ಬೆಂಗಳೂರು: ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಸುದೀರ್ಘ ಅವಧಿಗೆ ಕೆಲಸ ಮಾಡಿರುವ ಡಿಸಿಎಂ ಡಿಕೆ ಶಿವಕುಮಾರ್ ಇದೀಗ ಪಕ್ಷದ ಅಧ್ಯಕ್ಷ ಸ್ಥಾನ ತೊರೆಯಲು ಸಮ್ಮತಿಸಿದ್ದಾರೆ. ಆದರೆ ಅದಕ್ಕೂ ಮುನ್ನ ನಾಯಕತ್ವ ಬದಲಾವಣೆ ಕುರಿತು ನಿರ್ಧಾರ ಪ್ರಕಟಿಸಬೇಕು ಎಂದು ಹೈಕಮಾಂಡ್ ಮುಂದೆ ಪಟ್ಟು ಹಿಡಿದಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ ಅವರ ಬೀಳುತ್ತಿದ್ದಂತೆ ದೆಹಲಿಗೆ ತೆರಳಿದ ಡಿ ಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ಸುರ್ಜೇವಾಲಾ ಮತ್ತು ಸಂಘಟನಾ ಕಾರ್ಯದರ್ಶಿ ವೇಣುಗೋಪಾಲ್ ಸೇರಿದಂತೆ ಹಲವು ನಾಯಕರ ಜೊತೆ ಸಮಾಲೋಚನೆ ನಡೆಸಿದ್ದಾರೆ. ಈ ವೇಳೆ ಈ ನಾಯಕರು ಪಕ್ಷದ ಅಧ್ಯಕ್ಷ ಸ್ಥಾನ ತೊರೆಯುವ ಕುರಿತಂತೆ ನಿಮ್ಮ ಅಭಿಪ್ರಾಯ ಏನು ಎಂದು ಕೇಳಿದ್ದು, ಅದಕ್ಕೆ ತಾವು ಸಿದ್ಧ. ಆದರೆ ಅದಕ್ಕೂ ಮುನ್ನ ನಾಯಕತ್ವ ಬದಲಾವಣೆ ಕುರಿತಂತೆ ಹೈಕಮಾಂಡ್ ತನ್ನ ನಿಲುವು ಸ್ಪಷ್ಟಪಡಿಸಬೇಕು ಎಂದು ತಿಳಿಸಿರುವುದಾಗಿ ಉನ್ನತ ಮೂಲಗಳು ಹೇಳಿವೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರ ಎರಡೂವರೆ ವರ್ಷಗಳ ಅಧಿಕಾರ ಅವಧಿಯನ್ನು ಪೂರ್ಣಗೊಳಿಸಿದೆ. ಉಳಿದಿರುವ ಅಧಿಕಾರ ಅವಧಿಗೆ ತಮ್ಮನ್ನು ಮುಖ್ಯಮಂತ್ರಿ ಹುದ್ದೆಗೆ ಪರಿಗಣಿಸಬೇಕು ಎಂದು ಮನವಿ ಮಾಡಿರುವ ಅವರು, ಈ ವಿಚಾರದಲ್ಲಿ ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ತಾವು ಬದ್ಧ ಎಂದು ಹೇಳಿರುವುದಾಗಿ ಗೊತ್ತಾಗಿದೆ.
ತಾವು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಗಂಟು ಬಿದ್ದಿಲ್ಲ. ಆ ಹುದ್ದೆ ತೊರೆಯುವುದಾಗಿ ಹಲವಾರು ಬಾರಿ ಹೇಳಿದ್ದೇನೆ. ಈಗಲೂ ಅದಕ್ಕೆ ಬದ್ಧನಿದ್ದೇನೆ. ಆದರೆ ಅದಕ್ಕೂ ಮುನ್ನ ತಮಗೆ ನಾಯಕತ್ವ ನೀಡುವ ಕುರಿತಾಗಿ ಹೈಕಮಾಂಡ್ ನಿಲುವು ಸ್ಪಷ್ಟಪಡಿಸಬೇಕು ಎಂದು ಹೇಳಿರುವುದಾಗಿ ತಿಳಿದುಬಂದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಅಧಿವೇಶನದವರೆಗೆ ತಮಗೆ ನಾಯಕತ್ವ ವಹಿಸಲು ಬಿಡಬೇಕು. ಬಜೆಟ್ ಮಂಡನೆಯಾದ ನಂತರ ತಾವು ಅಧಿಕಾರದಿಂದ ನಿರ್ಗಮಿಸುತ್ತೇನೆ. ಅದಕ್ಕೆ ಪೂರಕವಾಗಿ ಮಂತ್ರಿ ಮಂಡಲ ಪುನಾರಚನೆ ಮತ್ತು ಹೊಸದಾಗಿ ಎರಡು ಉಪಮುಖ್ಯಮಂತ್ರಿಗಳ ನೇಮಕಕ್ಕೆ ಅವಕಾಶ ನೀಡಬೇಕು ಎಂದು ರಾಹುಲ್ ಗಾಂಧಿ ಅವರಲ್ಲಿ ಮಾಡಿರುವ ಮನವಿ ಕುರಿತಾಗಿ ವೇಣುಗೋಪಾಲ್, ಡಿ ಕೆ ಶಿವಕುಮಾರ್ ಅವರಿಗೆ ತಿಳಿಸಿದ್ದಾರೆ. ಇದಕ್ಕೆ ಬಹುತೇಕ ಸಮ್ಮತಿ ವ್ಯಕ್ತಪಡಿಸಿರುವ ಡಿಕೆ ಶಿವಕುಮಾರ್, ಈ ತೀರ್ಮಾನ ಪ್ರಕಟಿಸುವ ಮುನ್ನ ತಮ್ಮ ಹುದ್ದೆಯ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿರುವುದಾಗಿ ತಿಳಿದುಬಂದಿದೆ.
ಡಿ ಕೆ ಶಿವಕುಮಾರ್ ಹಾಕಿರುವ ಈ ಪಟ್ಟಿನಿಂದಾಗಿ ಒತ್ತಡಕ್ಕೆ ಸಿಲುಕಿರುವ ಉಭಯ ನಾಯಕರು ಈ ವಿಚಾರದ ಕುರಿತು ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಜೊತೆ ಚರ್ಚಿಸುವುದಾಗಿ ಹೇಳಿದ್ದಾರೆ ಎಂದು ಗೊತ್ತಾಗಿದೆ.




