾದನಾ ಕೇಂದ್ರಕ್ಕೆ ಭೇಟಿ ನೀಡಿ ರಾಷ್ಟ್ರಧ್ವಜ ತಯಾರಿಕಾ ಪ್ರಕ್ರಿಯೆಯನ್ನು ವೀಕ್ಷಿಸಿದರು. ರಾಷ್ಟ್ರಧ್ವಜಕ್ಕೆ ಸ್ವತಃ ಇಸ್ತ್ರಿ ಮಾಡುವ ಮೂಲಕ ಆ ಪ್ರಕ್ರಿಯೆಯಲ್ಲಿ ಸಾಂಕೇತಿಕವಾಗಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ 63 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ, 900 ಮಂದಿಗೆ ಉದ್ಯೋಗ ಕಲ್ಪಿಸಿರುವ ಈ ಸಂಸ್ಥೆಯ ಸಿಬ್ಬಂದಿ ಲಾಕ್‌ಡೌನ್ ಪರಿಣಾಮಗಳಿಂದಾಗಿ ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಿದರು.

ಮಾಜಿ ಸಚಿವ ವೀರಣ್ಣ ಮತ್ತಿಕಟ್ಟಿ, ಕುಲದೀಪ್ ರಾಯ್ ಶರ್ಮಾ, ಪ್ರಸಾದ ಅಬ್ಬಯ್ಯ, ನೇರಳಕೇರಿ, ಶರಣಪ್ಪ ಕೋಟಗಿ, ಸದಾನಂದ ಮತ್ತಿತರರು ಜತೆಗಿದ್ದರು.

Leave a Reply